ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಮರ್ಯಾದೆ ಹತ್ಯೆ ನಿಷೇಧಿಸುವ ಇವ ನಮ್ಮವ ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ

ಬಸವಾದಿ ಶರಣರು ಕಾಣಬಯಸಿದ ಸಮಸಮಾಜ ನಿರ್ಮಾಣಕ್ಕೆ ನಮ್ಮ ಸರ್ಕಾರ ಬದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ಸಾಮರಸ್ಯವನ್ನು ಎತ್ತಿಹಿಡಿಯುವ ಮತ್ತು ಮರ್ಯಾದಾ ಹತ್ಯೆಯಂತಹ ಅಮಾನವೀಯ ಕೃತ್ಯಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಮಹತ್ವದ ಹೆಜ್ಜೆಯನ್ನಿಟ್ಟಿದೆ. 

ಬಸವಾದಿ ಶರಣರು ಕಾಣಬಯಸಿದ ಸಮಸಮಾಜ ನಿರ್ಮಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದ್ದು, ಇವ ನಮ್ಮವ ಇವ ನಮ್ಮವ ಮಸೂದೆಯ ಮೂಲಕ ಸಾಮಾಜಿಕ ಪರಿವರ್ತನೆಗೆ ಹೊಸ ವೇಗ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಕರ್ನಾಟಕ ವಿವಾಹದಲ್ಲಿ ಆಯ್ಕೆಯ ಸ್ವಾತಂತ್ರ್ಯ ಹಾಗೂ ಮರ್ಯಾದೆ ಮತ್ತು ಸಂಪ್ರದಾಯದ ಹೆಸರಿನಲ್ಲಿ ಅಪರಾಧಗಳ ಪ್ರತಿಬಂಧಕ ಮತ್ತು ನಿಷೇಧ (ಇವ ನಮ್ಮವ ಇವ ನಮ್ಮವ) ವಿಧೇಯಕ-2026 ಅನ್ನು ವಿಧಾನ ಮಂಡಲದ ಉಭಯ ಸದನಗಳಲ್ಲಿ ಮಂಡಿಸಿ, ಅಂಗೀಕರಿಸಿತು.

ಅಂತರ್ಜಾತಿ ವಿವಾಹಗಳ ಮೂಲಕ ಅವರ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ತಮ್ಮ ಸಾಂವಿಧಾನಿಕ ಹಕ್ಕನ್ನು ಚಲಾಯಿಸುವವರ, ವಿಶೇಷವಾಗಿ ಯುವ ವಯಸ್ಕರ ವಿರುದ್ಧ ಮರ್ಯಾದೆಗೇಡು ಹತ್ಯೆಗಳನ್ನು ಒಳಗೊಂಡಂತೆ ಕ್ರೂರ ಸ್ವರೂಪದ ಹಿಂಸಾಚಾರಗಳು ವ್ಯಕ್ತವಾಗುತ್ತಿರುವುದು ಮುಂದುವರಿಯುತ್ತಿದ್ದು, ಕೊಲೆ, ಹಲ್ಲೆ, ಜೀವಂತ ಹೆಣ್ಣುಮಕ್ಕಳಿಗೆ ಮರಣದ ಆಚರಣೆಗಳನ್ನು (ತಿಥಿ) ಮಾಡುವುದು, ಕಾನೂನುಬದ್ಧ ಪಿತ್ರಾರ್ಜಿತ ಹಕ್ಕುಗಳನ್ನು ನಿರಾಕರಿಸುವುದು, ಸಾಮಾಜಿಕ ಬಹಿಷ್ಕಾರ, ವಿಷಪ್ರಾಶನದ ಮೂಲಕ ಅಥವಾ ಇತರ ನಿಗೂಢ ವಿಧಾನಗಳ ಮೂಲಕ ಹಾನಿಯನ್ನುಂಟು ಮಾಡುವುದು ಹೀಗೆ ಎಲ್ಲಾ ವಿಧದ ಅಮಾನವೀಯ ಕೃತ್ಯಗಳ ವಿರುದ್ಧ ಕಾನೂನಾತ್ಮಕ ರಕ್ಷಣೆ ದೊರಕಲಿದೆ ಎಂದು ಹೇಳಿದರು. 

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ