ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಮಾರ್ಚ್ 28: ಈ ವರ್ಷದಿಂದಲೇ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ತೃತೀಯ ಭಾಷೆ ಹಿಂದಿಯನ್ನು ಪರಿಗಣಿಸದಿರಲು ತೀರ್ಮಾನ ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಶಿಕ್ಷಣದಲ್ಲಿ ದ್ವಿಭಾಷಾ ನೀತಿ ಜಾರಿ ಮತ್ತು ಖಾಸಗಿ ಶಾಲೆಗಳು ಈ ನಿರ್ಧಾರವನ್ನು ವಿರೋಧಿಸುತ್ತಿರುವ ಬಗ್ಗೆ ಪತ್ರಕರ್ತರಿಗೆ ಪ್ರತಿಕ್ರಿಯೆ ನೀಡಿ, ಈ ವರ್ಷದಿಂದಲೇ ತೃತೀಯ ಭಾಷೆ ಹಿಂದಿಯನ್ನು ಅಂಕಗಳಿಗೆ ಪರಿಗಣಿಸದೇ, ಎಸ್‌ಎಸ್‌ಎಲ್‌ಸಿಯಲ್ಲಿ 625 ಅಂಕಗಳನ್ನು 525 ಕ್ಕೆ ನಿಗದಿಪಡಿಸಲು ತೀರ್ಮಾನಿಸಲಾಗಿದೆ . ಸರ್ಕಾರದ ಯಾವುದೇ ತೀರ್ಮಾನಕ್ಕೆ ಬೆಂಬಲ ಇಲ್ಲವೇ ವಿರೋಧವೂ ವ್ಯಕ್ತವಾಗಬಹುದು. ಹಿಂದಿ ಭಾಷೆಯನ್ನು ಕಲಿಯುವುದರಲ್ಲಿ ಸರ್ಕಾರದ ವಿರೋಧವಿಲ್ಲ , ಆದರೆ ಪರೀಕ್ಷೆಯ ಅಂಕಗಳಿಗೆ ಕಡ್ಡಾಯವಾಗಬಾರದು ಎಂದರು.

ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ವಿಶ್ವಾಸ

ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಯ ಬಗ್ಗೆ ಪ್ರತಿಕ್ರಿಯಿಸಿ, ದಾವಣಗೆರೆ ಹಾಗೂ ಬಾಗಲಕೋಟೆಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವ ವಿಶ್ವಾಸವಿದ್ದು, ಸೋಮವಾರದಿಂದ ಪ್ರಚಾರ ಕಾರ್ಯದಲ್ಲಿ ಭಾಗಿಯಾಗಿ, ನಂತರ ಏಪ್ರಿಲ್ 5 ರಂದು ಕೇರಳ ರಾಜ್ಯದ ಚುನಾವಣೆಯ ಪ್ರಚಾರಕ್ಕೂ ತೆರಳುವುದಾಗಿ ತಿಳಿಸಿದರು. ಈ ಹಿಂದೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಿತ್ತು. ಇದು ನಮ್ಮ ಮುಂದಿನ ಗೆಲುವಿನ ದಿಕ್ಸೂಚಿಯಾಗಿದೆ. ದಾವಣೆಗೆರೆಯಲ್ಲಿ ಯಾವುದೇ ಗೊಂದಲವಿಲ್ಲ ಎಂದರು.

ಉಪಚುನಾವಣೆಗೂ, ಸಿಎಂ ಸ್ಥಾನ ವಿಚಾರಕ್ಕೂ ಸಂಬಂಧವಿಲ್ಲ

ಈ ಉಪಚುನಾವಣೆಗಳ ಗೆಲುವು, ಸಿಎಂ ಸ್ಥಾನದಲ್ಲಿ ಎದ್ದಿರುವ ಗೊಂದಲಕ್ಕೆ ತೆರೆ ಎಳೆಯಲಿದೆಯೇ ಎಂಬುದಕ್ಕೆ ಪ್ರತಿಕ್ರಯಿಸಿ, ಸಿಎಂ ಸ್ಥಾನ ವಿಚಾರಕ್ಕೂ , ಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಪಕ್ಷದ ಹೈಕಮಾಂಡ್ ಅನುಮತಿಸಿದರೆ, ಇನ್ನೆರೆಡು ವರ್ಷವೂ ನಾನೇ ಬಜೆಟ್ ಮಂಡಿಸುತ್ತೇನೆ. ಹೈಕಮಾಂಡ್ ಸೂಚನೆಯ ಮೇರೆಗೆ ನಾವು ನಡೆಯುತ್ತೇವೆ ಎಂದರು.

ಡ್ರಗ್ಸ್ ದಂಧೆ: ತಪ್ಪಿತಸ್ಥರ ವಿರುದ್ಧ ಕ್ರಮ

ಮೈಸೂರಿನಲ್ಲಿ ಡ್ರಗ್ಸ್ ದಂಧೆಯ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಸರ್ಕಾರ ರಾಜ್ಯದಲ್ಲಿ ಡ್ರಗ್ಸ್ ದಂಧೆಯ ವಿರುದ್ಧ ಸಮರ ಸಾರಿದೆ. ಕರ್ನಾಟಕವನ್ನು ಡ್ರಗ್ಸ್ ಮುಕ್ತಗೊಳಿಸುವುದು ನಮ್ಮ ಉದ್ದೇಶ. ಮೈಸೂರಿನಲ್ಲಿ ಡ್ರಗ್ಸ್ ಜಾಲವನ್ನು ಪತ್ತೆಹಚ್ಚಿರುವ ಬಗ್ಗೆ ತಿಳಿದುಬಂದಿದ್ದು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಮೈಸೂರಿನಲ್ಲಿ ಟ್ರಾಫಿಕ್ ಸಿಗ್ನಲ್ ಗಳು ಹೆಚ್ಚಿ, ಜನರಿಗೆ ತೊಂದರೆ ಆಗುತ್ತಿರುವ ಬಗ್ಗೆ ದೂರುಗಳು ಬರುತ್ತಿರುವ ಬಗ್ಗೆ ಉತ್ತರಿಸಿ, ಟ್ರಾಫಿಕ್ ಸಿಗ್ನಲ್ ಗಳನ್ನು ಸುಗಮ ವಾಹನ ಸಂಚಾರಕ್ಕಾಗಿ ಅಳವಡಿಸಲಾಗಿದೆ. ಈ ಬಗ್ಗೆ ಮಾಹಿತಿ ಪಡೆದು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ