ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಇವ ನಮ್ಮವ ಎಂಬ ಬಸವಣ್ಣನ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಹಾವೇರಿ: ಇಲ್ಲಿನ ರಾಣೇಬೆನ್ನೂರಿನ ನಿಟ್ಟೂರು ಗ್ರಾಮದಲ್ಲಿ ಆಯೋಜಿಸಿದ್ದ ಶ್ರೀ ಬೀರೇಶ್ವರ ಸ್ವಾಮಿ ದೇವಸ್ಥಾನದ 50ನೇ ವರ್ಷದ ಸುವರ್ಣ ಮಹೋತ್ಸವ ಹಾಗೂ ಶ್ರೀ ಭಕ್ತ ಕನಕದಾಸರ ಮಹಾದ್ವಾರದ ಉದ್ಘಾಟನೆ ಹಾಗೂ ಧರ್ಮಸಭೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡು, ಮಾತನಾಡಿದ ಅವರು, ನಿಟ್ಟೂರಿನ ದೇವಸ್ಥಾನಕ್ಕೆ ವಿವಿಧ ಜಿಲ್ಲೆಗಳಿಂದ ಭಕ್ತರು ಆಗಮಿಸುತ್ತಾರೆ. ಬೀರಲಿಂಗೇಶ್ವರ ದೇವಸ್ಥಾನ ನಿಟ್ಟೂರಿಗೆ ಮಾತ್ರ ಸೀಮಿತವಾಗಿಲ್ಲ. ದೇವನೊಬ್ಬ ನಾಮ ಹಲವು ಎಂದು ಅರ್ಥೈಸಿಕೊಳ್ಳುವಂತೆ, ಭಗವಂತ ವಿಶ್ವವ್ಯಾಪಿಯಾಗಿದ್ದಾನೆ ಎಂದು ತಿಳಿಸಿದರು. 

ನಮ್ಮ ನಾಡು, ನಮ್ಮ ದೇಶ ಸರ್ವಜನಾಂಗದ ಶಾಂತಿಯ ತೋಟವಾಗಬೇಕೆಂದು ಬುದ್ಧ, ಬಸವ, ಮಹಾತ್ಮ ಗಾಂಧಿ, ಅಂಬೇಡ್ಕರ್, ಕುವೆಂಪು ಬಯಸಿದ್ದರು. ಅದನ್ನೇ ನಮ್ಮ ಸರ್ಕಾರ ಪಾಲಿಸುತ್ತಿದೆ.

ಕೇವಲ 13 ಕುರುಬರ ಕುಟುಂಬಗಳಿರುವ ಊರಿನಲ್ಲಿ ಬೀರಲಿಂಗೇಶ್ವರ ದೇವಾಲಯ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿರುವುದು ನಿಟ್ಟೂರಿನ ಸಾಮರಸ್ಯಕ್ಕೆ ದ್ಯೋತಕವಾಗಿದೆ ಎಂದರು. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಎಂಬ ವಿಚಾರಗಳು ಸಂವಿಧಾನದ ಆಧಾರ ಸ್ತಂಭಗಳು. ದೇವರ ಪೂಜೆ ಮಾಡಬೇಕು ಆದರೆ ಮೂಢ ನಂಬಿಕೆಗಳನ್ನು ಇಟ್ಟುಕೊಳ್ಳಬಾರದು. ಬಸವಣ್ಣ ಕರ್ಮ ಸಿದ್ಧಾಂತವನ್ನು ತಿರಸ್ಕರಿಸಿದ್ದರು ಎನ್ನುವುದನ್ನು ನಾವು ನೀವು ಮರೆಯಬಾರದು ಎಂದರು. 

ಇಸ್ಲಾಂ, ಹಿಂದೂ, ಕ್ರಿಶ್ಚಿಯನ್ ಧರ್ಮಗಳು ಜನರನ್ನು ಪ್ರೀತಿಸಬೇಕೆಂದು ಬೋಧಿಸುತ್ತವೆ. ಇದಾದಾಗ ಮಾತ್ರ ಮಾನವ ಸಮಾಜ ನಿರ್ಮಾಣ ಸಾಧ್ಯ.‌ ಸೈದ್ಧಾಂತಿಕವಾಗಿ ಯಾರೇ ನಮ್ಮ ವಿರೋಧಿಗಳಾದರೂ ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು ಎಂದರು.  ಕುಲದ ನೆಲೆಯನ್ನು ಬಲ್ಲಿರಾ ಎಂಬ ಕನಕದಾಸರ ಸಾಲು ಹಾಗೂ ಇವ ನಮ್ಮವ ಎಂಬ ಬಸವಣ್ಣನ ತತ್ವವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಉನ್ನತ ವಿದ್ಯೆ ಕಲಿತವರೇ ಜಾತಿ ವ್ಯವಸ್ಥೆಯನ್ನು ಪೋಷಿಸುವುದು ನಮ್ಮ ಸಮಾಜದ ದುರಂತ. ದಯೆ, ಕರುಣೆಗಳೇ ಧರ್ಮದ ಮೂಲವಾಗಬೇಕು ಎಂಬ ಬಸವಣ್ಣನವರ ಮಾತುಗಳನ್ನು ಪಾಲಿಸಬೇಕು. 

ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ನಮ್ಮ ಸರ್ಕಾರ ಘೋಷಣೆ ಮಾಡಿದೆ. ನಮ್ಮ ಸರ್ಕಾರ ಸರ್ವ ಜನಾಂಗದ ಶಾಂತಿಯ ತೋಟವಾಗಿಸಬೇಕೆನ್ನುವ ಉದ್ದೇಶ ಹೊಂದಿದ್ದು, ನಾನೂ ಕೂಡ ಬಸವಣ್ಣನ ಅನುಯಾಯಿ. ಈ ಬಾರಿ ಮಳೆ ಕೊರತೆಯಾಗಲಿದೆ ಎಂಬ ಮುನ್ಸೂಚನೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿಸಲಾಗಿದೆ. ರಾಣೇಬೆನ್ನೂರಿನ ವರ್ತುಲ ರಸ್ತೆ ಹಾಗೂ ಸಮುದಾಯ ಭವನಕ್ಕೆ ಅನುದಾನ ನೀಡಲಾಗುವುದು ಎಂದು ತಿಳಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ