ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ವಿರೋಧ ಪಕ್ಷಗಳು ಅನಗತ್ಯವಾಗಿ ಟೀಕೆ ಮಾಡುತ್ತಿದ್ದು ಅದರಲ್ಲಿ ಸತ್ಯಾಂಶವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು : ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ ಪರವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಜಿಲ್ಲೆಯ ಪಿರಿಯಾಪಟ್ಟಣದ ಪಾರೆಕೊಪ್ಪಲಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ವಿವಿಧ ಇಲಾಖೆಗಳಡಿ ಕೈಗೊಂಡಿರುವ ₹419.78 ಕೋಟಿಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ ಮಾತನಾಡಿದರು. ರಾಜ್ಯದ ಎಲ್ಲ ಕ್ಷೇತ್ರಗಳಲ್ಲೂ ಅಭಿವೃದ್ಧಿ ಕಾಮಗಾರಿಗಳು ಆಗುತ್ತಿದ್ದು, ಈ ಬಾರಿಯ ಆಯವ್ಯಯದಲ್ಲಿ ಸುಮಾರು 82 ಸಾವಿರ ಕೋಟಿ ರೂ.ಗಳನ್ನು ಅಭಿವೃದ್ಧಿ ಕೆಲಸಗಳಿಗೆ ಮೀಸಲಿರಿಸಿದ್ದೇವೆ ಎಂದರು. 

ಕುವೆಂಪು ಅವರು ವಿಶ್ವಮಾನವರಾಗುವ ಪ್ರಯತ್ನವನ್ನು ಮಾಡಿದ್ದರು. ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟವಾಗಿಸಬೇಕು ಎಂದು ಬಯಸಿದ್ದರು.  ಎಲ್ಲರೂ ಮನುಷ್ಯರಾಗಿ ಬಾಳಬೇಕೆನ್ನುವ ಆಶಯವನ್ನು ಹೊಂದಿದ್ದ ಕುವೆಂಪು ಅವರ ಭವನ ಇಲ್ಲಿ ನಿರ್ಮಾಣವಾಗುತ್ತಿರುವುದು ಸ್ವಾಗತಾರ್ಹ ಎಂದರು. 

ಬೆಟ್ಟದಪುರ ಗ್ರಾಮದ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನ ಬೆಟ್ಟಕ್ಕೆ ಹೋಗುವ ರಸ್ತೆ ನಿರ್ಮಾಣ ಕಾಮಗಾರಿಯನ್ನು 50 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗಿದ್ದು, ಇದರಿಂದ ಸಹಸ್ರಾರು ಭಕ್ತರಿಗೆ ಅನುಕೂಲವಾಗಲಿದೆ. ಸಚಿವರಾದ ವೆಂಕಟೇಶ್ ಅವರು ಪಿರಿಯಾಪಟ್ಟಣದ ಶಾಸಕರಾದ ನಂತರ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ.‌ ಅವರ ಶ್ರಮ ಶ್ಲಾಘನೀಯ ಎಂದರು.

ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದ್ದು ಕೊಟ್ಟ ಭರವಸೆಗಳನ್ನು ಈಡೇರಿಸಿದ್ದೇವೆ. ಮೂರು ವರ್ಷಗಳಲ್ಲಿ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು ಮುಂದೆಯೂ ಈ ಯೋಜನೆಗಳನ್ನು ಮುಂದುವರೆಸಲಾಗುವುದು. ನಮ್ಮ ಸರ್ಕಾರ ಅಭಿವೃದ್ಧಿಗೂ ಹಣವನ್ನು ಮೀಸಲಿರಿಸಿದೆ ಎನ್ನಲು ಇಂದು ಶಂಕುಸ್ಥಾಪನೆಯಾಗಿರುವ 419.78 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳೇ ಸಾಕ್ಷಿ ಎಂದು ತಿಳಿಸಿದರು.

ವಿರೋಧ ಪಕ್ಷಗಳು ಅನಗತ್ಯವಾಗಿ ಟೀಕೆ ಮಾಡುತ್ತಿದ್ದು ಅದರಲ್ಲಿ ಸತ್ಯಾಂಶವಿಲ್ಲ. ಟೀಕೆಗಳು ವಾಸ್ತವದ ನೆಲೆಗಟ್ಟಿನಲ್ಲಿರಬೇಕು. ಸುಳ್ಳು ಹೇಳುವುದನ್ನೇ ಕಸಬು ಮಾಡಿಕೊಳ್ಳದೆ ಕೈಗೊಂಡಿರುವ ಕೆಲಸಗಳ ಬಗ್ಗೆ ಮಾತನಾಡಬೇಕು. ಅವರು ಅಧಿಕಾರದಲ್ಲಿದ್ದಾಗ ನಾಲ್ಕು ವರ್ಷಗಳ ಕಾಲ ಏನು ಮಾಡಿದ್ದಾರೆಂದು ಜನರ ಮುಂದಿಡಬೇಕು. ನಾವು ಅಭಿವೃದ್ಧಿ ಕಾರ್ಯಗಳ ಮೂಲಕವೇ ಬಿಜೆಪಿಯ ಅಪಪ್ರಚಾರಕ್ಕೆ ಉತ್ತರ ಕೊಡುತ್ತಿದ್ದೇವೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ