ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಬಸವಣ್ಣನವರ ವಿಚಾರಗಳನ್ನು ನಮ್ಮ ಸರ್ಕಾರ ಅನುಸರಿಸುತ್ತಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಜಿಲ್ಲಾ ಬಸವ ದಳಗಳ ಒಕ್ಕೂಟ ಆಯೋಜಿಸಿದ್ದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಸಿದ್ದರಾಮಯ್ಯ ಅವರು ಭಾಗವಹಿಸಿ ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

ಬಸವಣ್ಣನವರು ಸಮಾಜದಲ್ಲಿ ಜಾತಿ-ವರ್ಣ ವ್ಯವಸ್ಥೆಗಳ ವಿರುದ್ಧ ಹೋರಾಡಿದರು. ಮೂಢನಂಬಿಕೆಗಳ ವಿರುದ್ಧ ಧ್ವನಿ ಎತ್ತಿ, ಕರ್ಮ ಸಿದ್ಧಾಂತವನ್ನು ಅಲ್ಲಗಳೆದಿದ್ದರು. ಸಾವಿರಾರು ವರ್ಷಗಳಿಂದ ಶೋಷಿತ ವರ್ಗಗಳು ಅಕ್ಷರ ಸಂಸ್ಕೃತಿಯಿಂದ ವಂಚಿತವಾಗಿತ್ತು. ಬಸವಾದಿ ಶರಣರು ವೈದಿಕ ಧರ್ಮಕ್ಕೆ ಪರ್ಯಾಯವಾಗಿ ಲಿಂಗಾಯತ ಧರ್ಮಕ್ಕೆ ನಾಂದಿ ಹಾಡಿದರು. ವೈದಿಕ ಧರ್ಮದಲ್ಲಿ ಚರ್ತುವರ್ಣ ವ್ಯವಸ್ಥೆಯಿತ್ತು. ಆದ್ದರಿಂದ ಹನ್ನರೆಡನೇ ಶತಮಾನದಲ್ಲಿ ಸಮಾನತೆ, ಮಾನವೀಯತೆಯಿಂದ ಕೂಡಿದ ಲಿಂಗಾಯತ ಧರ್ಮವನ್ನು ಸ್ಥಾಪಿಸಲಾಯಿತು ಎಂದರು.

 ವೈರುಧ್ಯತೆಯ ಸಮಾಜದಲ್ಲಿ ಬದಲಾವಣೆ ತರಲು ಬುದ್ಧ, ಬಸವಾದಿ ಶರಣರು ಶ್ರಮಿಸಿದ್ದರು. ಆದರೂ ಇಂದಿಗೂ ಜಾತಿವ್ಯವಸ್ಥೆ ಪ್ರಚಲಿತವಾಗಿದೆ. ಭಾರತದ ಜಾತಿ ವ್ಯವಸ್ಥೆಗೆ ಚಲನೆಯಿಲ್ಲ. ಎಲ್ಲರಿಗೂ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಶಕ್ತಿ ದೊರಕಿದಾಗ ಮಾತ್ರ ಚಲನೆಯಿಲ್ಲದ ಜಾತಿವ್ಯವಸ್ಥೆಯಲ್ಲಿ ಬದಲಾವಣೆ ತರಲು ಸಾಧ್ಯ. ಇವನಾರವ ಇವನಾರವ ಎನ್ನುವ ಬದಲು ಇವ ಇವ ನಮ್ಮವ ಎನ್ನುವ ವ್ಯವಸ್ಥೆ ಬರುವವರೆಗೂ ಬಸವ ವಿಚಾರಗಳು ಪ್ರಸ್ತುತವಾಗಿರುತ್ತವೆ. 

ಬಸವಣ್ಣನವರು ಕಾಯಕ ಮತ್ತು ದಾಸೋಹ ತತ್ವವನ್ನು ವಿಶ್ವಕ್ಕೆ ಪರಿಚಯಿಸಿ, ಎಲ್ಲಾ ವೃತ್ತಿಗಳೂ ಘನತೆಯುಳ್ಳದ್ದು ಎಂದಿದ್ದರು. ಉತ್ಪಾದನೆಯಾದ ಸಂಪತ್ತನ್ನು ಸಮಾನವಾಗಿ ಹಂಚಿಕೊಳ್ಳುವುದೇ ಕಾಯಕ ಮತ್ತು ದಾಸೋಹದ ಮೂಲಮಂತ್ರ. ಡಾ.ಬಿ.ಆರ್.ಅಂಬೇಡ್ಕರ್ ರವರು ರಚಿಸಿದ ಸಂವಿಧಾನ ಜಾರಿಗೆ ಬರುವ ಮುಂಚೆ ಮನುಶಾಸ್ತ್ರ ಜಾರಿಯಲ್ಲಿತ್ತು. ಆದ್ದರಿಂದ ಅವರು ’ಹಿಂದು ಧರ್ಮವನ್ನು ಸುಧಾರಿಸಲು ಸಾಧ್ಯವಾಗಲಿಲ್ಲ’ವೆಂದು ಮನುಶಾಸ್ತ್ರವನ್ನು ಸುಡುತ್ತೇನೆ ಎಂದಿದ್ದರು. ಸಮಾಜದ ಅಶಕ್ತರ ಮೇಲೆ ನಡೆದ ಅನ್ಯಾಯಗಳ ಇತಿಹಾಸದ ಬಗ್ಗೆ ಅರಿವಿಲ್ಲದವರು ಇತಿಹಾಸವನ್ನು ನಿರ್ಮಿಸಲು ಸಾಧ್ಯವಿಲ್ಲವೆಂದರು. 

ಸಮಾಜದಲ್ಲಿ ಅಸಮಾನತೆಯನ್ನು ನಿರಂತರಗೊಳಿಸಲು ಪಟ್ಟಭದ್ರಹಿತಾಸಕ್ತಿಗಳು ಪ್ರಯತ್ನಿಸುತ್ತಿವೆ. ಜಾತಿವ್ಯವಸ್ಥೆ ನಿರ್ಮೂಲನೆಗೆ ವೈಚಾರಿಕ – ವೈಜ್ಞಾನಿಕ ಶಿಕ್ಷಣ ಅಗತ್ಯ. ಆದ್ದರಿಂದ ಯುವಜನತೆ ಮೂಢನಂಬಿಕೆಗಳಿಗೆ ಬಲಿಯಾಗಬಾರದು ಎಂದರು.

 ಬಸವ ಭವನಕ್ಕೆ 5 ಕೋಟಿ ರೂ.ಗಳ ಅನುದಾನ ನೀಡಲಾಗುವುದು. ಬಸವಣ್ಣಪಥದಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನ ಮಾಡುವ ಬಗ್ಗೆ ಶಪಥ ಮಾಡಬೇಕು. ನಮ್ಮ ಸರ್ಕಾರ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಫೋಟೋಗಳನ್ನು ಕಡ್ಡಾಯ ಮಾಡಿದ್ದಲ್ಲದೆ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದೇವೆ. ಬಸವಣ್ಣನವರ ಕರ್ಮ ಭೂಮಿ ಅನುಭವ ಮಂಟಪದ ಪುನ: ಸ್ಥಾಪನೆಗೆ ಗೋ.ರು.ಚನ್ನಬಸಪ್ಪನವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ, ಅದರ ವರದಿಯನ್ವಯ ಅನುದಾನ ನೀಡಲಾಗಿದೆ. ಈ ವರ್ಷದ ಕೊನೆಯಲ್ಲಿ ಪೂರ್ಣಗೊಳ್ಳುವ ಬಗ್ಗೆ ಭರವಸೆಯಿದೆ. ಎಮದರು 

ಬಸವಣ್ಣನವರ ವಿಚಾರಗಳನ್ನು ನಮ್ಮ ಸರ್ಕಾರ ಅನುಸರಿಸುತ್ತಿದೆ. ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶವನ್ನು ಹೊಂದಿದೆ ಎಂದು ತಿಳಿಸಿದರು. 

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ