ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಯಾವ ಕ್ಷೇತ್ರವೂ ಸಹಕಾರ ಕ್ಷೇತ್ರದಿಂದ ಹೊರತಾಗಿರಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಯಾವ ಕ್ಷೇತ್ರವೂ ಸಹಕಾರ ಕ್ಷೇತ್ರದಿಂದ ಹೊರತಾಗಿರಲು ಸಾಧ್ಯವಿಲ್ಲ. 2023 ರಲ್ಲಿ ಕಟ್ಟಡಕ್ಕೆ ಭೂಮಿ ಪೂಜೆಯನ್ನು ನಾನೇ ನೆರವೇರಿಸಿದ್ದೆ. ಮೂರು ವರ್ಷಗಳಲ್ಲಿ 19.43 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ ಎನ್ನುವುದು ಸಂತಸದ ವಿಚಾರ. ನೆಹರೂ ಅವರು ಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ ಒಂದು ಊರಿನಲ್ಲಿ ಒಂದು ಶಾಲೆ, ಪಂಚಾಯತಿ ಮತ್ತು ಸಹಕಾರ ಸಂಘ ಇರಲೇಬೇಕು, ಆಗ ಮಾತ್ರ ಆ ಊರಿನ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ರಾಜ್ಯ ಸಹಕಾರ ಸಂಘಗಳ ನಿಬಂಧಕರ ನೂತನ ಆಡಳಿತ ಕಚೇರಿ ಸಹಕಾರ ಸಮೃದ್ಧಿ ಸೌಧವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಪ್ರಸ್ತುತ ಹಾಲಿನ ಸೊಸೈಟಿಗಳಾದ ನಂತರ ಪ್ರತಿ ಊರಿನಲ್ಲಿ ಇದು ಸಾಧ್ಯವಾಗಿದೆ. ಎಲ್ಲರಿಗಾಗಿ ನಾನು, ನನಗಾಗಿ ಎಲ್ಲರೂ ಎಂಬ ಸಹಕಾರಿ ತತ್ವದಡಿ ರಾಜ್ಯ ಅಭಿವೃದ್ಧಿಯಾಗುತ್ತಿದೆ. ರೈತರ ಬೆಳವಣಿಗೆಗೆ ಸಹಕಾರ ಇಲಾಖೆ ಕಾರ್ಯ ನಿರ್ವಹಿಸಬೇಕು. 60% ಜನ ಗ್ರಾಮೀಣ ಭಾಗದಲ್ಲಿ ವಾಸಿಸುತ್ತಿದ್ದು, ಗ್ರಾಮದ ಜನರಿಗೆ ಅಗತ್ಯ ಸೌಲಭ್ಯಗಳನ್ನು ಸಹಕಾರಿ ಸಂಘಗಳ ಮೂಲಕ ನೀಡಲಾಗುತ್ತಿದೆ. ಹಾಲಿನ ಸೊಸೈಟಿಗಳು ಬಂದ ನಂತರ ರೈತರ ಪರಿಸ್ಥಿತಿ ಉತ್ತಮವಾಗಿದ್ದು, ದಿನವೊಂದಕ್ಕೆ 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ಅತ್ಯಂತ ಲಾಭದಾಯಕವಾದ ಉಪಕಸುಬಾಗಿ ಸಹಕಾರ ಕ್ಷೇತ್ರದಿಂದ ಸಾಧ್ಯವಾಗಿದೆ.

ಹಿಂದೆ ನಾನು ಸಹಕಾರ ಸಚಿವರಾಗಿದ್ದ ಸಂದರ್ಭದಲ್ಲಿ ಹಾಲು ಒಕ್ಕೂಟಗಳನ್ನು ಹಾಲು ಡೈರಿಯೊಂದಿಗೆ ಸೇರ್ಪಡೆ ಮಾಡಲಾಯಿತು. ಇದರಿಂದ ಹಾಲು ಉತ್ಪಾದನೆ ಹೆಚ್ಚಾಗಲು ಸಾಧ್ಯವಾಯಿತು. ಸಹಕಾರ ಸೌಧದಲ್ಲಿ ಸೇವೆ ಉತ್ತಮವಾಗಿರಲಿ ಎಂದು ಆಶಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ