ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕರ್ನಾಟಕ ಮಾದರಿ ಅಭಿವೃದ್ಧಿ ಮುಂದೆ ಗುಜರಾತ್ ಮಾದರಿ ಸಂಪೂರ್ಣ ಟೊಳ್ಳು : ಮುಖ್ಯಮಂತ್ರಿ ಸಿದ್ದರಾಮಯ್ಯ

ಮೂರು ವರ್ಷಗಳ ಸಾಧನಾ ಸಮರ್ಪಣಾ ಸಮಾವೇಶಕ್ಕೆ ಚಾಲನೆ

ತುಮಕೂರು: ನಾವು ಅಧಿಕಾರಕ್ಕೆ ಬಂದ ಬಳಿಕ‌ ಸರ್ವ ಜಾತಿ, ಸರ್ವ ಧರ್ಮದ ಸಕಲ ಜನತೆಯ ಅಭಿವೃದ್ಧಿಗೆ ಕೆಲಸ ಮಾಡಿದ್ದೇವೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಶಕ್ತಿ ತುಂಬುವ ಕೆಲಸ ಮಾಡಿದ್ದೇವೆ. ಬಿಜೆಪಿಯವರ ರೀತಿ ಜಾತಿ ಧರ್ಮದದ ಹೆಸರಲ್ಲಿ ಮನುಷ್ಯರನ್ನು ವಿಭಜಿಸುವ ಕೆಟ್ಟ ರಾಜಕಾರಣ ನಾವು ಮಾಡಲಿಲ್ಲ. ಬಿಜೆಪಿಯವರ ಎಲ್ಲಾ ಅಪಪ್ರಚಾರಗಳನ್ನು ಸುಳ್ಳಾಗಿಸಿ ನಾವು ಅಭಿವೃದ್ಧಿ ಮಾಡಿ ತೋರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು ಮೂರು ವರ್ಷಗಳ ಸಾಧನಾ ಸಮರ್ಪಣಾ ಸಮಾವೇಶದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು. ನಾಳೆಗೆ ನಾವು ಅಧಿಕಾರಕ್ಕೆ ಬಂದು ಮೂರು ವರ್ಷಗಳು ತುಂಬುತ್ತಿರುವ ಹೊತ್ತಲ್ಲಿ ಜಿ.ಪರಮೇಶ್ವರ್ ಅವರು ಸರ್ಕಾರದ ಸಾಧನಾ ಸಮರ್ಪಣಾ ಸಮಾವೇಶ ಮತ್ತು ಕಂದಾಯ ಇಲಾಖೆಯ ಕ್ರಾಂತಿಕಾರಿ ಜನೋಪಯೋಗಿ ಕೆಲಸಗಳ ಜನಾರ್ಪಣೆ ಸಮಾವೇಶವನ್ನು ಸ್ವಯಂಸ್ಫೂರ್ತಿಯಿಂದ ತುಮಕೂರಿನಲ್ಲಿ ಅಚ್ಚುಕಟ್ಟಾಗಿ ಆಯೋಜಿಸಿದ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದರು.

ಜಿ.ಪರಮೇಶ್ವರ್ ಅವರ ಅಧ್ಯಕ್ಷತೆಯ‌ ಪ್ರಣಾಳಿಕೆ ಸಮಿತಿ ಸಿದ್ಧಪಡಿಸಿದ್ದ ಪ್ರಣಾಳಿಕೆಯಲ್ಲಿನ‌ 580 ಭರವಸೆಗಳಲ್ಲಿ 290ಕ್ಕೂ ಹೆಚ್ಚು ಭರವಸೆ ಈಡೇರಿಸಿದ್ದೇವೆ. ಉಳಿದ ಎರಡು ವರ್ಷಗಳಲ್ಲಿ ಬಾಕಿ ಭರವಸೆಗಳನ್ನೂ ಈಡೇರಿಸಲಾಗುವುದು. ಪ್ರಮುಖವಾಗಿ ನಾವು ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಅಧಿಕಾರಕ್ಕೆ ಬಂದ ಕ್ಷಣದಿಂದಲೇ ಒಂದೊಂದಾಗಿ ಈಡೇರಿಸಿದ್ದಲ್ಲದೆ, ಉಳಿದ ಭರವಸೆಗಳನ್ನೂ ಈಡೇರಿಸಿ ನಿಮ್ಮ ಮುಂದೆ ಧನ್ಯತೆ ಅರ್ಪಿಸಲು ಇಲ್ಲಿ ನಿಮ್ಮ ಮುಂದೆ ನಿಂತಿದ್ದೇವೆ ಎಂದರು.

ಟ್ರಂಪ್ ಬಾಲ ಹಿಡಿದು ಸುತ್ತುತ್ತಿದ್ದ ಮೋದಿಯವರೇ ಈ ಬೆಲೆ ಏರಿಕೆಗೆ ಕಾರಣ

35 ವರ್ಷಗಳಿಂದ ಗುಜರಾತ್‌ನಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಅಲ್ಲಿ ಅಭಿವೃದ್ಧಿಯೇ ಆಗಿಲ್ಲ. ಮೊನ್ನೆಯಷ್ಟೆ ಕೇವಲ 2,500 ರೂ ಮನೆ ಬಾಡಿಗೆ ಕಟ್ಟಲಾಗದ ಕಾರಣಕ್ಕೆ ಬಾಡಿಗೆಗಿದ್ದ ಬಡ ಕುಟುಂಬದ 13 ವರ್ಷದ ಬಾಲಕಿಯ ಮೇಲೆ ಮನೆ ಮಾಲೀಕ ಅತ್ಯಾಚಾರ ಎಸಗಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಇದು ನಿಜವಾದ ಗುಜರಾತ್ ಮಾದರಿ. ಕರ್ನಾಟಕ ಮಾದರಿ ಅಭಿವೃದ್ಧಿ ಮುಂದೆ ಗುಜರಾತ್ ಮಾದರಿ ಸಂಪೂರ್ಣ ಟೊಳ್ಳು. ಮೋದಿಯವರು ಪ್ರಧಾನಿ ಆಗುವ ಮೊದಲು ದೇಶದಲ್ಲಿ ಡೀಸೆಲ್, ಪೆಟ್ರೋಲ್, ಚಿನ್ನದ ಬೆಲೆ ಎಷ್ಟಿತ್ತು. ಈಗ ಅದು ಆಕಾಶಕ್ಕೆ ಏರಿದೆ. ಟ್ರಂಪ್ ಬಾಲ ಹಿಡಿದು ಸುತ್ತುತ್ತಿದ್ದ ಮೋದಿಯವರೇ ಈ ಬೆಲೆ ಏರಿಕೆಗೆ ಕಾರಣ. ಮೋದಿ ದರ್ಬಾರಿನಲ್ಲಿ ಅಂಬಾನಿ ಮತ್ತು ಅದಾನಿ ಮಾತ್ರ ಲಾಭ ಮಾಡಿಕೊಂಡು ಈಗ ಇವರ ಆಸ್ತಿ 8 ಲಕ್ಷ ಕೋಟಿಗೆ ಏರಿಕೆಯಾಗಿದೆ. ಬಡವರು ಮತ್ತು ಮಧ್ಯಮ ವರ್ಗದವರ ಆದಾಯ ಮತ್ತು ಬದುಕು ನೆಲಕಚ್ಚಿದೆ. ಮೋದಿ ಮೋದಿ ಎಂದು ಕುಣಿಯುತ್ತಿದ್ದ ಭಾರತದ ಬಡ ಜನರು ಮತ್ತು ಮಧ್ಯಮ ವರ್ಗದವರಿಗೆ ಭ್ರಮನಿರಸನವಾಗಿದೆ. ನಾವು ನುಡಿದಂತೆ ನಡೆದಿದ್ದೇವೆ ಎಂದರು.

ತಲಾ ಆದಾಯದಲ್ಲಿ ಕನ್ನಡಿಗರು ಇಡೀ ದೇಶದಲ್ಲೇ ನಂಬರ್ ಒನ್ ಇದ್ದಾರೆ. ಇಡೀ ದೇಶದ ಜಿಎಸ್‌ಟಿ ಗೆ ನಮ್ಮ ಕೊಡುಗೆ ಅಪಾರ ಇದೆ. ದೇಶದ ತಲಾ ಆದಾಯಕ್ಕಿಂತ ರಾಜ್ಯದ ಆದಾಯ ಹೆಚ್ಚಾಗುವ ರೀತಿಯಲ್ಲಿ ನಾವು ಪ್ರಗತಿ ಸಾಧಿಸಿದ್ದೇವೆ. ನಾವು ನುಡಿದಂತೆ ನಡೆದು ಸಾಬೀತುಪಡಿಸಿರುವುದರಿಂದ ಮತ್ತೆ 2028ರ ವಿಧಾನಸಭಾ ಚುನಾವಣೆಯಲ್ಲೂ ನಾವೇ ಅಧಿಕಾರಕ್ಕೆ ಬರುವುದು ಶತಸಿದ್ಧ. ಕುವೆಂಪು ಅವರ ಸರ್ವ ಜನಾಂಗದ ಶಾಂತಿಯ ತೋಟ ಎನ್ನುವ ಆಶಯದ ನಾಡನ್ನು ಇನ್ನಷ್ಟು ಗಟ್ಟಿಯಾಗಿ ರೂಪಿಸುತ್ತೇವೆ.

ಮೋದಿ ದೇಶದ ನೆಮ್ಮದಿ ಕಸಿಯುವ ಸರ್ಕಾರ ಕೊಟ್ಟಿದ್ದಾರೆ

ಸಂವಿಧಾನಬದ್ಧ ಅಭಿವೃದ್ಧಿ ಮಾರ್ಗದಲ್ಲಿ ನಾಡನ್ನು ಮುನ್ನಡೆಸುತ್ತೇವೆ. ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ‌ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತ್ಮಹತ್ಯೆಗೆ ಮೋದಿ ಸರ್ಕಾರ ಕಾರಣ. ರಾಜ್ಯದ ಸಿಇಟಿ ಮಾದರಿಯಲ್ಲಿ ಪರೀಕ್ಷೆ ನಡೆಸಿ ಎನ್ನುವ ನಮ್ಮ ಸಲಹೆಯನ್ನು ತಿರಸ್ಕರಿಸಿ, ನೀಟ್ ನಲ್ಲಿ ಅದ್ವಾನ ಮಾಡಿದ್ದಾರೆ. ವರ್ಷಕ್ಕೆ 2 ಕೋಟಿ ಉದ್ಯೋಗದ ಭರವಸೆ ನೀಡಿದ್ದ ಮೋದಿಯವರ ಅಚ್ಚೇ ದಿನ ಬರಲಿಲ್ಲ. ನೀಟ್ ಪರೀಕ್ಷೆ ಬರೆದ ವಿದ್ಯಾರ್ಥಿಗಳ‌ ಆತ್ಮಹತ್ಯೆ ತಡೆಯಲು‌ ಆಗಿಲ್ಲ. ಹೀಗಾಗಿ ಬಿಜೆಪಿ-ಆರ್ ಎಸ್ ಎಸ್ ಸರ್ಕಾರ ಸಂಪೂರ್ಣ ವಿಫಲವಾಗಿ, ದೇಶದ ಸಾಲವನ್ನು 220 ಲಕ್ಷ ಕೋಟಿಗೆ ಹೆಚ್ಚಿಸಿದ್ದಾರೆ. ನಾವು ನೆಮ್ಮದಿಯ ನಾಡು ಕಟ್ಟುವ ಸರ್ಕಾರ ಕೊಟ್ಟಿದ್ದೇವೆ. ಮೋದಿ ದೇಶದ ನೆಮ್ಮದಿ ಕಸಿಯುವ ಸರ್ಕಾರ ಕೊಟ್ಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ