ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ ಮಟ್ಟದ ತನ್ನ ‘ಬಿಝ್ಇಂಟೆಲ್ ಹಬ್ ಸ್ಥಾಪಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಕಾವೇರಿಯಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಎಂ.ಬಿ. ಪಾಟೀಲ್‌ ಅವರ ಸಮ್ಮುಖದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಎಸ್.ಸೆಲ್ವಕುಮಾರ್ ಮತ್ತು ಟೊಯೋಟಾ ಕಂಪನಿಯ ಪರವಾಗಿ ಸಿಓಓ ಮತ್ತು ವಿಶೇಷ ಯೋಜನೆಯ ನಿರ್ದೇಶಕ ಸುದೀಪ್ ದಳವಿ ಅವರು ಒಪ್ಪಂದಕ್ಕೆ ಸಹಿ ಹಾಕಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ‌ ಮಾತು:

ಹೂಡಿಕೆಗೆ ನಮ್ಮ ಸರ್ಕಾರವು ಸಂಪೂರ್ಣ ಸಹಕಾರ ನೀಡಲಿದೆ. ಈ ರೀತಿಯ ಘಟಕ ಸ್ಥಾಪನೆ ಆಗುತ್ತಿರುವುದು ವಿಶ್ವದಲ್ಲೇ ಮೊದಲು ಎನ್ನುವ ವಿಷಯ ಕೇಳಿ ಸಂತಸವಾಯಿತು. ಇದರಿಂದ ರಾಜ್ಯದಲ್ಲಿ ನೂರಾರು ಉದ್ಯೋಗಗಳು ಸೃಷ್ಟಿಯಾಗಲಿವೆ. ಇದಕ್ಕಾಗಿ ಅಲ್ಲಿ ಟೊಯೋಟಾ ಕಂಪನಿಗೆ 300 ಎಕರೆ ಭೂಮಿ ಒದಗಿಸಲಾಗುವುದು. ಇಲ್ಲಿ ವಾಹನಗಳ ತಯಾರಿಕೆ, ಪರೀಕ್ಷೆಗಳು, ಆಧುನಿಕ ವಾಹನ ತಯಾರಿಕಾ ಸ್ಥಾವರ ಆರಂಭ ಎಲ್ಲವೂ ನಡೆಯಲಿವೆ. ಇದು ರಾಜ್ಯದ ಯುವಜನರಿಗೆ ವರದಾನವಾಗಲಿದೆ ಎಂದು ತಿಳಿಸಿದರು.

ಕೈಗಾರಿಕಾ ಇಲಾಖೆ ಆಯುಕ್ತರಾದ ಖುಷ್ಬೂ ಗೋಯೆಲ್, ಕೆಐಎಡಿಬಿ ಸಿಇಒ ಗೋವಿಂದ ರೆಡ್ಡಿ, ಟೊಯೊಟಾ ಕಂಪನಿಯ ಮುಖ್ಯ ತಾಂತ್ರಿಕ ಅಧಿಕಾರಿ ಯೋಶಿನೋರಿ ನೋರಿಟಾಕೆ, ಉನ್ನತ ಮಟ್ಟದ ಪ್ರತಿನಿಧಿಗಳಾದ ಜಿ.ಶಂಕರ್, ವಿಕ್ರಮ್ ಗುಲಾಟಿ, ಉಪಾಧ್ಯಕ್ಷ ರಮೇಶ್ ರಾವ್, ಜನರಲ್ ಮ್ಯಾನೇಜರ್ ಎಚ್ ಜೆ ಕಿರಣ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share the Post:

Related Posts

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ, ಆರ್ಥಿಕ ಬೆಳವಣಿಗೆ ಸೇರಿ ಎಲ್ಲಾ ದೃಷ್ಟಿಯಿಂದ ಈ ಭಾಗದ ಸಮಗ್ರ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ