ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

‘ಬೆಂಗಳೂರು ಹಬ್ಬ’ ಕ್ಕೆ ಸರ್ಕಾರದ ಸಹಕಾರ

ಬೆಂಗಳೂರು ನಗರದಲ್ಲಿ ಬಹಳ ಹಿಂದಿನಿಂದಲೂ ಕಡ್ಲೆಕಾಯಿ ಪರಿಷೆಯಂತಹ ಸಾಂಪ್ರಾದಾಯಿಕ ಆಚರಣೆಗಳನ್ನು ಮಾಡಿಕೊಂಡು ಬರಲಾಗುತ್ತಿದೆ. ಈ ಜಾತ್ರೆಯಲ್ಲಿ ಬೆಂಗಳೂರಿಗರು ಬಹಳ ಸಂಭ್ರಮದಿಂದ ಭಾಗವಹಿಸುತ್ತಾರೆ.

‘ಬೆಂಗಳೂರು ಹಬ್ಬ’ ದಂತಹ ಹಬ್ಬಗಳ ಮೂಲಕ ಬೆಂಗಳೂರಿನ ಇತಿಹಾಸ, ಕಲೆ, ಸಂಸ್ಕೃತಿ , ಪರಂಪರೆಗಳನ್ನು ಉಳಿಸಿ ಬೆಳೆಸುವ ಕೆಲಸವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಗೃಹಕಚೇರಿ ಕೃಷ್ಣಾದಲ್ಲಿ ಶ್ರೀ ಪ್ರಶಾಂತ್ ಪ್ರಕಾಶ್ ಹಾಗೂ ಶ್ರೀಮತಿ ಮಾಲಿನಿ ಗೋಯಲ್ ಅವರು ಬರೆದಿರುವ Unboxing Bengaluru, The City of New Beginnings ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಬೆಂಗಳೂರು ಹಬ್ಬಕ್ಕೆ ಎಲ್ಲ ಸಹಕಾರ

Unboxing Bengaluru, The City of New Beginnings ಪುಸ್ತಕವನ್ನು ಇಂಗ್ಲೀಷ್ ಜೊತೆಗೆ ಕನ್ನಡದಲ್ಲಿಯೂ ಹೊರತಂದಿದ್ದರೆ ಇನ್ನೂ ಉತ್ತಮವಾಗಿರುತ್ತಿತ್ತು. ಶ್ರೀ ಪ್ರಶಾಂತ್ ಪ್ರಕಾಶ್ ಹಾಗೂ ಶ್ರೀಮತಿ ಮಾಲಿನಿ ಗೋಯಲ್ ಅವರು ಬೆಂಗಳೂರು ಹಬ್ಬ ಆಯೋಜಿಸುತ್ತಿರುವುದು ಸಂತೋಷದ ವಿಚಾರ. ಬೆಂಗಳೂರು ಹಬ್ಬಕ್ಕೆ ಎಲ್ಲ ರೀತಿಯ ಸಹಕಾರವನ್ನು ಸರ್ಕಾರ ನೀಡಲಿದೆ ಎಂದರು.

ಎಲ್ಲರೂ ಕನ್ನಡಿಗರಾಗಿ ಬಾಳಬೇಕು

ಬೆಂಗಳೂರು ವೇಗವಾಗಿ ಬೆಳೆಯುತ್ತಿರುವ ನಗರ. ಐತಿಹಾಸಿಕ ಮಹತ್ವವಿರುವ ಬೆಂಗಳೂರು ನಗರವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಯೋಜನಾಬದ್ಧವಾಗಿ ಬೆಳೆಸಬೇಕಾಗಿತ್ತು. ನಗರದಲ್ಲಿ ಸುಮಾರು ಒಂದೂವರೆ ಕೋಟಿ ಜನರಿದ್ದಾರೆ. ಬೆಂಗಳೂರು ನಗರದಲ್ಲಿ, ಇಲ್ಲಿನ ಸಂಸ್ಕೃತಿ, ಕಲೆ, ಜನಜೀವನ, ನಾಗರೀಕತೆಗಳನ್ನು ಉಳಿಸಿಕೊಂಡು ಬರಲಾಗಿದೆ. ದೇಶ ವಿದೇಶಗಳಿಂದ ಉದ್ಯೋಗವರಿಸಿ ಜನ ನಗರದಲ್ಲಿ ನೆಲೆಸಿದ್ದರೂ ಕೂಡ ಎಲ್ಲರೂ ಕನ್ನಡಿಗರಾಗಿ ಬಾಳಬೇಕು. ನಾವೆಲ್ಲಾ ಕನ್ನಡಿಗರಾಗಿ , ಪರಸ್ಪರ ಪ್ರೀತಿ ವಿಶ್ವಾಸಗಳೊಂದಿಗೆ ಸೌಹಾರ್ದತೆಯಿಂದ ಬಾಳಬೇಕು ಎಂದು ಕರೆ ನೀಡಿದರು.

ಜನರು ಸಂಭ್ರಮದಿಂದ ಭಾಗವಹಿಸಲಿ

ಬೆಂಗಳೂರು ನಗರದಲ್ಲಿ ಬಹಳ ಹಿಂದಿನಿಂದಲೂ ಕಡ್ಲೆಕಾಯಿ ಪರಿಷೆಯಂತಹ ಸಾಂಪ್ರಾದಾಯಿಕ ಆಚರಣೆಗಳನ್ನು ಮಾಡಿಕೊಂಡು ಬರಲಾಗುತ್ತಿದೆ. ಈ ಜಾತ್ರೆಯಲ್ಲಿ ಬೆಂಗಳೂರಿಗರು ಬಹಳ ಸಂಭ್ರಮದಿಂದ ಭಾಗವಹಿಸುತ್ತಾರೆ. ಅಂತೆಯೇ ತಾವು ಆಯೋಜಿಸುವ ಬೆಂಗಳೂರು ಹಬ್ಬದಲ್ಲಿ, ನಗರದ ಜನರೆಲ್ಲ ಸಂಭ್ರಮದಿಂದ ಭಾಗವಹಿಸುವಹಿಸಬೇಕು ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ