ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಮೊದಲ ಪೂರ್ಣಾವಧಿ ಜನತಾ ದರ್ಶನಕ್ಕೆ ಸಕಲ ಸಿದ್ದತೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸುವ ಆಶಯದೊಂದಿಗೆ ನವೆಂಬರ್ 27 ರಂದು ಬೆಳಿಗ್ಗೆ 9.30 ಗಂಟೆಯಿಂದ ಗೃಹ ಕಚೇರಿ ಕೃಷ್ಣದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ.
  • ಸ್ಥಳದಲ್ಲೇ ಪರಿಹಾರಕ್ಕೆ ಆದ್ಯತೆ. ಅಧಿಕಾರಿ ಸಿಬ್ಬಂದಿ ಹಾಜರಿರಲು ಸೂಚನೆ
  • ಸಕಲ ಮುನ್ನೆಚ್ಚರಿಕೆ-ವೈದ್ಯ ಸಿಬ್ಬಂದಿಯೂ ಸ್ಥಳದಲ್ಲಿರಲು ಸೂಚನೆ
  • 20 ಕೌಂಟರ್ ಗಳು-ನೂರಕ್ಕೂ ಹೆಚ್ಚು ಅಧಿಕಾರಿಗಳು
  • ವಿಶೇಷ ಚೇತನರು ಮತ್ತು ಹಿರಿಯ ನಾಗರಿಕರಿಗೆ ಪ್ರತ್ಯೇಕ ಕೌಂಟರ್ ಗಳು
  • ಅಹವಾಲುಗಳ ದಾಖಲೀಕರಣಕ್ಕೆ ಹಲವು ತಂಡದಲ್ಲಿ ಕಾರ್ಯನಿರ್ವಹಿಸಲಿರುವ ಅಧಿಕಾರಿ-ಸಿಬ್ಬಂದಿ
  • ನ. 27 ರಂದು ಮುಖ್ಯಮಂತ್ರಿಯ ವರಿಂದ ಜನಸ್ಪಂದನ ಕಾರ್ಯಕ್ರಮ: ಸಾರ್ವಜನಿಕರ ಅಹವಾಲುಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಲು ಸಿದ್ಧತೆ*

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸುವ ಆಶಯದೊಂದಿಗೆ ನವೆಂಬರ್ 27 ರಂದು ಬೆಳಿಗ್ಗೆ 9.30 ಗಂಟೆಯಿಂದ ಗೃಹ ಕಚೇರಿ ಕೃಷ್ಣದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಲಿದ್ದಾರೆ.

ಇದಕ್ಕಾಗಿ ಮುಖ್ಯಮಂತ್ರಿ ಸಚಿವಾಲಯವು ಸಕಲ ಸಿದ್ಧತೆಗಳನ್ನು ನಡೆಸಿದ್ದು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯಲ್ ಅವರು ಇಂದು ಸಂಜೆ ಗೃಹ ಕಚೇರಿ ಕೃಷ್ಣಾ ಕ್ಕೆ ಭೇಟಿ ನೀಡಿ ಅಂತಿಮ ಸಿದ್ಧತೆಗಳನ್ನು ಪರಿಶೀಲಿಸಿದರು.

ಅಹವಾಲುಗಳನ್ನು ಸ್ವೀಕರಿಸಲು ಒಟ್ಟು 20 ಕೌಂಟರುಗಳನ್ನು ಸ್ಥಾಪಿಸಲಾಗಿದ್ದು, ವಿಶೇಷ ಚೇತನರು ಮತ್ತು ಹಿರಿಯ ನಾಗರಿಕರಿಗೆ ಎರಡು ಕೌಂಟರ್ ಗಳನ್ನು ಮೀಸಲಿರಿಸಲಾಗಿದೆ.

ಸ್ವೀಕರಿಸಿದ ಅಹವಾಲುಗಳನ್ನು ಇಲಾಖಾವಾರು ವಿಂಗಡಿಸಿ ತಂತ್ರಾಂಶದಲ್ಲಿ ದಾಖಲಿಸಿ ಅರ್ಜಿದಾರರಿಗೆ ಸ್ವೀಕೃತಿ ಪತ್ರ ನೀಡಿದ ನಂತರ ಮುಖ್ಯಮಂತ್ರಿಯವರು ಅವರ ಅಹವಾಲುಗಳನ್ನು ಆಲಿಸಿ ಪರಿಹಾರ ಸೂಚಿಸುವರು.

ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಯವರು ಈಗಾಗಲೇ ಸುತ್ತೋಲೆ ಹೊರಡಿಸಿ ಸರ್ಕಾರದ ಎಲ್ಲ ಕಾರ್ಯದರ್ಶಿಗಳು / ಇಲಾಖಾ ಮುಖ್ಯಸ್ಥರು ಖುದ್ದು ಹಾಜರಿರುವಂತೆ ಹಾಗೂ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಎಲ್ಲಾ ಜಿಲ್ಲಾ/ ಉಪವಿಭಾಗ/ ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಹಾಜರಿರುವಂತೆ ಸೂಚಿಸಿದ್ದಾರೆ.

ಜನಸ್ಪಂದನ ಕಾರ್ಯಕ್ರಮದಲ್ಲಿ ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರು ತಮ್ಮ ಗುರುತಿಗಾಗಿ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿಯನ್ನು ತರುವಂತೆ ಕೋರಲಾಗಿದೆ. ಇದರಿಂದ ತಂತ್ರಾಂಶದಲ್ಲಿ ದಾಖಲಿಸುವ ಅರ್ಜಿಗಳ ಸ್ಥಿತಿಗತಿಯನ್ನು ಪತ್ತೆಹಚ್ಚಲು ಅನುಕೂಲವಾಗಲಿದೆ.

ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾ ದಲ್ಲಿ ಕಳೆದ ಮೂರು ದಿನಗಳಿಂದ ಸಕಲ ಸಿದ್ಧತೆ ನಡೆಸಲಾಗುತ್ತಿದ್ದು, ಅಹವಾಲು ಸಲ್ಲಿಸಲು ಆಗಮಿಸುವ ನಾಗರಿಕರಿಗೆ ಕುಡಿಯುವ ನೀರು, ಆಹಾರ ಹಾಗೂ ಶೌಚಾಲಯ ಮತ್ತು ಇತರ ವ್ಯವಸ್ಥೆಗಳನ್ನು ಸಜ್ಜುಗೊಳಿಸಲಾಗುತ್ತಿದೆ.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ