ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕೆಯುಡಬ್ಲ್ಯೂಜೆ ರಾಜ್ಯಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಲಾಂಚನ ಅನಾವರಣ ಮಾಡಿದ ಮುಖ್ಯಮಂತ್ರಿ

ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಕೆಯುಡಬ್ಲ್ಯೂಜೆ 'ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ -2024' ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಮಂಗಳವಾರ ಬಿಡುಗಡೆಗೊಳಿಸಿದರು.


ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ ) ಜನವರಿ 5,6,7ರಂದು 3ದಿನಗಳ ಕಾಲ ಮಂಗಳೂರು ಆಡ್ಯಾರ್ ಸಹ್ಯಾದ್ರಿ ಮೈದಾನದಲ್ಲಿ ಏರ್ಪಡಿಸಿರುವ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯ ಕೆಯುಡಬ್ಲ್ಯೂಜೆ ‘ಬ್ರ್ಯಾಂಡ್ ಮಂಗಳೂರು ರೋಹನ್ ಕಪ್ -2024’ ಲಾಂಛನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಮಂಗಳವಾರ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಡಿ.5ರಂದು ಸಹ್ಯಾದ್ರಿ ಕ್ರೀಡಾಂಗಣದಲ್ಲಿ ನಡೆಯುವ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನಿಸಲಾಯಿತು. ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ 35ನೇ ರಾಜ್ಯ ಸಮ್ಮೇಳನವನ್ನು ಸಂಘಟಿಸಲಾಗಿದ್ದು, ಈಗ ರಾಜ್ಯ ಮಟ್ಟದ ಕ್ರಿಕೇಟ್ ಕ್ರೀಡಾಕೂಟವನ್ನ ಸಂಘಟಿಸಲಾಗುತ್ತಿದೆ ಎಂಬುವುದನ್ನು ಅವರ ಗಮನಕ್ಕೆ ತರಲಾಯಿತು.

ಲಾಂಛನ ಅನಾವರಣ ಸಂದರ್ಭದಲ್ಲಿ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಮಾಜಿ ಸಚಿವ ಅಭಯಚಂದ್ರ ಜೈನ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ , ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪಂದ್ಯಾವಳಿಯ ಪ್ರಧಾನ ಸಂಚಾಲಕ ಅನ್ನು ಮಂಗಳೂರು, ಉಪಾಧ್ಯಕ್ಷ ಭಾಸ್ಕರ್ ರೈ. ಕೆ, ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್, ಪದಾಧಿಕಾರಿಗಳಾದ, ರಾಜೇಶ್ ದಡ್ಡಂಗಡಿ, ರಾಜೇಶ್ ಶೆಟ್ಟಿ, ಸಂದೇಶ ಜಾರ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ