ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಸಿಎಂ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿ ಸಭೆ

ಎಲ್ಲ ಷರತ್ತುಗಳನ್ನು ಪೂರೈಸುವ ಸಂದರ್ಭದಲ್ಲಿ ಏಕಗವಾಕ್ಷಿ ವ್ಯವಸ್ಥೆಯಲ್ಲಿ 30 ದಿನಗಳೊಳಗೆ ಅನುಮೋದನೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.
  • ಹೂಡಿಕೆದಾರರು ಉದ್ಯಮ ಸ್ಥಾಪನೆಗೆ ಸಲ್ಲಿಸಿದ ಅರ್ಜಿಗಳ ಕುರಿತು ಎಲ್ಲ ಇಲಾಖೆಗಳು ನಿಗದಿತ ಕಾಲಮಿತಿಯಲ್ಲಿ ತಮ್ಮ ಅಭಿಪ್ರಾಯ ನೀಡಬೇಕು
  • ಎಲ್ಲ ಷರತ್ತುಗಳನ್ನು ಪೂರೈಸುವ ಸಂದರ್ಭದಲ್ಲಿ ಏಕಗವಾಕ್ಷಿ ವ್ಯವಸ್ಥೆಯಲ್ಲಿ 30 ದಿನಗಳೊಳಗೆ ಅನುಮೋದನೆ ನೀಡಬೇಕು: ಸಿಎಂ ಸ್ಪಷ್ಟ ಸೂಚನೆ

ಹೂಡಿಕೆದಾರರು ಉದ್ಯಮ ಸ್ಥಾಪನೆಗೆ ಸಲ್ಲಿಸಿದ ಅರ್ಜಿಗಳ ಕುರಿತು ಎಲ್ಲ ಇಲಾಖೆಗಳು ನಿಗದಿತ ಕಾಲಮಿತಿಯಲ್ಲಿ ತಮ್ಮ ಅಭಿಪ್ರಾಯ ನೀಡಬೇಕು. ಎಲ್ಲ ಷರತ್ತುಗಳನ್ನು ಪೂರೈಸುವ ಸಂದರ್ಭದಲ್ಲಿ ಏಕಗವಾಕ್ಷಿ ವ್ಯವಸ್ಥೆಯಲ್ಲಿ 30 ದಿನಗಳೊಳಗೆ ಅನುಮೋದನೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

ತಮ್ಮ ಅಧ್ಯಕ್ಷತೆಯಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ ಈ ಸೂಚನೆ ನೀಡಿದರು.

ಸಮಿತಿಯ ಮುಂದೆ ಮಂಡಿಸಲಾದ ಪ್ರಸ್ತಾವನೆಗಳ ಪರಿಶೀಲನೆಯ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಇಲ್ಲಿ ಒಪ್ಪಿಗೆ ಕೊಟ್ಟ ಬಳಿಕ ಕಡತಗಳು ಪುನಃ ವಿವಿಧ ಇಲಾಖೆಗಳಿಗೆ ಅಲೆಯುವಂತಾಗಬಾರದು ಎಂದು ಸೂಚನೆ ನೀಡಿದರು.

ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪ್ರಸ್ತಾವನೆಗಳ ಪರಿಶೀಲನೆಯಲ್ಲಿ ವಿಳಂಬವಾಗುತ್ತಿರುವುದನ್ನು ಗಮನಿಸಿದ ಮುಖ್ಯಮಂತ್ರಿಗಳು, ನಿಗದಿತ ಕಾಲಮಿತಿಯಲ್ಲಿ ಕ್ರಮ ಕೈಗೊಳ್ಳುವಂತೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚಿಸಿದರು.

ಪ್ರಸ್ತಾವನೆಗಳ ಕಡತ ಇಲಾಖೆಗಳ ಅಭಿಪ್ರಾಯಕ್ಕಾಗಿ ಬಂದಾಗ, ಇಲಾಖಾ ಸಚಿವರ ಗಮನಕ್ಕೆ ಈ ವಿಷಯವನ್ನು ಕಡ್ಡಾಯವಾಗಿ ತರಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌, ಸಚಿವರಾದ ಚೆಲುವರಾಯಸ್ವಾಮಿ, ಪ್ರಿಯಾಂಕ್‌ ಖರ್ಗೆ, ನಾಗೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ ಶಾಲಿನಿ ರಜನೀಶ್‌, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್‌ ಅಖ್ತರ್‌, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ