ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಸಂಸತ್ ಭವನದ ಮೇಲೆ ದಾಳಿ; ಆಘಾತಕಾರಿ ಬೆಳವಣಿಗೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ

ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ," ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ಹೊರಹಾಕಿದ್ದಾರೆ.

“ಇಡೀ ದೇಶವನ್ನೇ ಬೆಚ್ಚಿ ಬೀಳಿಸಿರುವ ಸಂಸತ್ ಭವನದ ಮೇಲೆ ಇಂದು ನಡೆದಿರುವ ದಾಳಿ ಖಂಡನೀಯವಾದುದು ಮಾತ್ರವಲ್ಲ ಅತ್ಯಂತ ಆಘಾತಕಾರಿಯಾದುದು. ಸಂಸದರೆಲ್ಲರೂ ಸುರಕ್ಷಿತವಾಗಿದ್ದಾರೆ ಎನ್ನುವುದು ಸಮಾಧಾನದ ಸಂಗತಿ. ಅತ್ಯಂತ ಬಿಗಿಭದ್ರತೆಯ ಹೊರತಾಗಿಯೂ ಇಂತಹದ್ದೊಂದು ಘಟನೆ ನಡೆದಿರುವುದು ಆಘಾತಕಾರಿ ಬೆಳವಣಿಗೆ,” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆತಂಕ ಹೊರಹಾಕಿದ್ದಾರೆ.

“ಇದು ಸಂಪೂರ್ಣವಾಗಿ ಭದ್ರತಾ ವ್ಯವಸ್ಥೆಯ ಲೋಪ ಎನ್ನುವುದು ಸ್ಪಷ್ಟವಾಗಿದೆ. ಈ ಬಗ್ಗೆ ನಿಷ್ಪಕ್ಷ ಪಾತ ತನಿಖೆ ನಡೆಸಿ ಘಟನೆಯ ಹಿಂದಿನ ಸಂಪೂರ್ಣ ಸತ್ಯವನ್ನು ದೇಶದ ಮುಂದಿಡುವುದು ಕೇಂದ್ರ ಸರ್ಕಾರ, ಬಹಳ ಪ್ರಮುಖವಾಗಿ ದೇಶದ ಗೃಹ ಸಚಿವರ ಕರ್ತವ್ಯವಾಗಿದೆ” ಎಂದು ಆಗ್ರಹಿಸಿದ್ದಾರೆ.

ಬುಧವಾರ ಮಧ್ಯಾಹ್ನ ಲೋಕಸಭೆಯಲ್ಲಿ ನಡೆದ ದಾಳಿ ಬೆಳವಣಿಗೆಯಲ್ಲಿ ಹಿನ್ನೆಲೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವ ಮುಖ್ಯಮಂತ್ರಿಗಳು, ಇಪ್ಪತ್ತೆರಡು ವರ್ಷಗಳ ಹಿಂದೆ (13-12-2001) ಸಂಸತ್ ಮೇಲೆ ಭಯೋತ್ಪಾದಕರು ನಡೆಸಿದ್ದ ದಾಳಿಯ ದಿನವನ್ನೇ ಆರಿಸಿಕೊಂಡು ಈ ದಾಳಿ ನಡೆದಿರುವುದನ್ನು ಗಮನಿಸಿದರೆ ಇದರ ಹಿಂದೆ ಬೇರೆ ಹುನ್ನಾರಗಳಿರಬಹುದೆಂಬ ಸಂಶಯವೂ ಮೂಡುತ್ತಿದೆ. 2001ರ ದಾಳಿಯ ಸಮಯದಲ್ಲಿಯೂ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರವೇ ಇತ್ತು ಎನ್ನುವುದನ್ನು ಗಮನಿಸಬೇಕಾಗುತ್ತದೆ. ಇದು ದೇಶದ ಸುರಕ್ಷತೆಯ ಬಗ್ಗೆ ಹಲವಾರು ಪ್ರಶ್ನೆಗಳಿಗೆ ಕಾರಣವಾಗಿದೆ ಎಂದಿದ್ದಾರೆ.

“ಸಂಸತ್ ಭವನದ ಮೇಲೆ ದಾಳಿ ನಡೆಸಿದ ಯುವಕರಿಗೆ ಮೈಸೂರಿನ ಲೋಕಸಭಾ ಸದಸ್ಯ ಪ್ರತಾಪ ಸಿಂಹ ಅವರೇ ಪಾಸ್ ನೀಡಿರುವ ವರದಿಗಳು ಬರುತ್ತಿವೆ. ಈ ಸುದ್ದಿ ನಿಜವಾಗಿದ್ದಲ್ಲಿ ಈ ಸಂಸದರನ್ನು ಕೂಡಾ ವಿಚಾರಣೆಗೆ ಒಳಪಡಿಸಬೇಕಾಗುತ್ತದೆ. ಪಾಸ್ ನೀಡಿರಬೇಕಾಗಿದ್ದರೆ ಯುವಕರು ಸಂಸದರ ಪರಿಚಯಸ್ಥರಾಗಿರಬಹುದು. ಪರಿಚಯಸ್ಥರಲ್ಲದೆ ಇದ್ದರೆ ಅಪರಿಚಿತರಿಗೆ ಪಾಸುಗಳನ್ನು ಹೇಗೆ ನೀಡಲಾಯಿತು ಎನ್ನುವ ಪ್ರಶ್ನೆ ಕೂಡಾ ಹುಟ್ಟುತ್ತದೆ. ಕಾನೂನಿನಲ್ಲಿ ಬೇಜವಾಬ್ದಾರಿಯಿಂದ ನಡೆಯುವ ಅನಾಹುತ ಕೂಡಾ ಶಿಕ್ಷಾರ್ಹ ಎನ್ನುವುದನ್ನು ತಿಳಿದುಕೊಳ್ಳಬೇಕಾಗುತ್ತದೆ” ಎಂದಿದ್ದಾರೆ.

“ದೇಶದ ಹೃದಯದಂತಿರುವ ಸಂಸತ್ ಭವನಕ್ಕೆ ಬೇರೆ ಯಾವುದೇ ಪ್ರದೇಶ ಇಲ್ಲವೆ ಕಟ್ಟಡವನ್ನು ಮೀರಿದ ಬಿಗಿ ಭದ್ರತೆಯನ್ನು ನೀಡಲಾಗಿದೆ. ಹೀಗಿದ್ದರೂ ಈ ಯುವಕರು ಸ್ಮೋಕ್ ಬಾಂಬು ಹಿಡಿದುಕೊಂಡು ಸಂಸತ್ ಒಳಗೆ ಹೇಗೆ ಪ್ರವೇಶಿಸಿದರು? ಈ ಕೃತ್ಯದಲ್ಲಿ ಒಳಗಿನವರೇ ಯಾರಾದರೂ ಭಾಗಿಯಾಗಿದ್ದಾರೆಯೇ? ಈ ಯುವಕರ ಕೃತ್ಯದ ಹಿಂದೆ ಬೇರೆ ಯಾವುದಾದರೂ ಬಾಹ್ಯ ಶಕ್ತಿಗಳ ಕೈವಾಡ ಇದೆಯೇ? ಎಂಬೀತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ದೇಶದ ಸಂಸತ್ ಭವನವೇ ಸುರಕ್ಷಿತವಾಗಿಲ್ಲದಿರುವಾಗ ದೇಶದ ಗಡಿ ಸುರಕ್ಷಿತವಾಗಿರುತ್ತಾ ಎಂಬೀತ್ಯಾದಿ ಪ್ರಶ್ನೆಗಳು ಸಹಜವಾಗಿಯೇ ಹುಟ್ಟಿಕೊಳ್ಳುತ್ತದೆ. ಈ ಪ್ರಶ್ನೆಗಳಿಗೆಲ್ಲ ಉತ್ತರಿಸಬೇಕಾಗಿರುವ ಹೊಣೆ ದೇಶದ ಪ್ರಧಾನಿ ನರೇಂದ್ರ ಮೋದಿಯವರದ್ದಾಗಿದೆ” ಒತ್ತಾಯ ಮಾಡಿದ್ದಾರೆ.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ