ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಫೀಡರ್‌ ಸೌರೀಕರಣ ಯೋಜನೆ: ಸರ್ಕಾರಿ ಜಾಗ ಗುರುತಿಸಿ, ತ್ವರಿತವಾಗಿ ಹಸ್ತಾಂತರಿಸಲು ಮುಖ್ಯಮಂತ್ರಿ ಸೂಚನೆ

ಇಂಧನ ಇಲಾಖೆಗೆ ಜಮೀನು ಹಸ್ತಾಂತರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಕ್ರಮ ವಹಿಸಲು ಸುತ್ತೋಲೆ ಹೊರಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

PM-KUSUM Component C ಯೋಜನೆಯಡಿ ಫೀಡರ್‌ ಸೌರೀಕರಣಕ್ಕಾಗಿ ರಾಜ್ಯದ 400 ಉಪಕೇಂದ್ರಗಳ ಬಳಿ ಸೌರ ವಿದ್ಯುತ್‌ ಘಟಕ ಸ್ಥಾಪನೆಗೆ ಇಂಧನ ಇಲಾಖೆಗೆ ಜಮೀನು ಹಸ್ತಾಂತರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ಕೂಡಲೇ ಕಾರ್ಯಪ್ರವೃತ್ತರಾಗಿ ಕ್ರಮ ವಹಿಸಲು ಸುತ್ತೋಲೆ ಹೊರಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು PM-KUSUM Component C ಯೋಜನೆಗೆ ಗುರುತಿಸಿದ ಸರ್ಕಾರಿ ಭೂಮಿಯನ್ನು ಯೋಜನೆಯ ಅನುಷ್ಠಾನಕ್ಕಾಗಿ ಕಂದಾಯ ಇಲಾಖೆಗೆ ಹಸ್ತಾಂತರಿಸುವ ಕುರಿತು ಉನ್ನತ ಮಟ್ಟದ ಸಭೆ ನಡೆಸಿದರು.

400 ವಿದ್ಯುತ್‌ ಉಪಕೇಂದ್ರಗಳ ಸಮೀಪದಲ್ಲಿ ಫೀಡರ್‌ ಸೌರೀಕರಣ ಅನುಷ್ಠಾನಕ್ಕಾಗಿ 3000 ಎಕರೆ ಭೂಮಿ ಅಗತ್ಯವಿದೆ. ಜಿಲ್ಲಾಧಿಕಾರಿಗಳಿಗೆ ಭೂಮಿ ಹಂಚಿಕೆ ಮಾಡಲು ಅಧಿಕಾರ ಪ್ರತ್ಯಾಯೋಜನೆ ಮಾಡಿದರೆ ತ್ವರಿತವಾಗಿ ಯೋಜನೆ ಅನುಷ್ಠಾನ ಮಾಡಲು ಸಾಧ್ಯವಿದೆ. ಇದರಿಂದ ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಹಗಲು ಹೊತ್ತಿನಲ್ಲೇ ವಿದ್ಯುತ್‌ ಪೂರೈಕೆ ಮಾಡಲು ಸಹ ಸಾಧ್ಯವಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಅವರು ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಇಂಧನ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು ಸ್ಥಳೀಯ ತಹಸೀಲ್ದಾರರೊಂದಿಗೆ ಜಮೀನು ಗುರುತಿಸಿ, ಸೂಕ್ತ ಪ್ರಸ್ತಾವನೆ ಕೂಡಲೇ ಕಳುಹಿಸಿ, ಹಸ್ತಾಂರಕಕ್ಕೆ ಕ್ರಮ ಕೈಗೊಳ್ಳಲು ಸೂಚಿಸಿದರು.

ಕಂದಾಯ ಇಲಾಖೆಯು ಇಂಧನ ಇಲಾಖೆಗೆ ಭೂಮಿಯನ್ನು ಲೀಸ್‌ ಆಧಾರದಲ್ಲಿ ಹಸ್ತಾಂತರಿಸಲು ಸೂಚಿಸಿದರು. ಆದರೆ ಈ ಆಸ್ತಿಯನ್ನು ಇಂಧನ ಇಲಾಖೆ ಖಾಸಗಿಯವರಿಗೆ ಹಸ್ತಾಂತರಿಸುವಂತಿಲ್ಲ ಎಂಬ ಷರತ್ತಿನೊಂದಿಗೆ ಹಸ್ತಾಂತರಿಸಲು ಸೂಚಿಸಿದರು.

ಈ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಿ ಖುದ್ದು ಸೂಚನೆ ನೀಡುವುದಾಗಿ ಹಾಗೂ ಎಲ್ಲ ಜಿಲ್ಲಾ ಉಸ್ತುವಾರಿ ಸಚಿವರಿಗೂ ಈ ಕುರಿತು ಆದ್ಯತೆ ನೀಡಲು ಸೂಚಿಸುವುದಾಗಿ ತಿಳಿಸಿದರು.

ಸಭೆಯಲ್ಲಿ ಇಂಧನ ಸಚಿವ ಕೆ.ಜೆ. ಜಾರ್ಜ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಮುಖ್ಯಮಂತ್ರಿಯವರ ಕಾರ್ಯದರ್ಶಿ ಡಾ. ಕೆ.ವಿ. ತ್ರಿಲೋಕಚಂದ್ರ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್‌ ಕಟಾರಿಯಾ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ