ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಚಿತ್ರಕಲಾ ಪರಿಷತ್ತಿಗೆ 50 ಲಕ್ಷ ರೂ.ಗಳ ಅನುದಾನ : ಮುಖ್ಯ ಮಂತ್ರಿ ಸಿದ್ದರಾಮಯ್ಯ

ಚಿತ್ರಕಲೆಯ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಈ ಬಾರಿ 50 ಲಕ್ಷ ರೂ.ಗಳ ಅನುದಾನವನ್ನು ಪರಿಷತ್ತಿಗೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಚಿತ್ರಕಲೆಯ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ಈ ಬಾರಿ 50 ಲಕ್ಷ ರೂ.ಗಳ ಅನುದಾನವನ್ನು ಪರಿಷತ್ತಿಗೆ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಕರ್ನಾಟಕ ಚಿತ್ರಕಲಾ ಪರಿಷತ್ ವತಿಯಿಂದ ಆಯೋಜಿಸಿರುವ 21 ನೇ ಚಿತ್ರ ಸಂತೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆರ್ಟ್ ಗ್ಯಾಲರಿ ಸ್ಥಾಪಿಸಲು ನೆರವು

ಎಲ್ಲಾ ಜಿಲ್ಲೆಗಳಲ್ಲಿ ವಸ್ತು ಸಂಗ್ರಹಾಲಯ ಸ್ಥಾಪನೆ ಹಾಗೂ ಆರ್ಟ್ ಗ್ಯಾಲರಿ ಸ್ಥಾಪಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಹಾಯ ಮಾಡಲಿದೆ ಎಂದರು.

2003 ರಿಂದ ಇಂದಿನವರೆಗೆ ಚಿತ್ರಸಂತೆ ಆಚರಣೆಯಾಗುತ್ತಿದೆ. ಈ ವರ್ಷ 21 ನೇ ಚಿತ್ರಸಂತೆ ನಡೆದಿದೆ. ಹಿಂದೆ ಮುಖ್ಯಮಂತ್ರಿ ಯಾಗಿದ್ದ ಸಂದರ್ಭದಲ್ಲಿ ಪ್ರತಿ ವರ್ಷ ಚಿತ್ರಸಂತೆಯನ್ನು ಉದ್ಘಾಟಿಸಿದ್ದೇನೆ ಎಂದು ಸ್ಮರಿಸಿದರು.

22 ರಾಜ್ಯಗಳಿಂದ 1600 ಕಲಾವಿದರು

ಪ್ರತಿ ವರ್ಷ 3 ರಿಂದ 4 ಲಕ್ಷ ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ. 22 ರಾಜ್ಯಗಳಿಂದ 1600 ಕಲಾವಿದರು ಪಾಲ್ಗೊಳ್ಳುವುದು ಹೆಮ್ಮೆಯ ವಿಷಯ. ಈ ಬಾರಿ ಚಿತ್ರಸಂತೆಯನ್ನು ಬಾಹ್ಯಾಕಾಶ ವಿಜ್ಞಾನಿಗಳಿಗೆ ಸಮರ್ಪಣೆಯಾಗಿರುವುದು ಅವರಿಗೆ ಸಲ್ಲಿಸಿರುವ ವಿಶೇಷವಾದ ಗೌರವ ಸೂಚಿಸುತ್ತದೆ ಎಂದರು.

ಚಿತ್ರಸಂತೆಯಲ್ಲಿ ಭಾಗವಹಿಸಿದ ಎಲ್ಲಾ ಕಲಾವಿದರಿಗೂ ಕರ್ನಾಟಕದ ಪರವಾಗಿ ಸ್ವಾಗತಿಸಿದರು.

ಸಚಿವರಾದ ಹೆಚ್.ಕೆ.ಪಾಟೀಲ್ , ಸುಧಾಕರ್ , ಶಾಸಕರಾದ ರಿಜ್ವಾನ್ ಅರ್ಷದ್, ಅಜಯ್ ಸಿಂಗ್ , ಚಿತ್ರಕಲಾ ಪರಿಷತ್ ಅಧ್ಯಕ್ಷ ಬಿ.ಎಲ್ ಶಂಕರ್, ಉಪಾಧ್ಯಕ್ಷ ಪ್ರಭಾಕರ್ ಉಪಸ್ಥಿತರಿದ್ದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ