ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಶ್ರೀರಾಮಚಂದ್ರನನ್ನು ದೊಡ್ಡ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ವಿರೋಧಿಸುತ್ತೇವೆ: ಸಿಎಂ ಸಿದ್ದರಾಮಯ್ಯ

ಶ್ರೀರಾಮಚಂದ್ರನನ್ನು ದೊಡ್ಡ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ನಾವು ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಯಾರೂ ರಾಮಚಂದ್ರನ ವಿರುದ್ಧವಾಗಿಲ್ಲ. ಬಿಜೆಪಿ ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಳ್ಳಲು ಹೊರಟಿದೆ. ಶ್ರೀರಾಮಚಂದ್ರನನ್ನು ದೊಡ್ಡ ರಾಜಕೀಯ ವಿಷಯವಾಗಿ ಮಾಡಿಕೊಂಡಿರುವುದನ್ನು ನಾವು ವಿರೋಧಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪುಣ್ಯತಿಥಿಯ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ನಾವೆಲ್ಲರೂ ಶ್ರೀ ರಾಮಚಂದ್ರರಾಮನ ಭಕ್ತರೇ. ಬಿಜೆಪಿ ರಾಜಕೀಯವಾಗಿ ಮಾತನಾಡುತ್ತಿದ್ದು, ಅದಕ್ಕೆ ಔಷಧಿ ಇಲ್ಲ ಎಂದರು.

ರಾಮಮಂದಿರ ಉದ್ಘಾಟನೆಯ ಬಗ್ಗೆ ಪಕ್ಷದ ನಿಲುವನ್ನು ಸ್ವಾಗತಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಪಕ್ಷದ ತೀರ್ಮಾನವೇ ನಮ್ಮ ತೀರ್ಮಾನ ಎಂದರು.

ನಾವು ರಾಮಚಂದ್ರನನ್ನು ಪೂಜಿಸಿ, ಭಜಿಸಿ, ರಾಮಮಂದಿರವನ್ನು ಕಟ್ಟಿದ್ದೇವೆ. ದೇವರ ಹೆಸರಲ್ಲಿ ರಾಜಕೀಯಕ್ಕೆ ವಿರೋಧವಾಗಿದ್ದೇವೆ ಅಷ್ಟೇ ಎಂದರು.

ದೇವಸ್ಥಾನಗಳಲ್ಲಿ ಪೂಜೆಗೆ ಸೂಚಿಸಿಲ್ಲ

ಸರ್ಕಾರ ವತಿಯಿಂದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಮಾಡಲು ನಾನು ಸೂಚಿಸಿಲ್ಲ. ಬಿಜೆಪಿ ಯವರು ಅಯೋಧ್ಯೆಗೆ ಏಕೆ ಹೋಗುತ್ತಾರೆ. ಶ್ರೀ ರಾಮಚಂದ್ರ ಇಲ್ಲಿ ಇಲ್ಲವೇ, ನಮ್ಮಲ್ಲಿರುವ ಶ್ರೀರಾಮನಿಗೆ ಬೆಲೆ ಇಲ್ಲವೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಇಲ್ಲಿಯೂ ಪೂಜೆ ನಡೆಯಲಿದೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ