ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಜನಸ್ಪಂದನ | ಅರ್ಜಿಗಳ ಮಹಾಪೂರ, ಮುಖ್ಯಮಂತ್ರಿಗಳಲ್ಲಿ ನೆರವಿಗೆ ಮೊರೆ

ಗುರುವಾರ ವಿಧಾನಸೌಧದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡ ಜನ ಉದ್ಯೋಗ, ಆರೋಗ್ಯದ ನೆರವು ಕೇಳಿ ಅರ್ಜಿ ಸಲ್ಲಿಸಿದರು

ಎರಡು ಪದವಿಗಳನ್ನು ಪಡೆದಿರುವ ಬೆಂಗಳೂರಿನ ನಿವಾಸಿ ವಿಶಿಷ್ಠ ಚೇತನ ನವ್ಯಶ್ರೀ ಅವರು ತಾಯಿ ರಮಾಮಣಿ ಅವರ ಜತೆ ಬಂದು ಉದ್ಯೋಗಕ್ಕಾಗಿ ಸಿಎಂಗೆ ಮನವಿ ಮಾಡಿದರು. ಉದ್ಯೋಗ ಮೇಳದ ವೇಳೆ ಈ ಅರ್ಜಿಯನ್ನು ಪರಿಗಣಿಸುವಂತೆ ಮುಖ್ಯಮಂತ್ರಿಗಳು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.

ವಿಶಿಷ್ಟ ಚೇತನ ಸತ್ಯನಾರಾಯಣ ಅವರು ತಮ್ಮ ಡಯಾಲಿಸಿಸ್ ಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ನೆರವು ಕೊಡಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಅರ್ಜಿ ಪರಿಶೀಲಿಸಿ ಚಿಕಿತ್ಸೆಗೆ ನೆರವು ನೀಡುವಂತೆ ಸೂಚಿಸಿದರು.

ಬೆಂಗಳೂರಿನ ಜೆ.ಜೆ ನಗರ ನಿವಾಸಿ ಎಂ.ಶ್ರೀಧರ್ ಅವರ ಎರಡೂ ಮೂತ್ರಪಿಂಡಗಳು ವಿಫಲವಾಗಿದ್ದು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಆರ್ಥಿಕ ನೆರವು ಕೋರಿ ಮನವಿ ಸಲ್ಲಿಸಿದರು. ಮುಖ್ಯಮಂತ್ರಿಗಳು ಇವರ ಸಮಸ್ಯೆಗೆ ಕೂಡಲೇ ಸ್ಪಂದಿಸಿ ಪರಿಹಾರ ನೀಡುವ ಭರವಸೆ ನೀಡಿದರು.

ರಾಯಚೂರಿನ ಮೂರು ವರ್ಷದ ಶುಶಾಂತ್ ಥಲೆಸ್ಸೆಮಿಯಾ ಕಾಯಿಲೆ ಗೆ ತುತ್ತಾಗಿದ್ದಾನೆ. ಈತನನ್ನು ಜನಸ್ಪಂದನ ಕಾರ್ಯಕ್ರಮಕ್ಕೆ ಕರೆತಂದ ತಾಯಿ ಲಲಿತಾ ಅವರು ಆರ್ಥಿಕ ಸಹಾಯವನ್ನು ಕೋರಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಮುಖ್ಯಮಂತ್ರಿಗಳು ಪರಿಹಾರ ನಿಧಿಯಿಂದ ನೆರವು ಒದಗಿಸಲಾಗುವುದು ಎಂದು ಅರ್ಜಿಯನ್ನು ಸ್ವೀಕರಿಸಿ ಭರವಸೆ ನೀಡಿದರು.

ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಬಂತಹಳ್ಳಿ ಗ್ರಾಮದ 50 ವರ್ಷದ ನಾರಾಯಣಸ್ವಾಮಿ ಖಾತೆ ಬದಲಾವಣೆ ಮಾಡಲಾಗಿದ್ದು ಸರಿಪಡಿಸಿಕೊಡಿ ಎಂದು ಮುಖ್ಯಮಂತ್ರಿಗಳನ್ನು ಕೋರಿದರು. ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ಪ್ರಕರಣದ ಕುರಿತು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿದರು.

ತುಮಕೂರಿನ ಮಾಡಗಶಿರಾ ಗ್ರಾಮದ ಶಾಂತಿಬಾಯಿ ಅವರ ಬುದ್ಧಿಮಾಂದ್ಯ ಮಗುವಿಗೆ ಚಿಕಿತ್ಸೆ ಮಾಡಿಸಲು ನೆರವು ಕೋರಿ ಮುಖ್ಯ ಮಂತ್ರಿಗಳಿಗೆ ಅರ್ಜಿ ಸಲ್ಲಿಸಿದ್ದರು. ಮಗುವಿನ ಪರಿಸ್ಥಿತಿಯನ್ನು ಕಣ್ಣಾರೆ ಕಂಡು ಮರುಗಿದ ಮುಖ್ಯಮಂತ್ರಿಗಳು ನೆರವು ನೀಡುವ  ಅಭಯ ನೀಡಿದರು.

ನೆಲಮಂಗಲದ ಕ್ಯಾನ್ಸರ್ ರೋಗಿ ಚೌಡೇಶ್ವರಿಗೆ ಶಸ್ತ್ರಚಿಕಿತ್ಸೆಗೆ ಆರ್ಥಿಕ ನೆರವಿನ ಅಗತ್ಯವಿದ್ದು, ಆರ್ಥಿಕ ನೆರವು ಕೋರಿ ಮನವಿ ಸಲ್ಲಿಸಿದರು. ತಾವು ಸ್ವೀಕರಿಸಿದ ಮನವಿಯನ್ನು ಮುಖ್ಯಮಂತ್ರಿಗಳು ಪರಿಹಾರ ನಿಧಿ ಶಾಖೆಯ ಅಧಿಕಾರಿಗಳಿಗೆ ಹಸ್ತಾಂತರಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ