ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ಕಾರ್ಯನಿರ್ವಹಿಸಲಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರಿನ ಪ್ರತಿ ವಾರ್ಡ್‍ನಲ್ಲಿ ಹಾಗೂ ರಾಜ್ಯದ ಇತರೆಡೆಗಳಲ್ಲಿ ಕೂಡ ಇಂದಿರಾ ಕ್ಯಾಂಟೀನ್ ಸ್ಥಾಪಿಸಲಾಗಿದೆ. ಹಿಂದಿನ ಸರ್ಕಾರ ಊಟ ಪೂರೈಸದೇ, ಕೆಲವನ್ನು ಮುಚ್ಚಿಯೂಬಿಟ್ಟಿತ್ತು. ಬಡವರು ಊಟ ಮಾಡಬೇಕೆಂಬ ಕಾರಣಕ್ಕೆ ನಾವು ಪುನ: ಪ್ರಾರಂಭಿಸಿದ್ದೇವೆ ಎಂದರು.

ಕನ್ನಡ ನಾಡಿನ ಶ್ರಮಿಕರ-ದುಡಿಯುವ ವರ್ಗಗಳ ಬೇಡಿಕೆಗೆ ಸಿಎಂ ಸ್ಪಂದನೆ

ತಮ್ಮ ಕೈಯಾರೆ ಟ್ಯಾಕ್ಸಿ ಮತ್ತು ಕ್ಯಾಬ್ ಚಾಲಕರಿಗೆ ಊಟ ಬಡಿಸಿದ ಮುಖ್ಯಮಂತ್ರಿಗಳು

ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬಿಬಿಎಂಪಿ ವತಿಯಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಆಯೋಜಿಸಿದ್ದ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದರು.

ವಿಮಾನನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಬೇಕೆಂದು ಟ್ಯಾಕ್ಸಿ ಚಾಲಕರು ಹಾಗೂ ಇತರೆ ಚಾಲಕರ ಬೇಡಿಕೆಯಂತೆ 188 ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸುತ್ತಿದ್ದೇವೆ. ಈ ಪೈಕಿ ಈಗಾಗಲೇ 40 ಸಿದ್ದವಾಗಿದ್ದು, ಉಳಿದ್ದು ಸಿದ್ದಗೊಳ್ಳುತ್ತಿದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಅಗತ್ಯವಿತ್ತು. ಅದಕ್ಕಾಗಿ ಈಗಾಗಲೇ ಒಂದು ಉದ್ಘಾಟಿಸಲಾಗಿದೆ. ಮತ್ತೊಂದು ಇಂದಿರಾ ಕ್ಯಾಂಟೀನ್ ಇಲ್ಲಿ ಬರಲಿದೆ. ವಿಮಾನ ನಿಲ್ದಾಣದಲ್ಲಿ 2 ಇಂದಿರಾ ಕ್ಯಾಂಟೀನ್ ಬರಲಿದೆ. ಬಡವರಿಗೆ ಕಡಿಮೆ ದರಗಳಲ್ಲಿ ಊಟ ತಿಂಡಿ ದೊರೆಯಬೇಕೆನ್ನುವುದು ಇದರ ಉದ್ದೇಶ. ಬೆಳಗಿನ ಉಪಾಹಾರ 5 ರೂ. ಮಧ್ಯಾಹ್ನ ಮತ್ತು ರಾತ್ರಿ ಊಟ 10. ರೂ.ಗಳಿಗೆ ದೊರಕಲಿದೆ. ಆಹಾರದ ಮೆನು ಕೂಡ ಬದಲಾಯಿಸಲಾಗಿದೆ. ಕುಳಿತು ತಿನ್ನಲು ಅನುಕೂಲವಾಗಲೆಂದು ಡೈನಿಂಗ್ ಹಾಲ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನ ಪ್ರತಿ ವಾರ್ಡ್‍ನಲ್ಲಿ ಹಾಗೂ ರಾಜ್ಯದ ಇತರೆಡೆಗಳಲ್ಲಿ ಕೂಡ ಇಂದಿರಾ ಕ್ಯಾಂಟೀನ್ ಸ್ಥಾಪಿಸಲಾಗಿದೆ. ಹಿಂದಿನ ಸರ್ಕಾರ ಊಟ ಪೂರೈಸದೇ, ಕೆಲವನ್ನು ಮುಚ್ಚಿಯೂಬಿಟ್ಟಿತ್ತು. ಬಡವರು ಊಟ ಮಾಡಬೇಕೆಂಬ ಕಾರಣಕ್ಕೆ ನಾವು ಪುನ: ಪ್ರಾರಂಭಿಸಿದ್ದೇವೆ ಎಂದರು.

ಕುಡಿಯುವ ನೀರಿಗೆ ತೊಂದರೆಯಾಗಬಾರದೆಂದು ಸ್ಪಷ್ಟ ಸೂಚನೆ

ಬೆಂಗಳೂರಿನ ಕುಡಿಯುವ ನೀರಿನ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೇ ನೀಡಿದ ಮುಖ್ಯಮಂತ್ರಿಗಳು ಯಾವುದೇ ಕಾರಣಕ್ಕೂ ಕುಡಿಯುವ ನೀರಿಗೆ ತೊಂದರೆಯಾಗಬಾರದೆಂದು ಸ್ಪಷ್ಟ ಸೂಚನೆ ನೀಡಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಕೂಡ 2-3 ಸಭೆಗಳನ್ನು ನಡೆಸಿದ್ದು, ಎಷ್ಟೇ ಹಣ ವೆಚ್ಚವಾದರೂ ಟ್ಯಾಂಕರ್ ಹೊಸ ಕೊಳವೆಬಾವಿಗಳಿರಬಹುದು ಅಥವಾ ಕಾವೇರಿ ನೀರನ್ನಾದರೂ ಕೊಡುವ ಮೂಲಕ ಸಮಸ್ಯೆ ಬಗೆಹರಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ