ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಸಿಎಎ ಜಾರಿ, ಬಿಜೆಪಿಯ ಚುನಾವಣಾ ಗಿಮಿಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ

ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿದೆ

ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಡಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಜ್ಯದಲ್ಲಿ ಪೌರತ್ವ ಕಾಯ್ದೆ ಜಾರಿ ಬಗ್ಗೆ ಮುಖ್ಯಮಂತ್ರಿಗಳ ನಿಲುವಿನ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ, ಇಷ್ಟು ವರ್ಷಗಳ ಕಾಲ ಈ ಬಗ್ಗೆ ಮೌನವಹಿಸಿ , ಚುನಾವಣೆಯ ಹೊಸ್ತಿಲಲ್ಲಿ ಜಾರಿಗೊಳಿಸಿದ್ದಾರೆ.ರಾಜ್ಯದಲ್ಲಿ ಸಿಎಎ ಜಾರಿ ಬಗ್ಗೆ ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ಪಕ್ಷಕ್ಕೆ ಬಲ

ಜಯಪ್ರಕಾಶ್ ಹೆಗಡೆಯವರು ಮತ್ತೊಮ್ಮೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಕರಾವಳಿ ಪ್ರದೇಶದಲ್ಲಿ ಪಕ್ಷಕ್ಕೆ ಬಲ ತುಂಬಿದಂತಾಗಿದೆ ಎಂದರು.

ಮೈಸೂರು ಸಂಸದ ಪ್ರತಾಪ್ ಸಿಂಹ ಅವರಿಗೆ ಈ ಬಾರಿ ಲೋಕಸಭಾ ಚುನಾವಣೆ ಟಿಕೆಟ್ ನೀಡದೇ ಯದುವೀರ್ ಅವರಿಗೆ ಟಿಕೆಟ್ ನೀಡುವ ನಿರ್ಧಾರವನ್ನು ಬಿಜೆಪಿ ಕೈಗೊಂಡಿರುವ ಕಾರಣದ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ