ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕೇಂದ್ರವು ಕನ್ನಡಿಗರಿಗೆ ದ್ರೋಹ ಬಗೆದಿದೆ, ನಾವು ಸರ್ವರ ಹಿತ ಕಾಯಲು ಬದ್ಧ: ಮುಖ್ಯಮಂತ್ರಿ

ರಾಜ್ಯದ ಜನರ ಹಿತದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಪೆಟ್ರೋಲ್ ಮೇಲೆ ಇರುವ ಅಬಕಾರಿ ಸುಂಕವನ್ನು ಇಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗ್ರಹಿಸಿದ್ದಾರೆ.

ರಾಜ್ಯದ ಜನರ ಹಿತದೃಷ್ಟಿಯಿಂದ ಪ್ರಧಾನಿ ನರೇಂದ್ರ ಮೋದಿ ಪೆಟ್ರೋಲ್ ಮೇಲೆ ಇರುವ ಅಬಕಾರಿ ಸುಂಕವನ್ನು ಇಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮಾಡಿದ ಹಿನ್ನೆಲೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳ ಹಿನ್ನೆಲೆಯಲ್ಲಿ ಭಾನುವಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಬೆಲೆ ಏರಿಕೆಯ ಹಿನ್ನೆಲೆಯನ್ನು ವಿವರಿಸಿದ್ದಾರೆ.

“ರಾಜ್ಯ ಸರ್ಕಾರವು ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು 29.84% ಗೆ ಹಾಗೂ ಡೀಸೆಲ್‌ ಮೇಲಿನ ತೆರಿಗೆಯನ್ನು 18.44% ಗೆ ಹೆಚ್ಚಳ ಮಾಡಿದೆ. ಈ ಏರಿಕೆಯ ನಂತರವೂ ಕರ್ನಾಟಕವು ತೈಲೋತ್ಪಾನ್ನಗಳ ಮೇಲೆ ವಿಧಿಸುತ್ತಿರುವ ತೆರಿಗೆಯು ದಕ್ಷಿಣ ಭಾರತದ ರಾಜ್ಯಗಳಿಗಿಂತ ಹಾಗೂ ನಮ್ಮ ರಾಜ್ಯದ ಆರ್ಥಿಕತೆಯ ಗಾತ್ರಕ್ಕೆ ಹೋಲುವ ಮಹಾರಾಷ್ಟ್ರ ರಾಜ್ಯಕ್ಕಿಂತಲೂ ಕಡಿಮೆಯಿದೆ” ಎಂದು ವಿವರಿಸಿದ್ದಾರೆ.

“ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಮೇಲೆ ಮೌಲ್ಯವರ್ಧಿತ ತೆರಿಗೆ ( ವ್ಯಾಟ್ ) 25% ಜೊತೆಗೆ ಹೆಚ್ಚುವರಿ ತೆರಿಗೆ ರೂ. 5.12 ಇದೆ.
ಹಾಗೂ ಡೀಸೆಲ್‌ ಮೇಲೆ 21% ಇದೆ. ಇದಕ್ಕೆ ಹೋಲಿಸಿದರೆ ರಾಜ್ಯದ ಪರಿಷ್ಕೃತ ದರ ಕೂಡ ಜನರಿಗೆ ಹೊರೆಯಾಗದಂತಿದೆ. ಮೌಲ್ಯವರ್ಧಿತ ತೆರಿಗೆ ಹೆಚ್ಚಳದ ಹೊರತಾಗಿಯೂ, ರಾಜ್ಯದಲ್ಲಿ ಡೀಸೆಲ್‌ ಬೆಲೆ ಗುಜರಾತ್ ಹಾಗೂ ಮಧ್ಯಪ್ರದೇಶಗಳಿಗಿಂತ ಕಡಿಮೆಯಿದೆ. ಪೆಟ್ರೋಲಿಯಂ ಉತ್ಪನ್ನಗಳ ದರವು ಜನರಿಗೆ ಹೊರೆಯಾಗದ ರೀತಿಯಲ್ಲಿ ಲಭ್ಯವಾಗಿಸಲು ನಾವು ಬದ್ಧರಿದ್ದೇವೆ” ಎಂದು ಭರವಸೆ ನೀಡಿದ್ದಾರೆ.

“ಬಿಜೆಪಿಯ ಡಬ್ಬಲ್ ಇಂಜಿನ್ ಸರ್ಕಾರದ ಅವಧಿಯಲ್ಲಿ ರಾಜ್ಯದ ಸಂಪನ್ಮೂಲಗಳನ್ನು ಇತರೆ ರಾಜ್ಯಗಳಿಗೆ ಹಂಚಿಕೆ ಮಾಡುವ ದುರುದ್ದೇಶದಿಂದ ಕೇಂದ್ರ ಸರ್ಕಾರ ರಾಜ್ಯದ ಬಿಜೆಪಿ ಸರ್ಕಾರವನ್ನು ಬಳಸಿಕೊಂಡು ಕರ್ನಾಟಕದಲ್ಲಿ ಮೌಲ್ಯವರ್ಧಿತ ತೆರಿಗೆ ದರವನ್ನು ಕಡಿತಗೊಳಿಸುವಂತೆ ಮಾಡಿ, ತನ್ನ ಪಾಲಿನ ತೆರಿಗೆ ಹೆಚ್ಚಳ ಮಾಡುವ ಮೂಲಕ ಲಕ್ಷಾಂತರ ಕೋಟಿ ಸಂಗ್ರಹಿಸಿತ್ತು. ಈ ಅನರ್ಥ ನೀತಿಯಿಂದಾಗಿ ರಾಜ್ಯದ ರಾಜಸ್ವ ಸಂಗ್ರಹಕ್ಕೆ ದೊಡ್ಡ ಹೊಡೆತ ಬಿದ್ದರೆ, ಇದೇ ವೇಳೆ ಕೇಂದ್ರವು ಕನ್ನಡಿಗರಿಗೆ ದ್ರೋಹ ಬಗೆದು ಭರಪೂರ ತೆರಿಗೆ ಸಂಗ್ರಹಿಸಿತ್ತು” ಎಂದು ಮುಖ್ಯಮಂತ್ರಿಗಳು ಕೇಂದ್ರದ ತೆರಿಗೆ ನೀತಿಯನ್ನು ಟೀಕಿಸಿದ್ದಾರೆ.

“ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ರೂ. 9.21 ರಿಂದ ರೂ. 32.98 ಗೆ ಹಾಗೂ ಡೀಸೆಲ್‌ ಮೇಲೆ ರೂ. 3.45 ರಿಂದ ರೂ. 31.84 ಕ್ಕೆ ಹೆಚ್ಚಳ ಮಾಡಿತ್ತು. ಇದು ನಿಜವಾಗಿಯೂ ಜನರ ಮೇಲಿನ ಹೊರೆ” ಎಂದಿರುವ ಅವರು, ” ಆಗಾಗ್ಗೆ ಕೇಂದ್ರ ಸರ್ಕಾರವು ತೆರಿಗೆ ಕಡಿತಗೊಳಿಸಿದ ಹೊರತಾಗಿಯೂ ಈಗಿನ ಅಬಕಾರಿ ಸುಂಕವು ಪೆಟ್ರೋಲ್ ಮೇಲೆ ರೂ. 19.9 ಹಾಗೂ ಡೀಸೆಲ್‌ ಮೇಲೆ ರೂ. 15.8 ಇದೆ. ನರೇಂದ್ರ ಮೋದಿ ಅವರ ಸರ್ಕಾರ ಜನಹಿತದ ದೃಷ್ಟಿಯಿಂದ ಈ ತೆರಿಗೆಯನ್ನು ಇಳಿಕೆ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

“ರಾಜ್ಯ ಸರ್ಕಾರದ ಮೌಲ್ಯವರ್ಧಿತ ತೆರಿಗೆಯಲ್ಲಾದ ಬದಲಾವಣೆಯಿಂದ ಸಂಗ್ರಹವಾಗುವ ಹಣವು ನಾಡಿನ ಜನರ ಮೂಲಭೂತ ಸೇವೆಗಳು ಹಾಗೂ ಅಭಿವೃದ್ಧಿ ಯೋಜನೆಗಳಿಗೆ ಬಳಸಲ್ಪಡುತ್ತದೆ ಎಂಬ ಗ್ಯಾರಂಟಿಯನ್ನು ನಾನು ನೀಡುತ್ತೇನೆ. ನಾವು ಸರ್ವರ ಹಿತಕಾಯಲು ಮತ್ತು ಜವಾಬ್ದಾರಿಯುತ ಸರ್ಕಾರವಾಗಿ ಮುನ್ನಡೆಯಲು ಬದ್ಧರಿದ್ದೇವೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ