ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ; ರಾಜ್ಯದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಒತ್ತಾಯ

ಪ್ರಸಕ್ತ ಸಾಲಿನಲ್ಲಿ ಬಾಡಿಗೆ ಕಟ್ಟದಲ್ಲಿರುವ/ ಶಿಥಿಲಾವಸ್ಥೆಯಲ್ಲಿರುವ 100 ಪೊಲೀಸ್‌ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ 300 ಕೋಟಿ ರೂ. ಅಗತ್ಯವಿದೆ. ಇದಕ್ಕೆ ನೆರವು ಒದಗಿಸುವಂತೆಯೂ ಗೃಹ ಸಚಿವ ಅಮಿತ್‌ ಷಾ ಅವರನ್ನು ಕೋರಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್‌ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿ ಕುರಿತಂತೆ ಗಮನ ಸೆಳೆದರು.

ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು ಮತ್ತು ಸಾರ್ವಜನಿಕರ ಸುರಕ್ಷತೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರದಿಂದ ಅಗತ್ಯವಿರುವ ನೆರವಿನ ಕುರಿತ ಹಲವು ಪ್ರಸ್ತಾವನೆಗಳಿಗೆ ಅನುಮೋದನೆ ನೀಡುವಂತೆ ಮನವಿ ಮಾಡಿದರು.

ಭಾರತ ಸರ್ಕಾರವು 80 ಕೋಟಿ ರೂ. ವೆಚ್ಚದಲ್ಲಿ India Reserve Battalion ಸ್ಥಾಪನೆಗೆ ಅನುಮೋದನೆ ನೀಡಿದ್ದು, ಹೆಚ್ಚುವರಿಯಾಗಿ ಬಳ್ಳಾರಿ ಮತ್ತು ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಎರಡು ಬೆಟಾಲಿಯನ್‌ ಸ್ಥಾಪನೆಗೆ ಅನುಮೋದನೆ ನೀಡುವಂತೆ ಕೋರಿದರು.

ನಿರ್ಭಯಾ ನಿಧಿಯಡಿಯಲ್ಲಿ ಬೆಂಗಳೂರು ನಗರದಂತೆಯೇ ಮೈಸೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಮಂಗಳೂರು ಹಾಗೂ ಕಲಬುರಗಿ ನಗರಗಳಲ್ಲಿ ಸೇಫ್‌ ಸಿಟಿ ಯೋಜನೆಯನ್ನು ತಲಾ 200 ಕೋಟಿ ರೂ. ಗಳಂತೆ ಒಟ್ಟು 1000 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಕ್ಕೆ ಅನುಮೋದನೆ ನೀಡುವುದು.

ಹೈಕೋರ್ಟಿನ ಆದೇಶದಂತೆ ಬಂಧಿಸುವ ಅಧಿಕಾರ ಹೊಂದಿರುವ ಸಿಬ್ಬಂದಿಗೆ Body worn camera ಕಡ್ಡಾಯವಾಗಿರುವುದರಿಂದ ರಾಜ್ಯದಲ್ಲಿ ಇನ್ನೂ 175 ಕೋಟಿ ರೂ. ವೆಚ್ಚದಲ್ಲಿ 58,546 Body worn camera ಖರೀದಿಸುವ ಅಗತ್ಯವಿದ್ದು, 100 ಕೋಟಿ ರೂ. ನೆರವು ನೀಡುವಂತೆ ಮನವಿ ಸಲ್ಲಿಸಲಾಯಿತು.

ಪ್ರಸಕ್ತ ಸಾಲಿನಲ್ಲಿ ಬಾಡಿಗೆ ಕಟ್ಟದಲ್ಲಿರುವ/ ಶಿಥಿಲಾವಸ್ಥೆಯಲ್ಲಿರುವ 100 ಪೊಲೀಸ್‌ ಠಾಣೆಗಳಿಗೆ ಹೊಸ ಕಟ್ಟಡವನ್ನು ತಲಾ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ 300 ಕೋಟಿ ರೂ. ಅಗತ್ಯವಿದೆ. ಇದಕ್ಕೆ ನೆರವು ಒದಗಿಸುವಂತೆಯೂ ಗೃಹ ಸಚಿವ ಅಮಿತ್‌ ಷಾ ಅವರನ್ನು ಕೋರಲಾಯಿತು.

ಪೊಲೀಸ್‌ ಕ್ಯಾಂಟೀನ್‌ ಸೌಲಭ್ಯ ಮಾದರಿಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿಗೂ ಕ್ಯಾಂಟೀನ್‌ ಸ್ಥಾಪನೆಗೆ ಅಗತ್ಯ ಅನುಮತಿಗಳನ್ನು ಒದಗಿಸುವುದು, ಪೊಲೀಸ್‌ ವಸತಿ ಗೃಹಗಳ ನಿರ್ಮಾಣಕ್ಕೆ ನೆರವು, ವಿಧಿವಿಜ್ಞಾನ ಪ್ರಯೋಗಾಲಯಗಳ ಆಧುನೀಕರಣಕ್ಕೆ ನೆರವು ಮತ್ತಿತರ ವಿಷಯಗಳ ಕುರಿತು ಸಹ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ರಾಜ್ಯದ ಗೃಹ ಸಚಿವ ಡಾ. ಜಿ. ಪರಮೇಶ್ವರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಮೊದಲಾದವರು ಉಪಸ್ಥಿತರಿದ್ದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ