ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಡಾ.ಬಾಬು ಜಗಜೀವನ ರಾಂ ದೇಶದ ಜನರಿಗೆ ಆಹಾರ ಭದ್ರತೆ ಒದಗಿಸಿದವರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಕೇಂದ್ರ ಸರ್ಕಾರ ಆರಂಭಿಸಿದ್ದ ʻಭಾರತ್‌ ಅಕ್ಕಿʼ ಯೋಜನೆ ಸ್ಥಗಿತಗೊಳಿಸಿರುವ ಕುರಿತಾಗಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆಗೋಸ್ಕರ ಈ ಯೋಜನೆ ಆರಂಭಿಸಿರುವುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ

ಹಸಿರು ಕ್ರಾಂತಿಯ ಹರಿಕಾರ ಎಂದೇ ಹೆಸರಾಗಿರುವ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಅವರು ದೇಶದ ಜನರಿಗೆ ಆಹಾರ ಭದ್ರತೆಯನ್ನು ಒದಗಿಸಿದ ಮಹಾನ್‌ ವ್ಯಕ್ತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಶನಿವಾರ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಂ ಪುಣ್ಯತಿಥಿ ಅಂಗವಾಗಿ ವಿಧಾನಸೌಧ ಪಶ್ಚಿಮ ದ್ವಾರದ ಬಳಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ದೇಶದಲ್ಲಿ ತೀವ್ರ ಆಹಾರದ ಕೊರತೆಯುಂಟಾಗಿ, ಬೇರೆ ದೇಶಗಳ ಮುಂದೆ ಬೇಡಬೇಕಾದ ಪರಿಸ್ಥಿತಿ ಇತ್ತು. ಹೊಸ ತಳಿಗಳ ಅಭಿವೃದ್ದಿ ಸೇರಿದಂತೆ ಹಲವು ಕ್ರಮಗಳ ಮೂಲಕ ಜಗಜೀವನರಾಂ ಅವರು ಆಹಾರ ಭದ್ರತೆಯನ್ನು ಒದಗಿಸಿದರು.

ಜಗಜೀವನರಾಂ ಅವರು ರಕ್ಷಣಾ ಇಲಾಖೆ ಸೇರಿದಂತೆ ಯಾವುದೇ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದರೂ, ದಕ್ಷ ಆಡಳಿತ ನೀಡಿದ್ದಾರೆ. ಕಾರ್ಮಿಕರ ಪರವಾಗಿ ಅನೇಕ ಕಾಯ್ದೆಗಳನ್ನು ರಚಿಸಿದ ಕೀರ್ತಿ ಅವರದು. ಬಡವರು, ರೈತರು, ಕೂಲಿ ಕಾರ್ಮಿಕರ ಪರವಾಗಿ ನಿರಂತರವಾಗಿ ಅವರು ಹೋರಾಟ ನಡೆಸಿದ್ದಾರೆ. ಅವರು ತೋರಿದ ಹಾದಿಯಲ್ಲಿ ನಡೆಯುವ ಸಂಕಲ್ಪವನ್ನು ಈ ದಿನ ನಾವು ಮಾಡಬೇಕಾಗಿದೆ ಎಂದರು.

ಭವನ ಲೋಕಾರ್ಪಣೆ: ಸುಮಾರು 3ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಡಾ.ಬಾಬು ಜಗಜೀವನರಾಂ ಭವನವನ್ನು ಜುಲೈ 13ರಂದು ಲೋಕಾರ್ಪಣೆ ಮಾಡಲಾಗುವುದು. ಈ ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಈ ಭವನದ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಲಾಗಿತ್ತು. ಅರ್ಹ ಅಭ್ಯರ್ಥಿಗಳಿಗೆ ವಿಜ್ಞಾನ, ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಸಹ ಈ ಭವನದಲ್ಲಿ ಒದಗಿಸಲಾಗುವುದು ಎಂದರು.

ಚುನಾವಣೆಗಾಗಿ ಭಾರತ್‌ ಅಕ್ಕಿ: ಸಿಎಂ ಟೀಕೆ

ಕೇಂದ್ರ ಸರ್ಕಾರ ಆರಂಭಿಸಿದ್ದ ʻಭಾರತ್‌ ಅಕ್ಕಿʼ ಯೋಜನೆ ಸ್ಥಗಿತಗೊಳಿಸಿರುವ ಕುರಿತಾಗಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆಗೋಸ್ಕರ ಈ ಯೋಜನೆ ಆರಂಭಿಸಿರುವುದು ಇದರಿಂದ ಸ್ಪಷ್ಟವಾಗುತ್ತದೆ. ನಾವು ಅನ್ನಭಾಗ್ಯ ಯೋಜನೆಗೆ ಅಕ್ಕಿಯನ್ನು ಕೇಳಿದಾಗ, ಭಾರತೀಯ ಆಹಾರ ನಿಗಮದಲ್ಲಿ ದಾಸ್ತಾನಿದ್ದರೂ ನೀಡಲಿಲ್ಲ. ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ಅಕ್ಕಿ ನೀಡದ ಕಾರಣ ನಾವು ಜನರಿಗೆ ಹೆಚ್ವುವರಿಯಾಗಿ ಹಣ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು ಎಂದು ಹೇಳಿದರು.

ರಾಜ್ಯ ಪ್ರಥಮ

ದೇಶದ ಪ್ರತಿಷ್ಠಿತ India justice Report ನವರು ನಡೆಸಿದ ಸಮೀಕ್ಷೆ ಮತ್ತು ವರದಿಯಲ್ಲಿ , ಕರ್ನಾಟಕ ಪೊಲೀಸ್ ಇಡೀ ದೇಶದಲ್ಲೇ ನ್ಯಾಯ ನೀಡಿಕೆ (Justice delivery) ಯಲ್ಲಿ ಪ್ರಥಮ‌ ಸ್ಥಾನ‌ ಪಡೆದಿದೆ.

ಒಟ್ಟು 10 ಅಂಕಗಳನ್ನು ಇಟ್ಟು ನಡೆಸಿದ ವೈಜ್ಞಾನಿಕ ಸಮೀಕ್ಷೆಯಲ್ಲಿ ಕರ್ನಾಟಕ ಪೊಲೀಸ್ 6.38 ಅಂಕಗಳನ್ನು ಗಳಿಸುವ ಮೂಲಕ ಪ್ರಥಮ‌ ಸ್ಥಾನ ಗಳಿಸಿದೆ. India justice Report ಅನ್ನು ಗೃಹ ಸಚಿವ ಜಿ.ಪರಮೇಶ್ವರ್ ಅವರು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯ ಪ್ರಾಸ್ತಾವಿಕ ಮಾತುಗಳಲ್ಲಿ ಪ್ರಸ್ತಾಪಿಸಿ ಈ ಗುಣಮಟ್ಟ ಕಾಯ್ದುಕೊಳ್ಳುವಂತೆ ಕಿವಿ ಮಾತು ಹೇಳಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ