ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆ: ಸಿಎಂ ಸಿದ್ದರಾಮಯ್ಯ

  • ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು: ಸಿಎಂ ಕರೆ

ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು.

ಶಿವಾಜಿನಗರದ ಐತಿಹಾಸಿಕ ಬೆಸಿಲಿಕಾ ಚರ್ಚ್ ನಲ್ಲಿ ನಡೆದ ಸೇಂಟ್ ಮೇರಿ ಅಮ್ಮನವರ ಹುಟ್ಟು ಹಬ್ಬದ ಆಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.

ಕಪಟಿಗಳ ದ್ವೇಷದ ಪಿತೂರಿಗೆ ಮಹನೀಯರ ಮಾನವೀಯ ಆಶಯಗಳು ಬಲಿಯಾಗಬಾರದು. ಪರಸ್ಪರ ಸಹಬಾಳ್ವೆ, ಸೌಹಾರ್ದದ ಬೆಸುಗೆಯನ್ನು ನಾವೆಲ್ಲರೂ ಗಟ್ಟಿಗೊಳಿಸಬೇಕು ಎಂದು ಕರೆ ನೀಡಿದರು.

ಶಿವಾಜಿನಗರದ ಬೆಸಿಲಿಕಾ ಮಂದಿರ ಚಾರಿತ್ರಿಕವಾಗಿ ಸೌಹಾರ್ದ ಮಂದಿರವಾಗಿದೆ. ಎಲ್ಲಾ ಜಾತಿಯ, ಎಲ್ಲಾ ಧರ್ಮದವರು ಈ ಪ್ರಾರ್ಥನಾ ಮಂದಿರಕ್ಕೆ ನಿರಂತರವಾಗಿ ಬಂದು ಹೋಗುತ್ತಿರುವುದೇ ಈ ಮಂದಿರದ ಸೌಹಾರ್ದ ಪರಂಪರೆಗೆ ಸಾಕ್ಷಿ ಎಂದರು.

ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಕ್ರೈಸ್ತ ಧರ್ಮ ಗುರುಗಳ ಮತ್ತು ಸಂಸ್ಥೆಗಳ ಕೊಡುಗೆಯನ್ನು ಪ್ರತಿಯೊಬ್ಬರೂ ಮೆಚ್ಚಿಕೊಳ್ಳುತ್ತಾರೆ. ಇವರ ಈ ಸಾಮಾಜಿಕ‌ ಕಾರ್ಯ ಪ್ರತಿಯೊಬ್ಬರಿಗೂ ಮಾದರಿಯಾಗಲಿ ಎಂದು ಹರೈಸಿದರು.

ಬೆಸಿಲಿಕಾ ಚರ್ಚ್ ನ ಪುನರುಜ್ಜೀವನಕ್ಕೆ ಐದು ಕೋಟಿಗಳ ನೆರವನ್ನು ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

ಶಾಸಕರಾದ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮ ಆರ್ಚ್ ಬಿಷಪ್ ಡಾ.ಪೀಟರ್ ಮಚಾಡೊ ಅವರು ದಿವ್ಯ ಸಾನಿದ್ಯ ವಹಿಸಿದ್ದರು. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಮುಖ್ಯ ಅತಿಥಿಗಳಾಗಿದ್ದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ