ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸೂಚನೆ – ಮುಖ್ಯಮಂತ್ರಿ ಸಿದ್ದರಾಮಯ್ಯ

ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.

ಇಂದು ಪರಿಶಿಷ್ಟ ಪಂಗಡದ ಸಮುದಾಯಗಳ ಸಭೆ ನಡೆಸಲಾಗಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅವ್ಯವಹಾರದ ಹಿನ್ನಲೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಅನುದಾನದ ಕೊರತೆಯಾಗಬಾರದೆಂದು ಕೋರುತ್ತಾ, ಕೆಲವರು ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆಯುತ್ತಿರುವುದನ್ನು ಬಗ್ಗೆಯೂ ಸಭೆಯ ಗಮನವನ್ನು ಸೆಳೆದಿರುವುದಾಗಿ ತಿಳಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಪೂರ್ಣ ಅನುದಾನ

ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಈ ವರ್ಷದಲ್ಲಿ ನಿಗದಿಪಡಿಸಲಾಗಿರುವ ಅನುದಾನವನ್ನು ಸಂಪೂರ್ಣವಾಗಿ ಒದಗಿಸಲಾಗುವುದು. ನಿಗಮದಲ್ಲಿ ಸುಮಾರು 89.63 ಕೋಟಿ ರೂ.ಗಳ ಮೊತ್ತ ಅವ್ಯವಹಾರವಾಗಿದ್ದು, ಇದರಲ್ಲಿ 5 ಕೋಟಿ ರೂ.ಗಳನ್ನು ವಾಪಸ್ಸು ಪಡೆಯಲಾಗಿದೆ. ಉಳಿದ 84.63 ಕೋಟಿ ರೂ.ಗಳಲ್ಲಿ 71.54 ಕೋಟಿ ರೂ.ಗಳನ್ನು ವಸೂಲು ಮಾಡಲಾಗಿದೆ. ಇನ್ನುಳಿದ ಸುಮಾರು 13 ಕೋಟಿಗಳ ಮೊತ್ತವನ್ನು ವಸೂಲು ಮಾಡಿಕೊಡುವುದಾಗಿ ಎಸ್ ಐ ಟಿ ತಿಳಿಸಿದೆ. ಈ ರೀತಿ ಒಟ್ಟು ಅವ್ಯವಹಾರವಾಗಿದ್ದ ಪೂರ್ಣ ಮೊತ್ತವನ್ನೂ ಸಹ ಮರುಪಡೆಯಲಾಗುತ್ತಿದೆ. ಈ ಮಧ್ಯೆ, ಪ್ರಕರಣ ನ್ಯಾಯಾಲಯದಲ್ಲಿ, ಮುಂಬರುವ ತೀರ್ಪಿನಂತೆ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದರು.

ಉಪಚುನಾವಣೆ ಎದುರಿಸಲು ಸಿದ್ಧ

ರಾಜ್ಯದಲ್ಲಿ ನಡೆಯುವ ಉಪಚುನಾವಣೆಯನ್ನು ಎದುರಿಸಲು ಕಾಂಗ್ರೆಸ್ ಪಕ್ಷ ಸಿದ್ದವಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಚುನಾವಣೆಯನ್ನು ಸಮರ್ಥವಾಗಿ ಎದುರಿಸಲಿದ್ದೇವೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ