ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಮಳೆ ಅನಾಹುತ ವರದಿ ತರಿಸಿಕೊಂಡಿದ್ದೇವೆ: ಪರಿಹಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ: ಸಿಎಂ

ಪ್ರಕೃತಿ ವಿಕೋಪದಿಂದ ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ ಪರಿಹಾರ ನೀಡುತ್ತೇವೆ. ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.
  • ಪಕ್ಷದ ಸಿದ್ಧಾಂತ ಮತ್ತು ಸಂವಿಧಾನದ ಮೌಲ್ಯ ಒಪ್ಪಿ ಬರುವ ಎಲ್ಲರಿಗೂ ಕಾಂಗ್ರೆಸ್ಸಿಗೆ ಸ್ವಾಗತ: ಸಿಎಂ

ಪ್ರಕೃತಿ ವಿಕೋಪದಿಂದ ಬಿದ್ದಿರುವ ಮಳೆ ಕಾರಣದಿಂದ ಆಗಿರುವ ಅನಾಹುತಗಳಿಗೆ ಪರಿಹಾರ ನೀಡುತ್ತೇವೆ. ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.

ಅವರು‌ ಮೈಸೂರಿನ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಳೆ ಅನಾಹುತಗಳ ಕುರಿತು ನಿಗಾ ವಹಿಸಿದ್ದೇವೆ. ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಸ್ಥಳ ಸಮೀಕ್ಷೆ ಕೂಡ ನಡೆಯುತ್ತಿದೆ. ಪರಿಹಾರ ನೀಡುತ್ತೇವೆ ಎಂದರು.

ಚನ್ನಪಟ್ಟಣ ಮಾಜಿ ಶಾಸಕ ಸಿ.ಪಿ.ಯೋಗೀಶ್ವರ್ ಅವರು ಕಾಂಗ್ರೆಸ್ಸಿಗೆ ಸೇರಲು ಉತ್ಸುಕರಾಗಿರುವ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು, ಕಾಂಗ್ರೆಸ್ಸಿನ ಸಿದ್ಧಾಂತ ಮತ್ತು ಸಂವಿಧಾನದ ಮೌಲ್ಯಗಳನ್ನು ಒಪ್ಪಿ ಬರುವ ಎಲ್ಲರಿಗೂ ಪಕ್ಷಕ್ಕೆ ಸ್ವಾಗತ ಎಂದರು.

ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದರಾದ ಈ.ತುಕಾರಾಂ ಅವರ ಪತ್ನಿ ಅವರಿಗೆ ಟಿಕೆಟ್ ನೀಡಲಾಗುವುದು. ಚನ್ನಪಟ್ಟಣದಲ್ಲಿ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎನ್ನುವ ಚರ್ಚೆ ಆಗಿದೆ. ಡಿ.ಕೆ.ಸುರೇಶ್ ಅವರೂ ಕೂಡ ಪ್ರಭಲ ಅಭ್ಯರ್ಥಿ ಆಗಿದ್ದಾರೆ. ಒಂದೆರಡು ದಿನಗಳಲ್ಲಿ ಚನ್ನಪಟ್ಟಣ ಮತ್ತು ಶಿಗ್ಗಾಂವ್ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಎನ್ನುವುದು ಸ್ಪಷ್ಟವಾಗಲಿದೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ