ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ | ಇದು ರಾಜ್ಯ ಸರ್ಕಾರದ ಸಾಧನೆ, ಕಾಂಗ್ರೆಸ್ ಪಕ್ಷದ ಸಿದ್ಧಾಂತ, ಕಾರ್ಯಕರ್ತರ ಶ್ರಮದ ಗೆಲುವು: ಸಿಎಂ

ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಇದು ರಾಜ್ಯ ಸರ್ಕಾರದ ಸಾಧನೆ, ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮತ್ತು ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಇದು ರಾಜ್ಯ ಸರ್ಕಾರದ ಸಾಧನೆ, ಕಾಂಗ್ರೆಸ್ ಪಕ್ಷದ ಸಿದ್ಧಾಂತ ಮತ್ತು ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೂರು ವಿಧಾನ ಸಭಾ ಕ್ಷೇತ್ರಗಳ ಫಲಿತಾಂಶದಲ್ಲಿ ಕಾಂಗ್ರೆಸ್ ಪಕ್ಷ ಮೂರೂ ಕ್ಷೇತ್ರಗಳಲ್ಲಿ ಜಯಗಳಿಸಿದ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿ ಕರೆದಿದ್ದ ಮುಖ್ಯಮಂತ್ರಿಗಳು, ಈ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಅನಂತ ಧನ್ಯವಾದಗಳು. ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ ಎಂದು ಹೇಳಿ, ವಿಧಾನಸಭೆಗೆ ಪ್ರವೇಶಿಸಿರುವ ಯಾಸೀರ್‌ ಅಹ್ಮದ್‌ ಖಾನ್‌ ಪಠಾಣ್‌, ಅನ್ನಪೂರ್ಣ ತುಕಾರಾಮ್‌ ಹಾಗೂ ಸಿ.ಪಿ. ಯೋಗೇಶ್ವರ್‌ ಅವರಿಗೆ ಅಭಿನಂದಿಸಿದರು.

ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯ ಹೈಲೈಟ್ಸ್‌

  • ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ. ಈ ಗೆಲುವು ನಮ್ಮ ಸರ್ಕಾರದ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ.
  • ಇದು ಕಾಂಗ್ರೆಸ್ ಪಕ್ಷದ ಸತ್ಯ ಮತ್ತು ಬಿಜೆಪಿ-;ಜೆಡಿಸ್ ಪಕ್ಷಗಳ ಸುಳ್ಳುಗಳ ನಡುವಿನ ಚುನಾವಣೆಯಾಗಿತ್ತು. ಸತ್ಯ ಗೆದ್ದಿದೆ. ವಿರೋಧ ಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ.
  • ನಮ್ಮ ಸರ್ಕಾರದ ಸಾಧನೆಗಳನ್ನು ನಮ್ಮ ಜನ ಬೆಂಬಲಿಸುತ್ತಲೇ ಬಂದಿದ್ದಾರೆ. ನಾನು ದಂತಗೋಪುರದಲ್ಲಿ ಕೂತವನಲ್ಲ, ನಿರಂತರವಾಗಿ ಬಗ್ಗೆ ಜನರ ಜೊತೆ ಒಡನಾಟ ಇಟ್ಟುಕೊಂಡವನು, ನಮ್ಮ ಎಲ್ಲ ಗ್ಯಾರಂಟಿ ಯೋಜನಗಳ ಫಲಾನುಭವಿಗಳು ಖುಷಿಯಾಗಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಧ್ಯಮಗಳ ಮೂಲಕ ಗ್ಯಾರಂಟಿ ಯೋಝನೆಗಳ ಬಗ್ಗೆ ಅಪಪ್ರಚಾರ ಮಾಡುತ್ಗಿದ್ದರು. ಸಾಕ್ಷಾತ್ ಪ್ರಧಾನಿಯವರೇ ನಮ್ಮ ಗ್ಯಾರಂಟಿ ಯೋಜನೆಗಲ ಅನುಷ್ಟಾನದ ಬಗ್ಗೆ ಸುಳ್ಳು ಹೇಳಿದರು. ಮಹಾರಾಷ್ಟ್ರದಲ್ಲಿ ಸುಳ್ಳು ಜಾಹೀರಾತು ನೀಡಿದ್ದರು. ಇದಕ್ಕೆಲ್ಲದಕ್ಕೂ ಜನ ಉತ್ತರ ಕೊಟ್ಟಿದ್ದಾರೆ.
  • ಇವೆಲ್ಲಕ್ಕಿಂತಲೂ ಮಿಗಿಲಾಗಿ ಈ ಉಪಚುನಾವಣಾ ಫಲಿತಾಂಶ ಬೇರೆ ಕಾರಣಕ್ಕಾಗಿ ನನಗೆ ಮಹತ್ವದ್ದಾಗಿತ್ತು. ಈ ಬಾರಿ ನಾನು ಮುಖ್ಯಮಂತ್ರಿಯಾದ ನಂತರ ನನ್ನ ಮತ್ತು ನಮ್ಮ ಸರ್ಕಾರದ ವಿರುದ್ದ ಸುಳ್ಳು ಆರೋಪಗಳನ್ನು ಮಾಡುತ್ತಾ ನನ್ನ ಚಾರಿತ್ರ್ಯ ಹನನ ಮಾಡುವ ಪ್ರಯತ್ನವನ್ನು ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಾಡುತ್ತಾ ಬಂದಿದ್ದಾರೆ.
  • ಈ ಎರಡೂ ಪಕ್ಷಗಳು ಕೂಡಿ ಕೊಂಡುರಾಜಭವನದಿಂದ ಹಿಡಿದು ಕೇಂದ್ರ ತನಿಖಾ ಸಂಸ್ಥೆಗಳ ವರೆಗೆ ಎಲ್ಲವನ್ನೂ ದುರ್ಬಳಕೆ ಮಾಡಿ ಹಗರಣವನ್ನು ಸೃಷ್ಟಿಸಿ ನನ್ನನ್ನು ಮತ್ತು ನನ್ನ ಕುಟುಂಬವನ್ನು ಹಣಿಯುವ ಪ್ರಯತ್ನ ಮಾಡಿದ್ದರು. ರಾಜಕೀಯ ದ್ವೇಷಸಾಧನೆಗಾಗಿ ನನ್ನ ಕುಟುಂಬದ ವಿರುದ್ದವೂ ಸುಳ್ಳು ಆರೋಪವನ್ನು ಮಾಡಿ ತನಿಖೆ ನಡೆಸುವಂತೆ ಮಾಡಿದರು. ನನ್ನನ್ನು ಕಟ್ಟಿಹಾಕುವ ದೂರಾಲೋಚನೆಯಿಂದಲೇ ಬಿಜೆಪಿ ನಾಯಕರು ನನ್ನ ಮತ್ತು ನನ್ನ ಪತ್ನಿಯ ಮೇಲೆ ಸುಳ್ಳು ಆರೋಪಗಳನ್ನು ಮಾಢಿದ್ದಾರೆ.
  • ಆದರೆ ಕರ್ನಾಟಕದ ಜನತೆ ಕಳೆದ ನಾಲ್ಕು ದಶಕಗಳ ನನ್ನ ರಾಜಕಾರಣವನ್ನು ಕಂಡಿದ್ದಾರೆ. ಬಿಜಪೆ ಮತ್ತು ಜೆಡಿಎಸ್ ನಾಯಕರ ಸುಳ್ಳುಗಳನ್ನು ಯಾರೂ ನಂಬಿಲ್ಲ. ಇದಕ್ಕೆ ಚುನಾವಣಾ ಫಲಿತಾಂಶವೇ ಸಾಕ್ಷಿ.
  • ಎರಡನೆಯದಾಗಿ ಬಿಜೆಪಿ ಮತ್ತು ಜೆಡಿಎಸ್ ಅಪಪ್ರಚಾರದ ಮೂಲಕ ಧಾರ್ಮಿಕ ಉನ್ಮಾದಗಳನ್ನು ಸೃಷ್ಟಿಸಿ ಜಾತಿ-ಧರ್ಮಗಳ ನಡುವೆ ಒಡಕು ಮೂಡಿಸಿ ಕಾಂಗ್ರೆಸ್ ಪಕ್ಷವನ್ನು ಮಣಿಸಲು ಪ್ರಯತ್ನಿಸಿದೆ. ಕರ್ನಾಟಕದ ಜಾತ್ಯತೀತ ಮತ್ತು ಶಾಂತಿಪ್ರಿಯ ಇದನ್ನು ಒಪ್ಪಿಕೊಳ್ಳದೆ ನಮ್ಮನ್ನು ಗೆಲ್ಲಿಸಿದ್ದಾರೆ.
  • ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ದದ ಮತದಾರರ ೧೩೬ ಸ್ಥಾನಗಳನ್ನು ನೀಡಿ ನಮ್ಮನ್ನು ಗೆಲ್ಲಿಸಿದ್ದಾರೆ. – ಆದರೆ ಚುನಾವಣಾ ಫಲಿತಾಂಶದ ಮರುದಿನದಿಂದಲೇ ಬಿಜೆಪಿ ಮತ್ತು ಜೆಡಿಎಸ್ ಕೂಡಿಕೊಂಡು ನಮ್ಮ ಸರ್ಕಾರವನ್ನು ಉರುಳಿಸುವ ಪ್ರಯತ್ನ ಶುರು‌ಮಾಡಿದ್ದರು. ಸಾವಿರಾರು ಕೋಟಿ ರೂಪಾಯಿಗಳನ್ನು ಸುರಿದು ನಮ್ಮ ಶಾಸಕರನ್ನು ಖರೀದಿಸುವ ದುಷ್ಟ ಪ್ರಯತ್ನ‌ ಮಾಡಿದ್ದರು. – ಈ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ರಾಜ್ಯದ ಜನತೆ ಸಹಿಸಿಲ್ಲ ಎನ್ನುವುದನ್ನು ಕೂಡಾ ಈ ಫಲಿತಾಂಶ ಹೇಳಿದೆ..
  • ನಾವು ಶಿಗ್ಗಾಂವ್ ಕ್ಷೇತ್ರದಲ್ಲಿ ಮುಸ್ಲಿಮ್ ಅಭ್ಯರ್ಥಿಗೆ ಟಿಕೆಟ್ ನೀಡಿದಾಗ ಒಂದಷ್ಟು ವಿರೋಧ ವ್ಯಕ್ತವಾಗಿರುವುದು ನಿಜ. ಇದರಿಂದ ಹಿಂದೂ ಮತ ಧ್ರುವೀಕರಣವಾಗುತ್ತದೆ ಎಂಬ ಶಂಕೆಯನ್ನು ಕೆಲವರು ವ್ಯಕ್ತಪಡಿಸಿದ್ದರು. ನನ್ನ ಮೇಲೆಯೂ ಒತ್ತಡ ಇತ್ತು. ಹೀಗಿದ್ದರೂ ಮುಸ್ಲಿಮ್ ವ್ಯಕ್ತಿಗೆ ನಾವು ಟಿಕೆಟ್ ಕೊಟ್ಟೆವು. ಜಾತಿ-ಧರ್ಮದ ಭೇದ ಮಾಡದೆ ಸಮರ್ಥ ಅಭ್ಯರ‍್ಥಿಗೆ ಮತ ಹಾಕಿ ಎಂದು ಕೇಳಿಕೊಂಡೆವು. ಜನ ನಮ್ಮ ಮಾತಿಗೆ ಒಪ್ಪಿಕೊಂಡು ಶಿಗ್ಗಾಂವ್ ನಲ್ಲಿ ನಮ್ಮ ಅಭ್ಯರ‍್ಥಿಯನ್ನು ಗೆಲ್ಲಿಸಿದ್ದಾರೆ. ಇದು ಬಿಜೆಪಿಯವರ ಕೋಮುವಾದಿ ರಾಜಕಾರಣಕ್ಕೆ ನೀಡಿದ ಉತ್ತರವಾಗಿದೆ ಎಂಧು ನಾನು ಭಾವಿಸಿದ್ದೇನೆ.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ