ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಮೇಕೆದಾಟು ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಅನುಷ್ಠಾನದ ಕುರಿತು ಗಮನ ಹರಿಸಲು ಸಿಎಂ ಸಿದ್ದರಾಮಯ್ಯ ಮನವಿ

ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್‌ ಅವರಿಗೆ ಬೇಡಿಕೆ ಪತ್ರ ಸಲ್ಲಿಕೆ

ನವದೆಹಲಿ: ಬಹುಬೇಡಿಕೆಯ ಮೇಕೆದಾಟು ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಅನುಷ್ಠಾನದ ಕುರಿತು ವೈಯಕ್ತಿಕವಾಗಿ ಗಮನ ಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೇಡಿಕೆ ಪತ್ರದ ಮೂಲಕ ಕೇಂದ್ರ ಜಲಶಕ್ತಿ ಸಚಿವ ಸಿ. ಆರ್. ಪಾಟೀಲ್‌ ಅವರಿಗೆ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ಬೇಡಿಕೆ ಪತ್ರ ಹೀಗಿದೆ:

ದೇಶದಲ್ಲೇ ರಾಜಸ್ಥಾನವನ್ನು ಹೊರತುಪಡಿಸಿದರೆ ಕರ್ನಾಟಕ ಅತಿ ಹೆಚ್ಚು ಒಣ ಭೂಮಿ ಹೊಂದಿರುವ ರಾಜ್ಯವಾಗಿದೆ.  ಕರ್ನಾಟಕದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಹಾಗೂ ಅನುಷ್ಠಾನಗೊಳಿಸಲಾಗಿರುವ ನೀರಾವರಿ ಯೋಜನೆಗಳು ರಾಜ್ಯದ ಕೃಷಿ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆಗಳಿಗೆ ಕಾರಣವಾಗಿವೆ. ಉತ್ಪಾದನೆಯಲ್ಲಿನ ಹೆಚ್ಚಳ, ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆಯಿಂದ ನೀರಿನ ನಿರ್ವಹಣೆಯಲ್ಲಿ ಸುಧಾರಣೆ, ಹವಾಮಾನ ವೈಪರೀತ್ಯದ ನಿರ್ವಹಣೆ ಮೂಲಕ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿದೆ. ರಾಜ್ಯ ಸರ್ಕಾರ ಕೃಷಿ ಉತ್ಪಾದನೆ ಹೆಚ್ಚಳ, ರೈತರ ಆದಾಯ ಹೆಚ್ಚಳ  ಮಾಡಲು ಪೂರಕವಾಗಿ ನಿರಂತರ ಮತ್ತು ಸಮರ್ಪಕ ನೀರಾವರಿ ಪೂರೈಕೆಗೆ ಬದ್ಧವಾಗಿದೆ.

ಕರ್ನಾಟಕ ರಾಜ್ಯದ ನೀರಾವರಿ ಯೋಜನೆ/ವಿಷಯಗಳಿಗೆ ಅನುಮತಿ ನೀಡುವುದಕ್ಕೆ ಸಂಬಂಧಿಸಿದಂತೆ ನಾನು ತಮ್ಮ ಗಮನ ಸೆಳೆಯಬಯಸುತ್ತೇನೆ. ಕೇಂದ್ರ ಸರ್ಕಾರದ ಅನುಮತಿಗಾಗಿ ಬಾಕಿಯಿರುವ ಕರ್ನಾಟಕದ ಮೇಕೆದಾಟು ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಗಳ ಅನುಷ್ಠಾನದ ಕುರಿತು ತಾವು ವೈಯಕ್ತಿಕವಾಗಿ ಗಮನ ಹರಿಸಲು ಮನವಿ ಮಾಡುತ್ತೇನೆ.

ಕರ್ನಾಟಕ ರಾಜ್ಯದ ಬಾಕಿಯಿರುವ ಎಲ್ಲಾ ನೀರಾವರಿ ಯೋಜನೆಗಳಿಗೆ/ಪ್ರಸ್ತಾವನೆಗಳಿಗೆ ಅನುಮತಿ/ಕ್ಲಿಯರೆನ್ಸ್‌ ನೀಡಲು ಜಲಶಕ್ತಿ ಸಚಿವಾಲಯಕ್ಕೆ ತಾವು ನಿರ್ದೇಶನ ನೀಡಬೇಕು. ಈ ಯೋಜನೆಗಳು ರಾಜ್ಯದ ನೀರಾವರಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆ ಮೂಲಕ ರೈತರ ಕಲ್ಯಾಣಕ್ಕೆ ನೆರವಾಗಲಿದೆ ಎಂದು ಮುಖ್ಯಮಂತ್ರಿಗಳು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ