ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ತಮಿಳುನಾಡಿನ ರಾಜ್ಯಪಾಲರ ಏಕಪಕ್ಷೀಯ ತೀರ್ಮಾನಗಳನ್ನು ರದ್ದುಪಡಿಸಿರುವ ಸುಪ್ರೀಂ ತೀರ್ಪು ಮೋದಿ ಸರ್ಕಾರಕ್ಕೆ ಎಚ್ಚರಿಕೆಯ ಪಾಠ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜ್ಯ ಸರ್ಕಾರ ಅಂಗೀಕರಿಸಿದ ಮಸೂದೆಗಳಿಗೆ ರಾಪ್ಟ್ರಪತಿಗಳ ಅಂಕಿತ ಪಡೆಯುವ ಪ್ರಕ್ರಿಯೆ ಗರಿಷ್ಠ ಮೂರು ತಿಂಗಳ ಅವಧಿಯೊಳಗೆ ನಡೆಯಬೇಕು ಎಂದು ಕಾಲಮಿತಿ ನಿಗದಿ ಸ್ವಾಗತಾರ್ಹ.

ಬೆಂಗಳೂರು: ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕಾರ್ಯನಿರ್ವಹಿಸುತ್ತಿದ್ದ ತಮಿಳುನಾಡಿನ ರಾಜ್ಯಪಾಲರಾದ ಆರ್.ಎನ್.ರವಿ ಅವರನ್ನು ತರಾಟೆಗೆ ತೆಗೆದುಕೊಂಡು, ಏಕಪಕ್ಷೀಯವಾಗಿ ಅವರು ಕೈಗೊಂಡಿರುವ ತೀರ್ಮಾನಗಳನ್ನು ರದ್ದುಪಡಿಸಿರುವ ಸುಪ್ರೀಂ ಕೋರ್ಟ್ ತೀರ್ಪು ದೇಶದ ಎಲ್ಲ ರಾಜ್ಯಪಾಲರು ಮತ್ತು ತೆರೆಯ ಹಿಂದೆ ಆಟವಾಡುತ್ತಿದ್ದ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಎಚ್ಚರಿಕೆಯ ಪಾಠವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುಪ್ರೀಂ ತೀರ್ಪಿನ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಮುಖ್ಯಮಂತ್ರಿ, ಸುಪ್ರೀಂಕೋರ್ಟಿನ ತೀರ್ಪು ರಾಜ್ಯಪಾಲ ಹುದ್ದೆಯ ಕರ್ತವ್ಯಗಳ ಇತಿ-ಮಿತಿಯನ್ನು ಸ್ಪಷ್ಟವಾಗಿ ವ್ಯಾಖ್ಯಾನಿಸಿರುವ ಕಾರಣದಿಂದಾಗಿ ಈ ಬಗ್ಗೆ ಇದ್ದ ಗೊಂದಲಗಳು ನಿವಾರಣೆಯಾಗಿದೆ. ರಾಜ್ಯ ಸರ್ಕಾರ ಅಂಗೀಕರಿಸಿದ ಮಸೂದೆಗಳಿಗೆ ರಾಪ್ಟ್ರಪತಿಗಳ ಅಂಕಿತ ಪಡೆಯುವ ಪ್ರಕ್ರಿಯೆ ಗರಿಷ್ಠ ಮೂರು ತಿಂಗಳ ಅವಧಿಯೊಳಗೆ ನಡೆಯಬೇಕು ಎಂದು ಕಾಲಮಿತಿಯನ್ನು ಸುಪ್ರೀಂ ಕೋರ್ಟ್ ನಿಗದಿಪಡಿಸಿರುವುದರಿಂದ ಇಲ್ಲಿಯ ವರೆಗಿನ ಗೊಂದಲಗಳು ನಿವಾರಣೆಯಾಗಿದೆ ಎಂದಿದ್ದಾರೆ.

ಬಿಜೆಪಿಯೇತರ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ರಾಜ್ಯಪಾಲರು ಸಂವಿಧಾನದ ಆಶಯ ಮತ್ತು ಸಾಂವಿಧಾನಿಕ ಹುದ್ದೆಯ ಘನತೆ-ಗೌರವವನ್ನು ಗಾಳಿಗೆ ತೂರಿ ಕೇಂದ್ರ ಸರ್ಕಾರದ ಕೈಗೊಂಬೆಗಳಾಗಿ ವರ್ತಿಸುತ್ತಿರುವ ಆರೋಪಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚು ಹೆಚ್ಚು ಕೇಳಿ ಬರತೊಡಗಿವೆ. ಇದರಿಂದಾಗಿ ಗೌರವಾನ್ವಿತ ರಾಜ್ಯಪಾಲರ ಹುದ್ದೆ ಜನತೆಯ ವಿಶ್ವಾಸವನ್ನು ಕಳೆದುಕೊಳ್ಳುವಂತಾಗಿದೆ. ತಮ್ಮ ಪಕ್ಷವನ್ನು ಜನ ತಿರಸ್ಕರಿಸಿದ ರಾಜ್ಯಗಳಲ್ಲಿ ತಮ್ಮ ಅಣತಿಯನ್ನು ಪಾಲಿಸುವ ರಾಜ್ಯಪಾಲರನ್ನು ನೇಮಿಸಿ ಅವರ ಮೂಲಕ ಪರೋಕ್ಷವಾಗಿ ಆಡಳಿತವನ್ನು ನಿಯಂತ್ರಿಸಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಬಗೆಯುತ್ತಿರುವ ದ್ರೋಹವಾಗಿದೆ ಎಂದು ಕಿಡಿಕಾರಿದ್ದಾರೆ.

ಕರ್ನಾಟಕದಲ್ಲಿ ಕೂಡ ವಿಧಾನಮಂಡಲ ಅಂಗೀಕರಿಸಿದ ಕೆಲವು ಮಸೂದೆಗೆಳ ಬಗ್ಗೆ ರಾಷ್ಟ್ರಪತಿಗಳ ಅಂಕಿತ ಪಡೆಯಲು ರಾಜ್ಯಪಾಲರು ವಿಳಂಬ ಧೋರಣೆಯನ್ನು ಅನುಸರಿಸುತ್ತಿರುವುದು ಸಂಘರ್ಷಕ್ಕೆ ಕಾರಣವಾಗಿದೆ. ಹೀಗಿದ್ದರೂ ನಮ್ಮ ಸರ್ಕಾರ ಅನಗತ್ಯವಾಗಿ ಈ ಬೆಳವಣಿಗೆಗೆ ರಾಜಕೀಯ ಬೆರೆಸದೆ ಸಂಯಮದಿಂದ ನಡೆದುಕೊಂಡಿದೆ. ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವಿನ ಅನಗತ್ಯ ಸಂಘರ್ಷವನ್ನು ಸುಪ್ರೀಂ ಕೋರ್ಟ್‌ನ ಈ ತೀರ್ಪು ಶಾಶ್ವತವಾಗಿ ಕೊನೆಗೊಳಿಸಲಿದೆ ಎಂಬ ನಂಬಿಕೆ ಹೊಂದಿರುವುದಾಗಿ ತಿಳಿಸಿದ್ದಾರೆ.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ