ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಮನುಸ್ಮೃತಿಯ ಜಾತಿ ವಿಷದ ಕಾರಣಕ್ಕೇ ಮಡಿವಾಳ ಸಮಾಜ ಹಿಂದುಳಿದಿದೆ

ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ 

ಬೆಂಗಳೂರು, ಏಪ್ರಿಲ್‌ 18: ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. 

ಕೆಂಗೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಲಿದೇವ ಕನ್ವೆಷ್ನನ್ ಹಾಲ್ ಲೋಕಾರ್ಪಣೆಗೊಳಿಸಿ ಮಾತನಾಡಿದರು. 

ಮಡಿವಾಳ ಮತ್ತು ಹಿಂದುಳಿದ ಸಮುದಾಯದ ಮಕ್ಕಳು ಶಿಕ್ಷಣವಂತರಾಗಬೇಕು. ಇದಕ್ಕೇ ವಿದ್ಯಾಸಿರಿ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಒಂದೂವರೆ ಸಾವಿರದಿಂದ ಎರಡು ಸಾವಿರ ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಘೋಷಿಸಿದರು. 

12ನೇ ಶತಮಾನದಲ್ಲೇ ಮಡಿವಾಳ ಮಾಚಿ ದೇವರು ಬಸವಣ್ಣನವರ ಜೊತೆ ಸೇರಿ ಸಮಾಜದ ಬದಲಾವಣೆಗೆ ಮುಂದಾಗಿದ್ದರು. ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಕಾರಣಕ್ಕೆ ಅಸಮಾನತೆ ಇದೆ. ಈ ಕಾರಣಕ್ಕೆ ಉದ್ಯೋಗ, ಶಿಕ್ಷಣ ಸಿಗದೆ ಆರ್ಥಿಕ ಅಸಮಾನತೆ ಹೆಚ್ಚಾಯಿತು ಎಂದು ವಿವರಿಸಿದರು.  

ಬಸವಾದಿ ಶರಣರು ಜಾತಿಮುಕ್ತ ಮನುಷ್ಯ ಸಮಾಜ ನಿರ್ಮಾಣಕ್ಕೆ ಹೋರಾಡಿದ್ದರು. ಒಟ್ಟಿಗೆ ಕುಳಿತು ಊಟ ಮಾಡಲಾಗದ ಅನಿಷ್ಠ ಪದ್ಧತಿ ವಿರುದ್ಧ ಧ್ವನಿ ಎತ್ತಿ ಜಾತಿ ಅಸಮಾನತೆ ಅಳಿಸಲು ಹೋರಾಡಿದ್ದನ್ನು ವಿವರಿಸಿದರು.

ಎಲ್ಲಾ ಜಾತಿ, ಸಮುದಾಯಗಳ ಜಾತ್ಯತೀತ ಪ್ರತಿನಿಧಿಗಳನ್ನೊಳಗೊಂಡ ಅನುಭವ ಮಂಟಪದ ಉದ್ದೇಶವೇ ಜಾತಿ ಮುಕ್ತ ಸಮಾಜದ ನಿರ್ಮಾಣವಾಗಿತ್ತು ಎಂದರು.

ಮಡಿವಾಳ ಸಮಾಜದಲ್ಲಿ ಯಾರೂ ಶಾಸಕರಿಲ್ಲ, ಒಬ್ಬರು ಮಾತ್ರ ಐಎಎಸ್‌ ಅಧಿಕಾರಿ ಇದ್ದಾರೆ. ಮಡಿವಾಳ ಸಮಾಜ ಇಷ್ಟು ಹಿಂದುಳಿಯಲು ಮನುಸ್ಮೃತಿ ಕಾರಣ. ಈ ಅಸಮಾನತೆ ಕಾರಣಕ್ಕೇ ಮನುಸ್ಮೃತಿಯನ್ನು ಅಂಬೇಡ್ಕರ್ ಅವರು ಬೆಂಕಿ ಹಾಕಿ ಸುಟ್ಟರು. ಈ ಮನುಸ್ಮೃತಿಯೇ ಜಾತಿ ವ್ಯವಸ್ಥೆಯ ಮೂಲ ಎಂದರು. 

ಮಡಿವಾಳ ಸಮುದಾಯದ ಮಕ್ಕಳು ಹೆಚ್ಚೆಚ್ಚು ಶಿಕ್ಷಣ ಪಡೆಯಬೇಕು ಎನ್ನುವ ಉದ್ದೇಶದಿಂದಲೇ ನಾವು ವಿದ್ಯಾಸಿರಿ ಯೋಜನೆ ಜಾರಿಗೆ ತಂದೆವು. ಈಗ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಎರಡು ಸಾವಿರಕ್ಕೆ ಹೆಚ್ಚಿಸಲಾಗುವುದು, ಜೊತೆಗೆ ಮಡಿವಾಳ ಸಮುದಾಯದ ಹಾಸ್ಟೆಲ್‌ಗೆ ಅಗತ್ಯ ಸವಲತ್ತು ಒದಗಿಸಲಾಗುವುದು ಎಂದರು. 

ಸಂವಿಧಾನ ವಿರೋಧಿಗಳನ್ನು ದೂರ ಇಡಿ

ಸಮಾನತೆ ಸಾರುವ ಸಂವಿಧಾನವನ್ನು ವಿರೋಧಿಸುವವರನ್ನು ದೂರ ಇಡಿ. ಹತ್ತಿರ ಸೇರಿಸಬೇಡಿ. ಸಂವಿಧಾನ ವಿರೋಧಿಗಳ ಜೊತೆ ಕೈ ಜೋಡಿಸುವುದು ಮಡಿವಾಳ ಮಾಚಿದೇವರಿಗೆ ಮಾಡುವ ಅವಮಾನ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ