ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕನ್ನಡಿಗರು ಉದ್ವೇಗ ಅಥವಾ ಪ್ರಚೋದನೆಗಳಿಗೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು

ಅನ್ಯಾಯಕ್ಕೊಳಗಾದ ವ್ಯಕ್ತಿಗೆ ನ್ಯಾಯ ಕೊಡಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ. ಕನ್ನಡಿಗರು ಮಾತೃ ಭಾಷೆಯ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ. ಭಾಷೆಯ ವಿಚಾರಕ್ಕೆ ವಿನಾಕರಣ ಇತರರ ಮೇಲೆ ಹಲ್ಲೆ ಮಾಡುವ ಅಥವಾ ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ʼಎಕ್ಸ್‌ʼ ಜಾಲತಾಣದ ಮೂಲಕ ತಮ್ಮ ಪ್ರತಿಕ್ರಿಯೆಯನ್ನು ಹಂಚಿಕೊಂಡಿದ್ದಾರೆ.

ದೇಶದ ಮೂಲೆ ಮೂಲೆಗಳಿಂದ ಬಂದು ಇಲ್ಲಿ ನೆಲೆಸಿರುವ ಪ್ರತಿಯೊಬ್ಬರನ್ನು ಗೌರವದಿಂದ ಕಾಣುತ್ತಿರುವ, ಅವರನ್ನೂ ಕನ್ನಡಿಗರೇ ಎಂದು ಪ್ರೀತಿಸುವ ಸಂಸ್ಕೃತಿ ಕನ್ನಡ ಮಣ್ಣಿನದ್ದು. ಇದಕ್ಕೆ ಇತಿಹಾಸ ಸಾಕ್ಷಿ. ರಾಷ್ಟ್ರೀಯ ಮಾಧ್ಯಮಗಳು ತಮ್ಮ ಜವಾಬ್ದಾರಿ ಮತ್ತು ವೃತ್ತಿಧರ್ಮ ಮರೆತು ಯಾರೋ ಒಬ್ಬ ಮಾಡಿದ ಆಧಾರ ರಹಿತ ಆರೋಪವನ್ನು ಹಿಡಿದುಕೊಂಡು ಇಡೀ ಕರ್ನಾಟಕದ ಘನತೆಗೆ ಮಸಿಬಳಿಯುವ ಕೆಲಸವನ್ನು ಮಾಡಿದ್ದು ನಿಜಕ್ಕೂ ವಿಷಾದನೀಯ. ಇದರಿಂದ ಪ್ರತಿಯೊಬ್ಬ ಕನ್ನಡಿಗನ ಮನಸಿಗೆ ಘಾಸಿಯಾಗಿದೆ ಎಂದು ತಿಳಿಸಿದ್ದಾರೆ.

ಕನ್ನಡಿಗರು ಉದ್ವೇಗ ಅಥವಾ ಪ್ರಚೋದನೆಗಳಿಗೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು. ಕನ್ನಡಿಗರಿಂದ ಆಯ್ಕೆಯಾದ ಕನ್ನಡದ್ದೆ ಸರ್ಕಾರ ಕರ್ನಾಟಕದಲ್ಲಿದೆ.
ನಿನ್ನೆಯ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿರಲಿ, ಯಾವ ಹುದ್ದೆಯಲ್ಲೇ ಇರಲಿ‌ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಕಮಿಷನರ್ ಅವರಿಗೆ ಆದೇಶಿಸಿದ್ದೇನೆ. ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಅನ್ಯಾಯಕ್ಕೊಳಗಾದ ವ್ಯಕ್ತಿಗೆ ನ್ಯಾಯ ಕೊಡಿಸಲು ಬದ್ಧವಾಗಿದೆ ಎಂಬುದಾಗಿ ಭರವಸೆ ನೀಡಿದ್ದಾರೆ.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ