ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಹಾಗೂ ಅಭಿವೃದ್ಧಿ ಪ್ರಾಧಿಕಾರದ ಸಭೆ

ಖಾಸಗಿಯವರಿಂದ ಒತ್ತುವರಿಯಾಗಿರುವ  ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಸಭೆಯು ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ನಡೆಯಿತು.

ಸಭೆಯ ಮುಖ್ಯಾಂಶಗಳು:

  • ಖಾಸಗಿಯವರಿಂದ ಒತ್ತುವರಿಯಾಗಿರುವ  ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.
  • ರಾಜ್ಯದಲ್ಲಿ ಒಟ್ಟು ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಅಂದಾಜು 10710 ಕೆರೆಗಳ ಅಳತೆ ಬಾಕಿ ಇದ್ದು ಎರಡು ತಿಂಗಳ ಒಳಗೆ ಸರ್ವೇ ಕಾರ್ಯ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲು ಅಭಿವೃದ್ಧಿ ಆಯುಕ್ತರಿಗೆ ಸೂಚಿಸಿದರು.
  • ವಿವಿಧ ಇಲಾಖಾವಾರು ವ್ಯಾಪ್ತಿಗೆ ಬರುವ ಕೆರೆಗಳ ಸರ್ವೆ ಕಾರ್ಯ, ಒತ್ತುವರಿ ತೆರವುಗೊಳಿಸಿರುವ ಹಾಗೂ ತೆರವಿಗೆ ಬಾಕಿ ಇರುವ ಕೆರೆಗಳ ಮಾಹಿತಿ ಪಡೆದರು.
  • ಗ್ರಾಮೀಣಾಭಿವೃದ್ಧಿ, ಸಣ್ಣ ನೀರಾವರಿ, ಬಿಬಿಎಂಪಿ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ, ಬೃಹತ್ ನೀರಾವರಿ ಇಲಾಖೆ, ಅರಣ್ಯ, ಕಂದಾಯ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ರಾಜ್ಯದಲ್ಲಿರುವ  41875 ಕೆರೆಗಳ ಪೈಕಿ 31033 ಕೆರೆಗಳು  ಅಳತೆ ಯಾಗಿವೆ.
  • 11212 ಒತ್ತುವರಿ ಗುರುತಿಸಲಾಗಿದೆ. 5967ಕೆರೆಗಳ ಒತ್ತುವರಿ ತೆರವು ಗೊಳಿಸಲಾಗಿದೆ. ಸುಮಾರು 5245 ಕೆರೆಗಳು ತೆರವು ಗೊಳಿಸಲು ಬಾಕಿ ಇರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದರು.
  • ಸಣ್ಣ ನೀರಾವರಿ ಇಲಾಖೆಗೆ ಸಂಬಂಧಿಸಿದಂತೆ ಒಟ್ಟು  3778 ಕೆರೆಗಳಿದ್ದು, 166 ಕೆರೆಗಳ  ಒತ್ತುವರಿ ತೆರವು ಕಾರ್ಯ ಬಾಕಿ ಇದೆ.
  • ಬೆಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ 202 ಕೆರೆ ಗಳಿದ್ದು 167 ಕೆರೆಗಳು ಅಳತೆಯಾಗಿದ್ದು, ಸುಮಾರು 96 ಕೆರೆಗಳ ಒತ್ತುವರಿ ತೆರವು ಬಾಕಿ ಇದೆ.
  • ಕೆರೆಗಳ  ಮಲಿನವಾಗದಂತೆ  ತಡೆಯಲು ಸಂಸ್ಕರಣಾ ಘಟಕಗಳನ್ನು  ಸ್ಥಾಪಿಸಲು ಕಾರ್ಯ ಯೋಜನೆ ಸಿದ್ಧಪಡಿಸಿ ಪ್ರಸ್ತಾವನೆ ಸಲ್ಲಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು.
  • ಕೆರೆಗಳಲ್ಲಿ ಮೀನುಗಾರಿಕೆ ಚಟುವಟಿಕೆಗಳಿಂದ  ಆದಾಯ ಗಳಿಸಲು ಸಾಧ್ಯವಾಗುವಂತೆ ಆನ್ಲೈನ್ ಟೆಂಡರ್ ಕರೆಯಲು ಸಭೆಯಲ್ಲಿ ಹಾಜರಿದ್ದ ಮೀನುಗಾರಿಕೆ ಇಲಾಖೆ  ಅಧಿಕಾರಿಗಳಿಗೆ ಸೂಚಿಸಿದರು.
  • ಕೆರೆಗಳ ಸುತ್ತ ಬಫರ್ ಜೋನ್ ಅನ್ನು ನಿಗದಿ ಪಡಿಸಲು  ತಾಂತ್ರಿಕ ಸಮಿತಿ ರಚಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್, ಸಚಿವರಾದ ಬೈರತಿ ಸುರೇಶ್, ಕೆ.ಎನ್ ರಾಜಣ್ಣ, ಎಂ.ಎಸ್ ಬೋಸರಾಜು, ಮಂಕಾಳ ವೈದ್ಯ, ರಹೀಂ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ಮುಖ್ಯ ಕಾರ್ಯದರ್ಶಿಗಳಾದ ಡಾ.‌ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ ಅತೀಕ್,  ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ