ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ: ಸಿ.ಎಂ ಘೋಷಣೆ

ಮಲೈ ಮಹದೇಶ್ವರ ಲಾಡು ಪ್ರಸಾದಕ್ಕೂ ತಿರುಪತಿ ಮಾದರಿಯಲ್ಲಿ ನಂದಿನಿ ತುಪ್ಪ ಬಳಕೆಗೆ ಸಭೆ ನಿರ್ಣಯ

ಮಲೈ ಮಹದೇಶ್ವರ ಏ24: ಮಲೈ ಮಹದೇಶ್ವರ ಬೆಟ್ಟ ಇನ್ನು ಮುಂದೆ ಪಾನ ಮುಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಇಲ್ಲಿಯವರೆಗೂ ಬೆಟ್ಟದಲ್ಲಿ, ಪ್ರಾಧಿಕಾರದ ವ್ಯಾಪ್ತಿಯಲ್ಲಿ ಮಾರಾಟ ಮುಕ್ತ ಇತ್ತು. ಇನ್ನು ಮುಂದೆ ಹೊರಗಿನಿಂದ ತರುವುದಕ್ಕೂ ತಡೆ ಹಾಕಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ಇತರೆ ನಿರ್ಣಯಗಳು

  • ಹಿಂದಿನ ಪ್ರಾಧಿಕಾರದ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳು ಒಂದೂವರೆ ವರ್ಷದಿಂದ ಜಾರಿ ಆಗದೇ ಇರುವುದಕ್ಕೆ ಮುಖ್ಯಮಂತ್ರಿಗಳು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರನ್ನು ತೀವ್ರವಾಗಿ ಪ್ರಶ್ನಿಸಿದರು.
  • ಪ್ರಾಧಿಕಾರದ ಕೆಲಸ ಕಾರ್ಯಗಳು, ಕಾಮಗಾರಿಗಳು ಸೂಕ್ತವಾಗಿ, ವೇಗವಾಗಿ ನಡೆಯಲು ಒಬ್ಬ AEE ಯನ್ನು ಪ್ರಾಧಿಕಾರಕ್ಕೇ ನೇಮಿಸಲು ಲೋಕೋಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ್ ಅವರಿಗೆ ಸೂಚಿಸಿದರು.
  • ಹಿಂದಿನ‌ ಸಭೆಯ ನಿರ್ಣಯದಂತೆ ಪ್ರವಾಸಿಗರ ಶೆಲ್ಟರ್ ಮತ್ತು ಶೌಚಾಲಯಗಳ ಕಾಮಗಾರಿ ಪೂರ್ಣಗೊಳ್ಳದ ಬಗ್ಗೆ ಸಿಎಂ ತರಾಟೆಗೆ ತೆಗೆದುಕೊಂಡರು.
  • ಪ್ರಾಧಿಕಾರ ಮತ್ತು ಮಹದೇಶ್ವರ ಬೆಟ್ಟಕ್ಕೆ ಸೇರಿದ ಜಾಗದಲ್ಲಿ ನೆಲೆಸಿರುವ 13 ಕುಟುಂಬಗಳಿಗೆ ಪರ್ಯಾಯ ಸ್ಥಳ ಒದಗಿಸಿ ಸ್ಥಳಾಂತರಿಸುವ ಮತ್ತು ಉಳಿದಿರುವವರನ್ನು ಹಾಗೇ ಉಳಿಸಿ, ಹೊಸದಾಗಿ ವಾಣಿಜ್ಯ ಉದ್ದೇಶದ ನಿರ್ಮಾಣಗಳಿಗೆ ಅವಕಾಶ ಆಗದಂತೆ ಖಚಿತವಾಗಿ ತಡೆಯುವ ಬಗ್ಗೆ ಚರ್ಚೆ ನಡೆಸಲಾಯಿತು.
  • ಮಲೈ ಮಹದೇಶ್ವರ ಬೆಟ್ಟದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಆಗುವುದನ್ನು ಸಂಪೂರ್ಣ ತಡೆಯಬೇಕು. ಚಾಳಿ ಬಿದ್ದ ಆರೋಪಿಯೊಬ್ಬ ಗಡಿಪಾರು ಆದರೂ ಅಕ್ರಮ ಮಾರಾಟ ಮಾಡುತ್ತಿರುವುದನ್ನು ಅಧಿಕಾರಿಗಳಿಂದ ತಿಳಿದ ಸಿಎಂ ಅವರನ್ನು ತಕ್ಷಣ ಕಠಿಣ ಕಾನೂನಿನ ಅಡಿ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದರು.
  • ಪ್ರಾಧಿಕಾರದಲ್ಲಿ ಕೆಲಸ ಮಾಡುವ 66 ಕಾರ್ಮಿಕ ಕುಟುಂಬಗಳಿಗೆ ತಲಾ 20 ಲಕ್ಷ ವೆಚ್ಚದಲ್ಲಿ, ಒಟ್ಟು 12-13 ಕೋಟಿ ವೆಚ್ಚದಲ್ಲಿ ಆದಷ್ಟು ಬೇಗ ನೂತನ ಮನೆ ಕಟ್ಟಿ ಕೊಡಲು ಸಭೆ ನಿರ್ಣಯ.
  • ಮಲೈ ಮಹದೇಶ್ವರ ಬೆಟ್ಟದ ಪ್ರಸಾದ ಲಾಡುಗೆ , ತಿರುಪತಿ ದೇವಸ್ಥಾನದ ಮಾದರಿಯಲ್ಲಿ ನಂದಿನಿ ತುಪ್ಪ ಬಳಸಿ, ಪ್ರಸಾದದ ಗುಣಮಟ್ಟವನ್ನು ಇನ್ನಷ್ಟು ಉನ್ನತೀಕರಿಸುವುದು. ಮದಿನ ದಿನಗಳಲ್ಲಿ 100 ಗ್ರಾಂ ತೂಕದ ಪ್ರಸಾದ ಲಾಡುವನ್ನು ಕೇವಲ 35 ರೂಪಾಯಿಗೆ ವಿತರಿಸುವ ಬಗ್ಗೆ ಸಭೆ ನಿರ್ಣಯಿಸಿತು.

(ಸಭೆ ಮುಂದುವರೆದಿದೆ)

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ