ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕೃಷ್ಣಾ ನ್ಯಾಯಾಧೀಕರಣ: ಗೆಜೆಟ್ ಅಧಿಸೂಚನೆ ಹೊರಡಿಸಲು ಸಭೆಯಲ್ಲಿ ಒತ್ತಾಯಿಸಲಾಗುವುದು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಮೇ 5: ಕೇಂದ್ರದ ಜಲಶಕ್ತಿ ಸಚಿವರು ಮೇ 7 ರಂದು ಕೃಷ್ಣಾ ಕಣಿವೆಯ ಸಭೆಯನ್ನು ಕರೆದಿದ್ದು, ಸಭೆಯಲ್ಲಿ ಕೂಡಲೇ ಅಧಿಸೂಚನೆ ಹೊರಡಿಸಲು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು.

ಸಭೆಗೆ ಪೂರಕವಾಗಿ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಸೇರಿದಂತೆ ಸಚಿವರು, ಕಾನೂನು ತಜ್ಞರು ಹಾಗೂ ಅಧಿಕಾರಿಗಳೊಂದಿಗೆ ಇಂದು ಸಭೆ ನಡೆಸಲಾಯಿತು. ಸಭೆಯಲ್ಲಿ ರಾಜ್ಯದ ನಿಲುವು ಏನಿರಬೇಕೆಂದು ಚರ್ಚಿಸಲಾಗಿದೆ ಎಂದರು.

ಕೃಷ್ಣಾ ಜಲವಿವಾದ ನ್ಯಾಯಮಂಡಳಿ -2 ದಿನಾಂಕ 30-12- 2010 ರಲ್ಲಿ ತೀರ್ಪು ನೀಡಿದ ನಂತರ 2013 ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ತದನಂತರ ಈವರೆಗೆ ಕೇಂದ್ರ ಸರ್ಕಾರ ಯಾವುದೇ ಅಧಿಸೂಚನೆ ಹೊರಡಿಸಿಲ್ಲ. ನಾನು ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಂದ್ರದ ನೀರಾವರಿ ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಿದ ನಂತರ ಸಭೆಯನ್ನು ಕರೆಯಲಾಗಿದೆ.

ಎರಡನೇ ನ್ಯಾಯಾಧಿಕರಣದ ಆದೇಶದಲ್ಲಿ 173 ಟಿ.ಎಂ.ಸಿ ನೀರನ್ನು ಬಳಸಿಕೊಳ್ಳಲು ಸೂಚಿಸಿದೆ. 519 ಮೀಟರ್ ಗಳಿಂದ 524 ಮೀಟರ್ ಗಳಿಗೆ ಅಣೆಕಟ್ಟಿನ ಎತ್ತರವನ್ನು ಹೆಚ್ಚಿಸಿದರೆ ಕರ್ನಾಟಕಕ್ಕೆ ಹಂಚಿಕೆ ಮಾಡಿರುವ ನೀರನ್ನು ಬಳಸಿಕೊಳ್ಳಲು ಸಾಧ್ಯವಾಗುತ್ತದೆ. ಅದಕ್ಕಾಗಿ ಗೆಜೆಟ್ ಅಧಿಸೂಚನೆ ಹೊರಡಿಸಬೇಕು. ಸಭೆಯಲ್ಲಿಯೂ ಈ ಬಗ್ಗೆ ಒತ್ತಾಯಿಸಲಾಗುವುದು ಎಂದ ಮುಖ್ಯಮಂತ್ರಿಗಳು ತೆಲಂಗಾಣ ಮತ್ತು ಆಂಧ್ರ ಪ್ರದೇಶ ಕೂಡ ಅರ್ಜಿ ಹಾಕಿಕೊಂಡಿದೆ. ಅವರು ತಮ್ಮ ಪಾಲಿಗೆ ಹಂಚಿಕೆಯಾಗಿರುವದನ್ನು ಬಳಸಿಕೊಳ್ಳಲಿ . ಈ ಬಗ್ಗೆ ನಾವು ಒತ್ತಾಯ ಮಾಡಿದ್ದು, ಸರ್ವೋಚ್ಛ ನ್ಯಾಯಾಲಯದಿಂದ ಯಾವುದೇ ಮಧ್ಯಂತರ ಆದೇಶ ಹೊರಡಿಸದ ಕಾರಣ 524 ಮೀಟರ್‌ಗಳಿಗೆ ಹೆಚ್ಚಿಸುವ ಕೆಲಸವನ್ನು ಮಾಡುತ್ತೇವೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ