ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ವಿಕೇಂದ್ರೀಕರಣದಲ್ಲಿ ಜನರ ಒಳಗೊಳ್ಳುವಿಕೆ ಮುಖ್ಯ, ಜನರ ಅಭಿಪ್ರಾಯಗಳಿಗೆ ಮನ್ನಣೆ ನೀಡಬೇಕು

ಯೋಜನಾ ಮತ್ತು ಅಭಿವೃದ್ಧಿ ಸಮಿತಿಗಳು ಬಜೆಟ್ ಮಂಡನೆಗೆ, ಪೂರ್ವದಲ್ಲಿಯೇ ಸಭೆ ಕರೆದು ಅಭಿಪ್ರಾಯಗಳನ್ನು ಚರ್ಚಿಸಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ವಿಕೇಂದ್ರೀಕರಣದಲ್ಲಿ ಜನರ ಒಳಗೊಳ್ಳುವಿಕೆ ಮುಖ್ಯ. ಜನರ ಅಭಿಪ್ರಾಯಗಳಿಗೆ ಮನ್ನಣೆ ನೀಡಬೇಕು. ಯೋಜನಾ ಮತ್ತು ಅಭಿವೃದ್ಧಿ ಸಮಿತಿಗಳು ಬಜೆಟ್ ಮಂಡನೆಗೆ ಪೂರ್ವದಲ್ಲಿ ಸಭೆ ಕರೆದು ಅಭಿಪ್ರಾಯಗಳನ್ನು ಚರ್ಚಿಸಬೇಕು. ರಾಜ್ಯದ ನೀತಿ ಆಯೋಗದ ಉಪಾಧ್ಯಕ್ಷರು ನಿಯಮಿತವಾಗಿ ರಾಜ್ಯ ಪ್ರವಾಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಜಂಟಿ ಸಭೆಯಲ್ಲಿ ಅವರು ಮಾತನಾಡಿದರು.

ನೀತಿ ಯೋಜನೆ ಸಮಿತಿಗಳ ಆಯ್ಕೆ ಕಾಲಕಾಲಕ್ಕೆ ಆಗುವ ಕುರಿತಂತೆ ಹಾಗೂ ಸಭೆಗಳು ನಿಯಮಿತವಾಗಿ ನಡೆಯಲು ಅಧಿಕಾರಿಗಳು ಕ್ರಮ ವಹಿಸಬೇಕು. ಅಂತೆಯೇ ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ನಡೆಯಬೇಕು. ಇದಕ್ಕೆ ಸಂಬಂಧಿಸಿ ಕ್ರಮ ಕೈಗೊಳ್ಳಲಾಗುವಂತೆ ಜಿಲ್ಲಾಧಿಕಾರಿಗಳು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗುವುದು. ತಾಲ್ಲೂಕು, ಜಿಲ್ಲಾ ಮಟ್ಟದ ಸಮಿತಿಯ ಶಿಫಾರಸ್ಸುಗಳನ್ನು ಗಮನಕ್ಕೆ ತಂದು ಬಜೆಟ್ ಪೂರ್ವ ಸಭೆಗಳಲ್ಲಿ ಮಂಡಿಸಬೇಕು. ವಿಕೇಂದ್ರೀಕರಣದ ಪರ, ಅಧಿಕಾರವನ್ನು ಗ್ರಾಮ ಮಟ್ಟಕ್ಕೆ ತೆಗೆದುಕೊಂಡು ಹೋಗಬೇಕು. ಸಂವಿಧಾನದ (73)(74)ರನ್ವಯ ಗ್ರಾಮ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಸರಿಯಾಗಿ ಪಾಲನೆ ಆಗುತ್ತಿಲ್ಲ ಇದನ್ನು ಪರಿಶೀಲಿಸಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಗ್ರಾಮ ಹಾಗೂ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳಾ ಮೀಸಲಾತಿ, ಹಿಂದುಳಿದವರಿಗೆ ಮೀಸಲಾತಿ ಸರಿಯಾಗಿ ಪಾಲನೆ ಆಗುತ್ತಿದೆಯೇ ಗಮನ ವಹಿಸಲು ಉಪಾಧ್ಯಕ್ಷರಿಗೆ ಸೂಚಿಸಿದ್ದೇನೆ. ಸ್ಥಳೀಯ ಸಂಸ್ಥೆಗಳ ಆರ್ಥಿಕ ಸಹಾಯ ಒದಗಿಸಲು ಹಣಕಾಸು ಆಯೋಗದ ಅಧ್ಯಕ್ಷರಾದ ಸಿ ನಾರಾಯಣಸ್ವಾಮಿ ಅವರು ವರದಿಯನ್ನು ನೀಡಿದ್ದು ಅದರ ಜಾರಿಗೆ ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಂವಿಧಾನದ 73ನೇ ತಿದ್ದುಪಡಿ ಅನ್ವಯ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಜವಾಬ್ದಾರಿ ನಕ್ಷೆಯನ್ನು ಸಿದ್ದಪಡಿಸಲು 2023-24ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಲಾಗಿತ್ತು. ಅದರಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯು 13 ಇಲಾಖೆಗಳಿಗೆ ಸಂಬಂಧಿಸಿದಂತೆ ಜವಾಬ್ದಾರಿ ನಕ್ಷೆಯನ್ನು ಸಿದ್ದಪಡಿಸಿದ್ದು, ಅದರಲ್ಲಿ ಆರೋಗ್ಯ ಇಲಾಖೆ, ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ, ಕೃಷಿ, ಜಲಾನಯನ ಅಭಿವೃದ್ಧಿ, ತೋಟಗಾರಿಕೆ ಮತ್ತು ರೇಷ್ಮೆ ಸೇರಿದಂತೆ 9 ಇಲಾಖೆಗಳ ಕಾರ್ಯಚಟುವಟಿಕೆಯ ಜವಾಬ್ದಾರಿ ನಕ್ಷೆಗಳು ಅಧಿಸೂಚನೆಗೊಂಡಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಶಿಕ್ಷಣ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗಳಿಂದ ಸಹಮತಿ ಬಾಕಿ ಇರುತ್ತದೆ ಎಂದು ತಿಳಿಸಿದರು.

2ನೇ ಹಂತದಲ್ಲಿ ಬಾಕಿ ಇರುವ ಉಳಿದ 16 ಇಲಾಖೆಗಳ ಕಾರ್ಯಚಟುವಟಿಕೆಗಳ ಜವಾಬ್ದಾರಿ ನಕ್ಷೆಯನ್ನು 2025ರ ಆಗಸ್ಟ್ 15ರ ಒಳಗೆ ಪೂರ್ಣಗೊಳಿಸಲು ಸೂಚಿಸಿದರು. ಗ್ರಾಮ ಠಾಣಾ ಗಡಿಯನ್ನು ಬಹಳ ಹಿಂದೆ ನಿಗದಿ ಪಡಿಸಲಾಗಿದ್ದು ಪ್ರಸ್ತುತ ವಿಸ್ತರಣೆ ಆಗಿರುವ ಪ್ರದೇಶವನ್ನು ಪುನರ್ ಸಮೀಕ್ಷೆ ಮಾಡಿಸಿ ನಿಗದಿ ಪಡಿಸಲು ಕಂದಾಯ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಕ್ರಮ ವಹಿಸುವ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದು, ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಮೂಲಭೂತ ಸೌಕರ್ಯ ಅಭಿವೃದ್ಧಿಗೊಳಿಸಲು ಲ್ಯಾಂಡ್ ಬ್ಯಾಂಕ್ ಸ್ಥಾಪನೆ , ಗ್ರಾಮ ನಕ್ಷೆ ಹೊಂದಿರದ ಗ್ರಾಮಗಳಿಗೆ ಗ್ರಾಮ ನಕ್ಷೆ ರಚನೆ ಕುರಿತಂತೆಯೂ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಗ್ರಾಮೀಣಾಭಿವೃದ್ಧಿ ಸಚಿವರಾದ ಪ್ರಿಯಾಂಕ್ ಖರ್ಗೆ, 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ ನಾರಾಯಣಸ್ವಾಮಿ,
ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ ಆರ್ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್ ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ