ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ತಿಪ್ಪೇಸ್ವಾಮಿಯವರು ಜನಪರ ವಿಚಾರಗಳಲ್ಲಿ ಮುಲಾಜು ನೋಡದೆ ಮಾತನಾಡುತ್ತಿದ್ದರು: ಸಿ.ಎಂ.ಸಿದ್ದರಾಮಯ್ಯ

ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು; ವ್ಯಕ್ತಿತ್ವದಿಂದ ಅಳೆಯಬೇಕು: ಸಿಎಂ

ಬೆಂಗಳೂರು ಮೇ 27: ತಿಪ್ಪೇಸ್ವಾಮಿಯವರು ಜನಪರ ವಿಚಾರಗಳಲ್ಲಿ ಮುಲಾಜು ನೋಡದೆ ಮಾತನಾಡುತ್ತಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಮರಿಸಿದರು. ಬೀ ಕಲ್ಚರ್ ಸಂಸ್ಥೆ ಕೊಂಡಜ್ಜಿ ಸಭಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಾ. ಬಿ.ಎಂ.ತಿಪ್ಪೇಸ್ವಾಮಿ ಅವರ “ಮುಟ್ಟಿಸಿಕೊಂಡವರು” ಕೃತಿಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಸತ್ಯವನ್ನು ಅತ್ಯಂತ ನಿಷ್ಠುರವಾಗಿ ಹೇಳುತ್ತಿದ್ದರು. ಈ ಕಾರಣಕ್ಕಾಗಿ ಅವರು ಹಲವು ಬಾರಿ ಸತ್ಯ ಹೇಳಿ ಸಮಸ್ಯೆಗೆ ಸಿಕ್ಕಿಕೊಂಡರು ಎಂದು ಹಳೆಯ ಘಟನೆಗಳನ್ನು ನೆನಪಿಸಿಕೊಂಡರು. ಡಾ.ತಿಪ್ಪೇಸ್ವಾಮಿಯವರ ಜೊತೆ ನಾನೂ 1985 ರಿಂದ ಶಾಸಕನಾಗಿದ್ದೆ. ಸಚಿವರಾಗುವ ಎಲ್ಲಾ ಅರ್ಹತೆಗಳಿದ್ದರೂ ಶಾಸಕಾಂಗ ಪಕ್ಷದ ಉಪನಾಯಕರಾದರೇ ಹೊರತು ಸಚಿವರಾಗಲಿಲ್ಲ ಎನ್ನುವ ಬೇಸರ ನನಗೂ ಇದೆ.

ಅಸ್ಪೃಶ್ಯತೆ ಸಮಾಜಕ್ಕೆ ಅಂಟಿದ ಶಾಪ. ಅಸ್ಪೃಶ್ಯ ಸಮಾಜದಿಂದ ಬಂದ ಅತ್ಯಂತ ಪ್ರತಿಭಾವಂತ ವೈದ್ಯರಾಗಿದ್ದರು. ಶಿಕ್ಷಣ ಅಸ್ಪೃಶ್ಯತೆ ಮತ್ತು ದಾಸ್ಯದಿಂದ ಮುಕ್ತಿ ದೊರಕಿಸಿಕೊಡುತ್ತದೆ ಎಂದರು.

ತಿಪ್ಪೇಸ್ವಾಮಿಯವರು ತಮ್ಮ‌ ಸಮಾಜ, ಸಮುದಾಯದ ಪ್ರಗತಿ ಮತ್ತು ಅಭಿವೃದ್ಧಿಗೆ ಸದಾ ತುಡಿಯುತ್ತಿದ್ದರು. ಅಂಬೇಡ್ಕರ್ ಅವರೂ ಕೂಡ ಇಡೀ ಸಮಾಜ ಮತ್ತು ಸಮುದಾಯಕ್ಕಾಗಿ ತಮ್ಮ ಶಿಕ್ಷಣ ಮತ್ತು ಜ್ಞಾನವನ್ನು ಮುಡಿಪಾಗಿಟ್ಟು ಹೋರಾಡಿದರು ಎಂದು ವಿವರಿಸಿದರು‌ . ಈಗ ಬಹಳಷ್ಟು ಮಂದಿ ಶಿಕ್ಷಿತರು ತಮ್ಮ ಸಮುದಾಯದಿಂದ ದೂರ ಉಳಿಯುತ್ತಾರೆ ಎಂದರು.

ಶೋಷಿತರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ಬಂದಾಗ ಮಾತ್ರ ಜಾತಿ ಪ್ರಭಾವ ಕಡಿಮೆ ಆಗುತ್ತದೆ. ಜಾತಿಗೆ ಚಲನೆ ಇಲ್ಲ. ವರ್ಗಕ್ಕೆ ಮಾತ್ರ ಚಲನೆ ಇದೆ ಎಂದರು. ಪ್ರತಿಭೆಯನ್ನು ಜಾತಿಯಿಂದ ಅಳೆಯುವುದು ತಪ್ಪು. ವ್ಯಕ್ತಿತ್ವದಿಂದ ಅಳೆಯಬೇಕು ಎಂದರು.

ಸಮಾಜ ಸಮಾನ ಅವಕಾಶಗಳಿಂದ ಪರಿವರ್ತನೆ ಆದಾಗ ಮೀಸಲಾತಿ ಅಗತ್ಯವಿಲ್ಲ. ಜಾತಿ ವ್ಯವಸ್ಥೆ ಇರುವವರೆಗೂ ಮೀಸಲಾತಿ ಅಗತ್ಯ ಎನ್ನುವ ಅಂಬೇಡ್ಕರ್ ಅವರ ಮಾತನ್ನು ಸ್ಮರಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ