ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಆರ್ಥಿಕ ಶಕ್ತಿ ತುಂಬುವುದು ನಮ್ಮ ಸರ್ಕಾರದ ಉದ್ದೇಶ – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು : ಇಂದು ವಿಧಾನಸೌಧದ ಸಮಿತಿಯಲ್ಲಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ  ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರ ಸಭೆ ನಡೆಯಿತು. ಸಭೆಯಲ್ಲಿ ಹಲವು ವಿಷಯಗಳ ಚರ್ಚಿಸುವುದರ ಜೊತೆಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.


ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರ ಸಭೆಯ ಮುಖ್ಯಾಂಶಗಳು:

ಬೆಂಗಳೂರಿನಲ್ಲಿ ಭೂಮಿ ಬೆಲೆ ಹೆಚ್ಚಾಗಿರುವುದರಿಂದ ಎಲ್ಲರೂ ಬೆಂಗಳೂರಿನಲ್ಲಿಯೇ ಉದ್ದಿಮೆ ಪ್ರಾರಂಭಿಸುವುದರ ಬದಲಾಗಿ ಆಯಾ ಜಿಲ್ಲೆಯವರು ಆಯಾ ಜಿಲ್ಲೆಗಳಲ್ಲಿಯೇ ಕೈಗಾರಿಕೆ ಪ್ರಾರಂಭಿಸಲು ಮುಖ್ಯಮಂತ್ರಿಗಳು
ಸೂಚಿಸಿದರು .

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರ ಕೈಗಾರಿಕೆಗಳಿಗೆ ಇದುವರೆಗೂ 192 ಎಕರೆ ಮಂಜೂರು ಆಗಿದ್ದು,
ಇನ್ನೂ 280 ಎಕರೆ ಪ್ರದೇಶದ ಅವಶ್ಯಕತೆ ಇರುವುದಾಗಿ ಸಲ್ಲಿಸಿದ ಮನವಿಯನ್ನು ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಿರಿಸಿದ ಕೈಗಾರಿಕಾ ಜಾಗವನ್ನು ಬೇರೆಯವರಿಗೆ ನೀಡಲಾಗಿದೆ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರ ಸಂಘದ ಅಧ್ಯಕ್ಷರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಇದನ್ನು ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಆರ್ಥಿಕ ಶಕ್ತಿ ತುಂಬುವುದು ನಮ್ಮ ಸರ್ಕಾರದ ಉದ್ದೇಶ. ಅದಕ್ಕೆ ಬೇಕಾದ ಎಲ್ಲಾ ನೆರವನ್ನು ಸರ್ಕಾರ ನೀಡಲಿದೆ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರಿಗೆ ಕೆಐಎಡಿಬಿ ಕೈಗಾರಿಕಾ ಪ್ರದೇಶದಲ್ಲಿ ವಿವಾದಗಳಿರುವಂತಹ ಭೂಮಿಗಳನ್ನು ಹಂಚಿಕೆ ಮಾಡಲಾಗಿದೆ ಎನ್ನುವ ಸಮಸ್ಯೆಗೆ ಸ್ಪಂದಿಸಿ ಕೈಗಾರಿಕೆ ಪ್ರದೇಶದಲ್ಲಿ ಸೂಕ್ತ ಪ್ರದೇಶಗಳನ್ನು ಹಂಚಿಕೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು .

ಸಮಾಜ ಕಲ್ಯಾಣ ಇಲಾಖೆಯಿಂದ ಉದ್ದಿಮೆದಾರರಿಗೆ ಬರಬೇಕಾಗಿರುವ ಬಾಕಿ ಇರುವ ಹಣ ಶೀಘ್ರ ಬಿಡುಗಡೆ ಮಾಡಲು ಅಧಿಕಾರಿಗಳಿಗೆ ಸೂಚಿಸಿದರು

ಕೆಐಎಡಿಬಿ ಇ ಖಾತಾ ಹಂಚಿಕೆಯಲ್ಲಿರುವ ಸಮಸ್ಯೆಗಳನ್ನು ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಿದರು .

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ