ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು: ಸಿ.ಎಂ.ಸಿದ್ದರಾಮಯ್ಯ

ಲಕ್ಕುಂಡಿ ಜೂ 3: ಲಕ್ಕುಂಡಿಯಲ್ಲಿ ಬಯಲು ವಸ್ತು ಸಂಗ್ರಹಾಲಯ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಲಕ್ಕುಂಡಿಯ ಉದ್ದೇಶಿತ ಬಯಲು ವಸ್ತು ಸಂಗ್ರಹಾಲಯ ಪ್ರದೇಶದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಲಕ್ಕುಂಡಿ ಚಾಲುಕ್ಯರ ರಾಜಧಾನಿ ಆಗಿತ್ತು. ಈಗ ಹೆಚ್.ಕೆ.ಪಾಟೀಲ ಆಸಕ್ತಿಯಿಂದಾಗಿ, ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ ನಮ್ಮ ಸರ್ಕಾರದ ಅವಧಿಯಲ್ಲೇ ರಚನೆಯಾಗಿದೆ. ಚಾಲುಕ್ಯರ ಕಾಲದ ದೇವಸ್ಥಾನ, ಕೋಟೆ ಗಳನ್ನು ನಿರ್ಮಿಸಿದ್ದರು. ಇವುಗಳ ಅವಶೇಷಗಳ ಮೂಲಕ ಆ ಕಾಲದ ಶಿಲಾಶಾಸನಗಳ ಪರಿಚಯ ಮತ್ತು ರಾಜ್ಯಭಾರದ ಮಾಹಿತಿ ದೊರಕಿದೆ ಎಂದರು.

ಇಲ್ಲಿ ದೊರೆತಿರುವ ಅವಶೇಷಗಳ‌ ಪುನರುಜ್ಜೀವನಕ್ಕೆ ಸರ್ಕಾರದಿಂದ ಹಣ ಕೂಡ ಕೊಟ್ಟಿದ್ದೇವೆ. ಇದರಿಂದ ಐತಿಹಾಸಿಕ ಕುರುಹುಗಳನ್ನು ಸಂಗ್ರಹಿಸಲು, ರಕ್ಷಿಸಲು ಸಾಧ್ಯವಾಗಿದೆ ಎಂದರು. ಪ್ರಾಚ್ಯಾವಶೇಷಗಳು ದೊರೆತ ಸ್ಥಳದ ಜಾಗ ಮತ್ತು ಮನೆಗಳನ್ನು ಸರ್ಕಾರಕ್ಕೆ ಹಸ್ತಾಂತರಿಸಿದವರಿಗೆ ಧನ್ಯವಾದ ಅರ್ಪಿಸಿದರು.

ಕಾನೂನು ಉಲ್ಲಂಘಿಸಿದವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ: ಕಾನೂನು ಉಲ್ಲಂಘಿಸಿ ಧರ್ಮದ ಹೆಸರು ಹೇಳಬಾರದು

ರಾಜ್ಯದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಯಾರೇ ಆದರೂ, ಎಷ್ಟೇ ಪ್ರಭಾವಿ ಆದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಕಾನೂನು ಉಲ್ಲಂಘಿಸಿ ಕ್ರಿಮಿನಲ್ ಕೆಲಸ ಮಾಡೋದು ಬಳಿಕ ಧರ್ಮದ ಹೆಸರು ಹೇಳುವುದು ತಪ್ಪಲ್ಲವೇ ಎಂದು ಪ್ರಶ್ನಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ