ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಹಿಂಬಾಕಿ ಕುರಿತು ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ಬಳಿಕ ನಿರ್ಧಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳೊಂದಿಗಿನ ಸಭೆಯಲ್ಲಿ ಹೇಳಿಕೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಹಿಂಬಾಕಿ ಪಾವತಿ ಕುರಿತಾಗಿ ಚರ್ಚೆ ನಡೆಸಲಾಯಿತು.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಪ್ರಮುಖವಾಗಿ ಮೂರು ಬೇಡಿಕೆಗಳನ್ನು ಮುಂದಿಟ್ಟರು. 1. ದಿನಾಂಕ 01.01.2020ರ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿಯನ್ನು ಪಾವತಿಸಬೇಕು, 2. ದಿನಾಂಕ 01.01.2024ರಿಂದ ಜಾರಿಗೆ ಬರುವಂತೆ ವೇತನ ಪರಿಷ್ಕರಣೆ ಮಾಡಬೇಕು, 3. ದಿನಾಂಕ 01.01.2024ರಿಂದ ಇಂದಿನವರೆಗಿನ ಹಿಂಬಾಕಿಯನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂಬ ಮನವಿಗಳನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದರು.

ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ ಕುರಿತಾಗಿ ಸರ್ಕಾರದ ಯಾವುದೇ ಆದೇಶ ಇರುವುದಿಲ್ಲ. ಈ ಹಿನ್ನೆಲೆಯಲ್ಲಿ ಹಿಂಬಾಕಿ ಕುರಿತು ಮುಂದಿನ ವಾರ ಮತ್ತೆ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಅವರು ತಿಳಿಸಿದರು.

ಈ ಸಂದರ್ಭ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಜಂಟಿ ಕ್ರಿಯಾ ಸಮಿತಿಯ ಪದಾಧಿಕಾರಿಗಳು, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ