ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ದೇವನಹಳ್ಳಿ ಭೂಸ್ವಾಧೀನ ರದ್ದು: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧದ ಸಭಾಂಗಣದಲ್ಲಿ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಪಟ್ಟಂತೆ ಅಧಿಕಾರಿಗಳು ಹಾಗೂ ರೈತ ಮುಖಂಡರ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾತುಗಳು:

  • ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ.
  • ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಡಲು ನಿರ್ಧರಿಸಿದ್ದರೂ ಕೆಲವು ರೈತರು ಜಮೀನು ನೀಡಲು ಸಿದ್ಧರಿರುವುದಾಗಿ ಮುಂದೆ ಬಂದಿದ್ದಾರೆ. ಜಮೀನು ನೀಡಲು ಇಚ್ಚಿಸುವವರ ಜಮೀನು ಸರ್ಕಾರ ಸ್ವಾಧೀನಪಡಿಸಿಕೊಳ್ಳಲಿದ್ದು, ಅವರಿಗೆ ಹೆಚ್ಚಿನ ಪರಿಹಾರ ಮತ್ತು ಅಭಿವೃದ್ಧಿಪಡಿಸಿದ ಜಮೀನು ನೀಡಲಾಗುವುದು.
  • ಅಂತಹ ರೈತರಿಗೆ ಮಾರ್ಗಸೂಚಿ ದರಕ್ಕಿಂತ ಹೆಚ್ಚುವರಿ ದರವನ್ನು ನೀಡಲಿದೆ. ಅಲ್ಲಿ ಕೃಷಿ ಚಟುವಟಿಕೆಗಳನ್ನು ಮುಂದುವರೆಸಲು ಬಯಸುವ ರೈತರು ಕೃಷಿ ಚಟುವಟಿಕೆಗಳನ್ನು ಮುಂದುವರೆಸಿಕೊಂಡು ಹೋಗಬಹುದಾಗಿದೆ.
  • ದೇವನಹಳ್ಳಿ ತಾಲೂಕು ಬೆಂಗಳೂರಿಗೆ ಹತ್ತಿರದ್ದಲ್ಲಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಅಲ್ಲಿಯೇ ಇದೆ. ರಾಜ್ಯದ ಪ್ರತಿಯೊಬ್ಬರ ವರಮಾನ ಹೆಚ್ಚಳವಾಗಬೇಕಿದ್ದರೆ ಅಭಿವೃದ್ದಿ ಕಾರ್ಯ ನಡೆಯಬೇಕಾಗಿದೆ. ಹೊಸ ಕೈಗಾರಿಕೆಗಳ ಪ್ರಾರಂಭಕ್ಕೆ, ಬಂಡವಾಳ ಹೂಡಿಕೆಗೆ ಜಮೀನಿನ ಅಗತ್ಯವಿದೆ. ಜಮೀನು ಸ್ವಾಧೀನಪಡಿಸಿ ಕೈಗಾರಿಕೆಗಳನ್ನು ಪ್ರಾರಂಭಿಸಲು ಸರ್ಕಾರ ನೀಡಬೇಕಾಗುತ್ತದೆ.
  • 1777 ಎಕ್ರೆ ಜಮೀನು ದೇವನಹಳ್ಳಿ ತಾಲೂಕಿನಲ್ಲಿ ಸ್ವಾಧೀನಪಡಿಸಿಕೊಂಡು, ಅಲ್ಲಿ ಏರೋಸ್ಪೇಸ್ ಪ್ರಾರಂಭಿಸುವುದು ಸರ್ಕಾರದ ಉದ್ದೇಶ. ಬೆಂಗಳೂರಿನ ಸಮೀಪದಲ್ಲಿ ಇದಕ್ಕೆ ಜಮೀನು ಒದಗಿಸಲು ಕೋರಿಕೆ ಸ್ವೀಕರಿಸಲಾಗಿತ್ತು.
  • ರಾಜ್ಯದಲ್ಲಿ ಭೂಸ್ವಾಧೀನ ವಿರುದ್ಧ ಈ ಮಟ್ಟದ ಪ್ರತಿಭಟನೆ ನಡೆದಿಲ್ಲ. ಅದು ಫಲವತ್ತಾದ ವ್ಯವಸಾಯಕ್ಕೆ ಯೋಗ್ಯವಾದ ಭೂಮಿ. ಅಲ್ಲಿನ ರೈತರು ಆ ಜಮೀನಿನ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ಆದ್ದರಿಂದ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕೆಂದು ಹೋರಾಟಗಾರರು ಸ್ಪಷ್ಟಪಡಿಸಿದ್ದಾರೆ.
  • ಸರ್ಕಾರ ರೈತರು, ಜಮೀನುದಾರರು ಸೇರಿದಂತೆ ಎಲ್ಲರ ಅಹವಾಲುಗಳನ್ನು ಆಲಿಸಿದೆ. ರಾಜ್ಯದ ಅಭಿವೃದ್ದಿಗೆ, ಬೆಳವಣಿಗೆಗೆ ಕೈಗಾರಿಕೆ ಉತ್ತೇಜನ ನೀಡುವುದು ಅಗತ್ಯವಿದೆ.
  • ಯಾವುದೇ ಕಾರಣಕ್ಕೂ ಜಮೀನು ಸ್ವಾಧೀನ ಕೈಬಿಟ್ಟರೆ ಈ ಕೈಗಾರಿಕೆ ಬೇರೆ ಕಡೆ ಹೋಗುವ ಸಾಧ್ಯತೆ ಇದೆ. ಆದರೂ ಸರ್ಕಾರ ರೈತಪರವಾಗಿದ್ದು, ಅವರ ಬೇಡಿಕೆಗಳನ್ನು ಪರಿಗಣಿಸಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಲು ನಿರ್ಧರಿಸಿದೆ.

    ಹೋರಾಟಗಾರರು, ರೈತರ ಜತೆ ವಿದಾನಸೌಧದಲ್ಲಿ ನಡೆದ ಮಾತುಕತೆಯ ನಂತರ ಮುಖ್ಯಮಂತ್ರಿಗಳು ಸರ್ಕಾರದ ನಿರ್ಧಾರ ಪ್ರಕಟಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಎಂ.ಬಿ.ಪಾಟೀಲ್, ಕೆ.ಎಚ್.ಮುನಿಯಪ್ಪ, ಹೆಚ್.ಕೆ.ಪಾಟೀಲ್, ಕೃಷ್ಣ ಭೈರೇಗೌಡ, ಪ್ರಿಯಾಂಕ ಖರ್ಗೆ, ಭೈರತಿ ಸುರೇಶ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಕಾನೂನು ಸಲಹೆಗಾರ ಪೊನ್ನಣ್ಣ, ಅಡ್ವಕೇಟ್ ಜನರಲ್ ಶಶಿಕಿರಣ ಶೆಟ್ಟಿ, ರೈತ ಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ