ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು. ಸೆ.08: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. 

ಸಭೆಯ ಮುಖ್ಯಾಂಶಗಳು 

ಪಂಚ ಗ್ಯಾರಂಟಿ ಯೋಜನೆ ಅಡಿ ಇದುವರೆಗೆ ರೂ. 97,813 ಕೋಟಿ ಅನುದಾನವನ್ನು ವೆಚ್ಚ ಮಾಡಲಾಗಿದೆ. ಇದರಲ್ಲಿ ಗೃಹಲಕ್ಷ್ಮಿ ಯೋಜನೆಯಡಿ 1.24ಕೋಟಿ ಫಲಾನುಭವಿಗಳಿಗೆ ಒಟ್ಟು ರೂ.50,005 ಕೋಟಿ, ಗೃಹಜ್ಯೋತಿ ಯೋಜನೆಯಡಿ 1.64 ಕೋಟಿ ಫಲಾನುಭವಿಗಳಿಗೆ ರೂ. 18,139 ಕೋಟಿ, ಯುವನಿಧಿ ಯೋಜನೆಯಡಿ 2.55ಲಕ್ಷ ಫಲಾನುಭವಿಗಳಿಗೆ ರೂ.623 ಕೋಟಿ, ಶಕ್ತಿ ಯೋಜನೆಯಡಿ 544ಕೋಟಿ ಫಲಾನುಭವಿಗಳಿಗೆ ರೂ.13,903ಕೋಟಿ ಹಾಗೂ ಅನ್ನಭಾಗ್ಯ ಯೋಜನೆಯಡಿ 72.02ಕೋಟಿ ಫಲಾನುಭವಿಗಳಿಗೆ ಒಟ್ಟು 11,821.17 ಕೋಟಿ ವೆಚ್ಚ ಮಾಡಲಾಗಿದೆ.

ಮರಣ ಹೊಂದುವ ಫಲಾನುಭವಿಗಳ ಪಟ್ಟಿಯನ್ನು ಪ್ರತಿ ತಿಂಗಳು ಪಂಚಾಯತ್ ಹಂತದಲ್ಲಿ ನವೀಕರಿಸಿ ಸಂಬಂಧಪಟ್ಟ ಬ್ಯಾಂಕುಗಳಿಗೆ ಮಾಹಿತಿಯನ್ನು ಒದಗಿಸಬೇಕು. ಮರಣ ಹೊಂದುವ ಫಲಾನುಭವಿಗಳ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕಬೇಕು.

 ಪಂಚಾಯತ್ ಮಟ್ಟದಲ್ಲಿ ಫಲಾನುಭವಿಗಳ ಸೇರ್ಪಡೆ ಮತ್ತು ತೆಗೆದು ಹಾಕುವಿಕೆಗೆ ಕ್ರಮ ಕೈಗೊಳ್ಳಬೇಕು. ಜಿಎಸ್ಟಿ ರಿಟರ್ನ್ ಸಲ್ಲಿಸುವವರು ಗೃಹಲಕ್ಷ್ಮಿ ಯೋಜನೆ ಲಾಭ ಪಡೆಯುವ ಕುರಿತು ಇರುವ ಗೊಂದಲವನ್ನು ನಿವಾರಿಸಲು ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ಅನರ್ಹ ಬಿಪಿಎಲ್ ಕಾರ್ಡುದಾರರನ್ನು ಗುರುತಿಸಿ ಬಿಪಿಎಲ್ ಕಾರ್ಡ್ ರದ್ದುಪಡಿಸುವ ಕಾರ್ಯವನ್ನು ಪಂಚಾಯತ್ ಮಟ್ಟದಲ್ಲಿ ನಡೆಸಬೇಕು. ಈ ಕುರಿತಾಗಿರುವ ಮಾನದಂಡಗಳನ್ನು ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು. ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟ ಮಾಡುವುದನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಕ್ಕಿಯ ಬದಲು ಪ್ರದೇಶವಾರು ಇತರ ಧಾನ್ಯಗಳನ್ನು ನೀಡುವ ಬಗ್ಗೆ ಪರಿಶೀಲನೆ. ಗ್ಯಾರಂಟಿ ಯೋಜನೆಗಳ ಲಾಭ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಆಂದೋಲನ ಮಾದರಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ