ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ: ಮಾಧ್ಯಮಗಳಿಗೆ ಕರೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟನೆ

ಬೆಂಗಳೂರು: ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ? ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ ತೋರಿಸಿ, ಸತ್ಯ ಬರೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ ಮಾಡಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದೇ ದೊಡ್ಡ ವಿಷಯದಂತೆ ಮಾಧ್ಯಮಗಳಲ್ಲಿ ಚರ್ಚೆ ನಡೆಯಿತು. ಆ ಚರ್ಚೆಯಲ್ಲಿ ಜ್ಯೋತಿಷಿಗಳು, ಚಾನಲ್ ಗಳು ತೋರಿಸಿದ್ದೆಲ್ಲಾ ಅಪ್ಪಟ ಸುಳ್ಳಾಯ್ತು. ಮಾಧ್ಯಮದಲ್ಲಿ ಹೀಗೆಲ್ಲಾ ತೋರಿಸಿದರೆ ಜನ ಒಪ್ಪುತ್ತಾರಾ ಎಂದು ಯೋಚನೆ ಮಾಡಬೇಕು ಎಂದರು.

ಅಭಿವ್ಯಕ್ತಿ ಸ್ವಾತಂತ್ರ್ಯ ಎತ್ತಿಹಿಡಿಯಲು ನಮ್ಮ‌ ಸರ್ಕಾರ ಸದಾ ಸಿದ್ಧ. ಯಾವತ್ತೂ ಇದಕ್ಕೆ ಧಕ್ಕೆ ತರುವ ಕೆಲಸವನ್ನು ನಾನೂ ಮಾಡಿಲ್ಲ, ನಮ್ಮ ಸರ್ಕಾರವೂ ಮಾಡುವುದಿಲ್ಲ. ಬ್ಲಾಕ್ ಮೇಲ್ ಮತ್ತು ಕೀಳು ಮಟ್ಟದ ಪ್ರಾಕ್ಟೀಸ್ ಮಾಡುತ್ತಿರುವ ಯು ಟ್ಯೂಬ್ ಚಾನಲ್ ಗಳು ಸಮಾಜಕ್ಕೆ ಶಾಪ ಆಗಿದ್ದು, ಯು ಟ್ಯೂಬ್ ಚಾನಲ್ ಗಳ ಹಾವಳಿ ತಡೆಯಲು ಇವರಿಗೂ ಲೈಸೆನ್ಸ್ ಕಡ್ಡಾಯಗೊಳಿಸಬೇಕು ಎಂದು ಸಂಘವು ಬೇಡಿಕೆ ಸಲ್ಲಿಸಿದೆ. ಈ ಬೇಡಿಕೆ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ