ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಫಾರ್ಮಸಿಸ್ಟ್‌ಗಳು ವೈದ್ಯರಷ್ಟೇ ಪ್ರಮುಖರು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರಿನ ಲಿಟಲ್ ಫ್ಲವರ್ ಶಿಕ್ಷಣ ಸಮೂಹದ ಕಾಲೇಜಿನ ಕಟ್ಟಡವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಫಾರ್ಮಸಿಸ್ಟ್‌ಗಳು ವೈದ್ಯರಷ್ಟೇ ಪ್ರಮುಖರಾಗಿದ್ದು, ತಮ್ಮ ವೃತ್ತಿಯಲ್ಲಿ ಶ್ರೀಮಂತ – ಬಡವ, ಜಾತಿಧರ್ಮಗಳೆಂದು ಬೇಧ ಮಾಡದೇ ಎಲ್ಲರಿಗೂ ಸಮಾನವಾಗಿ ಚಿಕಿತ್ಸೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬೆಂಗಳೂರಿನ ಲಿಟಲ್ ಫ್ಲವರ್ ಶಿಕ್ಷಣ ಸಮೂಹದ ಕಾಲೇಜಿನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಫಾರ್ಮಸಿಸ್ಟ್ ಗಳು ವೈದ್ಯರಷ್ಟೇ ಪ್ರಮುಖರಾಗಿದ್ದು, ಆರೋಗ್ಯ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡುತ್ತಾರೆ. ಲಿಟಲ್ ಫ್ಲವರ್ ಶಿಕ್ಷಣ ಸಮೂಹದ ಮಾಲೀಕರಾದ ಡಾ.ಕೆ.ವೆಂಟಕಗಿರಿಯವರ ಸಂಸ್ಥೆಯಲ್ಲಿ ಶಿಕ್ಷಣ ಪಡೆದ ಸಾವಿರಾರು ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿದ್ದಾರೆ. ಇಲ್ಲಿ ಫಾರ್ಮಸಿಸ್ಟ್ ಶಿಕ್ಷಣ ಪಡೆದು ದೇಶವಿದೇಶಗಳಲ್ಲಿ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದರು.

ಸಮಾಜದಲ್ಲಿನ ಬಡರೋಗಿಗಳಿಗೆ ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡಬೇಕು. ಖಾಸಗಿ ಚಿಕಿತ್ಸೆ ವೆಚ್ಚಗಳನ್ನು ಭರಿಸಲು ಅಶಕ್ತರಾಗಿರುವ ಬಡರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯ ಸೌಲಭ್ಯಗಳನ್ನು ಸರ್ಕಾರ ನೀಡುತ್ತಿದೆ. ಸರ್ಕಾರದ ಈ ಆಶಯದೊಂದಿಗೆ ಫಾರ್ಮಸಿಸ್ಟ್ ಗಳೂ ಕೈಜೋಡಿಸಿ, ಬಡರೋಗಿಗಳಿಗೆ ಉಚಿತ ಚಿಕಿತ್ಸೆ ನೀಡುವ ಮೂಲಕ ಸಾರ್ಥಕ ಸೇವೆ ಸಲ್ಲಿಸಬೇಕು ಎಂದು ತಿಳಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ