ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ದಸರಾ ಉತ್ಸವ ಯಾವುದೇ ಅಡಚಣೆಗಳಿಲ್ಲದೇ ಯಶಸ್ವಿಯಾಗಿ ನಡೆದಿರುವುದು ಸಂತಸ ತಂದಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ದಸರಾ ಉತ್ಸವವನ್ನು ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಭಿನಂದನೆಗಳು

ಮೈಸೂರು: ಈ ಬಾರಿ ದಸರಾ ಹಬ್ಬವು ಹನ್ನೊಂದು ದಿನಗಳ ಕಾಲ ನಡೆದಿದ್ದು, ನಾಡಿನ ಜನತೆಗೆ ದಸರಾ ಮಹೋತ್ಸವದ ಶುಭಾಶಯಗಳನ್ನು ಕೋರುತ್ತೇನೆ. ಮೈಸೂರು ದಸರಾ ವಿಶ್ವವಿಖ್ಯಾತವಾಗಿದ್ದು, ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುತ್ತದೆ. ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ, ಎಲ್ಲ ದಸರಾ ಉತ್ಸವಗಳಲ್ಲಿ ಭಾಗಿಯಾಗಿದ್ದೇನೆ. ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ 8 ಬಾರಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆತಿದ್ದು, ಅತ್ಯಂತ ಸಂತೋಷವನ್ನು ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು, ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಆಯೋಜನೆ ಯಶಸ್ವಿಯಾಗುತ್ತದೆ. ದಸರಾ ಉತ್ಸವವನ್ನು ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಭಿನಂದನೆಗಳು, ದಸರಾ ಉತ್ಸವ ಯಾವುದೇ ಅಡಚಣೆಗಳಿಲ್ಲದೇ ಯಶಸ್ವಿಯಾಗಿ ನಡೆದಿರುವುದು ಸಂತಸ ತಂದಿದೆ. ಇದಕ್ಕಾಗಿ ಶ್ರಮಿಸಿದ ಸಚಿವರು, ಶಾಸಕರು ಹಾಗೂ ಅಧಿಕಾರಿಗಳಿಗೆ ಧನ್ಯವಾದಗಳು ಎಂದರು.

ಈ ವರ್ಷ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗಿದ್ದು, ಎಲ್ಲ ಜಲಾಶಯಗಳು ತುಂಬಿ, ಉತ್ತಮ ಬೆಳೆಯೂ ಆಗುತ್ತಿದೆ. ಆದರೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಅತಿವೃಷ್ಠಿಯಿಂದ ಸುಮಾರು 10ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ ಸಂಭವಿಸಿದೆ. ರೈತರಿಗೆ ಸಮೀಕ್ಷೆ ನಡೆಸಿ ಬೆಳೆಪರಿಹಾರ ನೀಡುವುದಾಗಿ ಕಲಬುರಗಿಯ ಭೇಟಿ ಸಂದರ್ಭದಲ್ಲಿ ತಿಳಿಸಿದ್ದು, ಸರ್ಕಾರ ಮತ್ತು ಎನ್‌ಡಿಆರ್‌ಎಫ್ ಸೇರಿದಂತೆ ಖುಷ್ಕಿ ಜಮೀನಿನ ತಲಾ ಹೆಕ್ಟೇರ್ ಗೆ 17,000 ರೂ., ನೀರಾವರಿ ಜಮೀನಿಗೆ 17,500 ರೂ. ಮತ್ತು ಬಹುಬೆಳೆ ಬೆಳೆಯುವ ಜಮೀನಿಗೆ 31,000 ರೂ.ಗಳ ಪರಿಹಾರ ನೀಡುವುದಾಗಿ ತಿಳಿಸಲಾಗಿದೆ. ಆದರೆ ಹೆಚ್ಚಿನ ಮಳೆಯಿರುವುದರಿಂದ ಬೆಳೆಹಾನಿಯ ಜಂಟಿಸಮೀಕ್ಷೆ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಸಮೀಕ್ಷೆಯ ನಂತರ ಬೆಳೆಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್‌ಗೂ ಪರಿಹಾರ ನೀಡಲಾಗುವುದು ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ