ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಕೇಂದ್ರ ಸಚಿವ ಸೋಮಣ್ಣ ಸಮಸಮಾಜದ ವಿರೋಧಿ: ಸಿಎಂ ಸಿದ್ದರಾಮಯ್ಯ

ಲಿಂಗಾಯತ ಧರ್ಮದ ವಿಷಯದಲ್ಲಿ ಜನರ ನಿಲುವೇ ನನ್ನ ನಿಲುವು

ಕೊಪ್ಪಳ: ಮೇಲ್ಜಾತಿಗಳನ್ನು ತುಳಿಯಲು ಸಮೀಕ್ಷೆ ನಡೆಸಲಾಗುತ್ತಿದೆ ಎಂಬ ಕೇಂದ್ರ ಸಚಿವ ಸೋಮಣ್ಣ ಅವರ ಆರೋಪ ಬಾಲಿಶವಾದುದ್ದು. ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನು ನಡೆಸದಿದ್ದರೆ, ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ. ಈ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜ ನಿರ್ಮಾಣವನ್ನು ವಿರೋಧಿಸುವವರು ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಜನರ ದಾರಿ ತಪ್ಪಿಸುತ್ತಿದ್ದಾರೆ. ಈಗಾಗಲೇ 1.10 ಕೋಟಿ ಕುಟುಂಬಗಳ ಸಮೀಕ್ಷಾ ಕಾರ್ಯ ಮುಗಿದಿದ್ದು, ನಿನ್ನೆವರೆಗೆ ಶೇ.63 ರಷ್ಟು ಸರ್ವೇ ಕಾರ್ಯ ಪ್ರಗತಿಯಾಗಿದೆ. ನಾಳೆ ಸಂಜೆವರೆಗೆ ಸಮೀಕ್ಷೆಯ ಪ್ರಗತಿಯನ್ನು ಪರಿಶೀಲಿಸಿ, ಸಮೀಕ್ಷೆ ಅವಧಿ ವಿಸ್ತರಣೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕೊಪ್ಪಳದಲ್ಲಿ ಮಾಧ್ಯಮ ಹೇಳಿಕೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಿಂಗಾಯತ ಧರ್ಮದ ವಿಷಯದಲ್ಲಿ ಜನರ ನಿಲುವೇ ನನ್ನ ನಿಲುವು. ಕೊಪ್ಪಳ ಜಿಲ್ಲೆಯಲ್ಲಿ ಶೇ.97 ರಷ್ಟು ಸಮೀಕ್ಷೆ ಪೂರ್ಣಗೊಂಡಿದ್ದು, ಇದು ಒಳ್ಳೆಯ ಬೆಳವಣಿಗೆ. ಸಮಾಜದಲ್ಲಿ ಬದಲಾವಣೆಯನ್ನು ವಿರೋಧಿಸುವವರು ಸಮೀಕ್ಷೆಯ ವಿರುದ್ಧ ಧ್ವನಿ ಎತ್ತುತ್ತಿದ್ದಾರೆ.
ಲಿಂಗಾಯತ ಧರ್ಮದ ವಿಷಯದಲ್ಲಿ ಜನರು ಸ್ವಯಂಪ್ರೇರಣೆಯಿಂದ ತಮ್ಮ ಧರ್ಮವನ್ನು ತಿಳಿಸಿದಂತೆ ಸಮೀಕ್ಷಾಗಾರರು ಧರ್ಮವನ್ನು ನಮೂದಿಸಿಕೊಳ್ಳುತ್ತಾರೆ. ಈ ಬಗ್ಗೆ ಜನರ ನಿಲುವೇ ನನ್ನ ನಿಲುವು ಎಂದರು.

ಬಲ್ಡೋಟಾ ಕಾರ್ಖಾನೆ ಯೋಜನೆ ಕುರಿತ ವಿಚಾರ ನ್ಯಾಯಾಲಯದಲ್ಲಿ ಇದ್ದು, ತೀರ್ಪಿನ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ವಿವಿಧ ರಾಜ್ಯದಲ್ಲಿ ಕೆಮ್ಮಿನ ಔಷಧಿಯಿಂದ ಮಕ್ಕಳು ಅಸುನೀಗುತ್ತಿದ್ದು, ಈ ಬಗ್ಗೆ ಗಮನಹರಿಸುವಂತೆ ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಈಗಾಗಲೇ ರಾಜ್ಯದಲ್ಲಿ ಲಭ್ಯವಿರುವ ಕೆಮ್ಮಿನ ಔಷಧಗಳ ಪರೀಕ್ಷೆಯನ್ನು ಇಲಾಖೆ ನಡೆಸಿದ್ದು, ಅಪಾಯಕಾರಿ ಅಂಶ ಪತ್ತೆಯಾದರೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ