ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಬೆಂಗಳೂರು ನಗರದ ಸುಗಮ ಆಡಳಿತಕ್ಕಾಗಿ ಜಿಬಿಎ ರಚನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆಯಲ್ಲಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಅತಿ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದ ಸಮಸ್ತ ಜನರಿಗೆ ಸುಗಮ ಆಡಳಿತ, ಸಮರ್ಪಕ‌ ಅಭಿವೃದ್ಧಿಗಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ತಂದು ಐದು ಕಾರ್ಪೋರೇಷನ್‌ಗಳನ್ನು ರಚನೆ ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆಯಲ್ಲಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರಿನ ಜನಸಂಖ್ಯೆ 1.40 ಕೋಟಿ ತಲುಪಿದೆ. ಒಂದು ಕಾರ್ಪೋರೇಷನ್‌ನಿಂದ ಇಷ್ಟು ದೊಡ್ಡ ನಗರದ ಸಮರ್ಪಕ ಅಭಿವೃದ್ಧಿ ಬಹಳ ದೊಡ್ಡ ಸವಾಲಿನದ್ದು. ಈ ಚರ್ಚೆ ಹಲವು ವರ್ಷಗಳಿಂದ ಇದ್ದೇ ಇದೆ. ಒಂದಕ್ಕಿಂತ ಹೆಚ್ಚು ಕಾರ್ಪೋರೇಷನ್‌ಗಳಿದ್ದರೆ ವೇಗದ ಅಭಿವೃದ್ಧಿ ಸಾಧ್ಯ ಎನ್ನುವ ಕಾರಣಕ್ಕೆ ಈ ಬಗ್ಗೆ ವರದಿ ಕೊಡಲು ನಾನು ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗಲೇ ಸಮಿತಿ ರಚಿಸಿದ್ದೆ, ನಂತರ ಬಂದ ಸರ್ಕಾರಗಳು ಈ ದಿಕ್ಕಿನಲ್ಲಿ ಗಮನ ಹರಿಸಲೇ ಇಲ್ಲ. ಹೀಗಾಗಿ ನಮ್ಮ ಸರ್ಕಾರವೇ ಪುನಃ ಅಧಿಕಾರಕ್ಕೆ ಬಂದ ಬಳಿಕ ಸಮಿತಿಯನ್ನು ಪುನರ್ ರಚಿಸಿತು. ಈ ಸಮಿತಿ ವರದಿಯಂತೆ ಮುಖ್ಯಮಂತ್ರಿಗಳ ಅಧ್ಯಕ್ಷತೆಯ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬಂದು 5 ನಗರ ಪಾಲಿಕೆಗಳ ರಚನೆಯಾಗಿವೆ ಎಂದರು.

ಸುಗಮ ಕಸ ವಿಲೇವಾರಿ ಆಗಬೇಕು. ಪಾಲಿಕೆಗಳ ಆದಾಯ ಹೆಚ್ಚಳ ಆಗಬೇಕು. ಟ್ರಾಫಿಕ್ ದಟ್ಟಣೆ ನಿವಾರಣೆ ಆಗಬೇಕು. ನಗರವನ್ನು ಚೊಕ್ಕವಾಗಿಡಬೇಕು. ರಸ್ತೆ/ಚರಂಡಿ/ಫುಟ್ಪಾತ್/ಪಾರ್ಕ್‌ಗಳ ನಿರ್ಮಾಣಕ್ಕೆ ಆದ್ಯತೆ ನೀಡಿ ಮಾದರಿ ಪಾಲಿಕೆಗಳನ್ನಾಗಿ ರೂಪಿಸಬೇಕು ಎನ್ನುವ ಮಹತ್ತರ ಗುರಿ ಮತ್ತು ಉದ್ದೇಶಳನ್ನು ಇಟ್ಟುಕೊಂಡು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಾರ್ಯ ನಿರ್ವಹಿಸಬೇಕು. ನಾವು ನಿರೀಕ್ಷೆ ಮಾಡಿರುವ ಈ ಗುರಿ ಮತ್ತು ಉದ್ದೇಶ ನೆರವೇರಲು BWSSB, BDA, BESCOM ಸೇರಿ ಎಲ್ಲಾ ಇಲಾಖೆಗಳು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಜೊತೆ ಪರಸ್ಪರ ಸಹಕಾರ ಸಹಯೋಗವನ್ನು ಅತ್ಯಂತ ಕಡ್ಡಾಯವಾಗಿ ಆಚರಣೆಗೆ ತರಬೇಕು ಎಂದರು.

ಚರ್ಚೆ-ಸಂವಾದದಿಂದ ಪ್ರಜಾಪ್ರಭುತ್ವ ಗಟ್ಟಿಯಾಗುತ್ತದೆ. ಏನೇ ವಿರೋಧಗಳಿದ್ದರೂ ಸಭೆಗೆ ಹಾಜರಾಗಿ ಚರ್ಚೆ ನಡೆಸಿ ಅಭಿವೃದ್ಧಿಗೆ ಪೂರಕವಾಗಿ ಸಹಕಾರ ನೀಡಬೇಕು. ಅಧಿಕಾರ ವಿಕೇಂದ್ರೀಕರಣವನ್ನು ವಿರೋಧಿಸುವವರು ಮತ್ತು ಬೆಂಗಳೂರಿನ ಅಭಿವೃದ್ಧಿಗೆ ಒಲ್ಲದವರು ಸಭೆಯನ್ನು ವಿರೋಧಿಸುತ್ತಾರೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ