ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ನಮ್ಮ ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು: ಸಿಎಂ ಸಿದ್ದರಾಮಯ್ಯ

ರಬಕವಿ ಬನಹಟ್ಟಿಯ ಸುಕ್ಷೇತ್ರ ಬಂಡಿಗಾಣಿ ಮಠದಲ್ಲಿ ಆಯೋಜಿಸಲಾಗಿದ್ದ “ವಿಶ್ವಶಾಂತಿಗಾಗಿ ಸರ್ವಧರ್ಮ ಮಹಾಸಂಗಮ 2025” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ನಮ್ಮ ಸಮಾಜ ಸರ್ವ ಜನಾಂಗದ ಶಾಂತಿಯ ತೋಟವಾಗಬೇಕು, ಎಲ್ಲರ ನೆಮ್ಮದಿಯ ಉದ್ಯಾನವಾಗಬೇಕು. ಜನರಲ್ಲಿ ಪರಸ್ಪರ ಪ್ರೀತಿಯಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾಸೋಹ ರತ್ನ ಚಕ್ರವರ್ತಿ ದಾನೇಶ್ವರರರು ಶ್ರೀ ಬಸವ ಗೋಪಾಲ ನೀಲಮಾಣಿಕ ಮಠ ಇವರ ನೇತೃತ್ವದಲ್ಲಿ ರಬಕವಿ ಬನಹಟ್ಟಿಯ ಸುಕ್ಷೇತ್ರ ಬಂಡಿಗಾಣಿ ಮಠದಲ್ಲಿ ಆಯೋಜಿಸಲಾಗಿದ್ದ “ವಿಶ್ವಶಾಂತಿಗಾಗಿ ಸರ್ವಧರ್ಮ ಮಹಾಸಂಗಮ 2025” ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಸರ್ವ ಧರ್ಮ ಮಹಾಸಂಗಮ ನಡೆಯುತ್ತಿರುವುದು ಇಂದಿನ ಪರಿಸ್ಥಿತಿಯಲ್ಲಿ ಸಮಂಜಸವಾಗಿದೆ. ದೇಶದಲ್ಲಿ ಹಾಗೂ ಜಗತ್ತಿನಲ್ಲಿ ಅನೇಕ ಧರ್ಮ, ಜಾತಿಗಳಿವೆ. ಜಾತಿ ಧರ್ಮಗಳನ್ನು ನಾವು ಮಾಡಿಲ್ಲ, ಮೊದಲಿನಿಂದ ನಮ್ಮಲ್ಲಿ ಬೆಳೆದುಕೊಂಡು ಬಂದಿದೆ. ನಾವು ಯಾವುದೇ ಧರ್ಮ, ಜಾತಿಗೆ ಸೇರಿದ್ದರೂ ಬೇರೆ ಜಾತಿಯವರನ್ನು ಪ್ರೀತಿಸಬೇಕೇ ಹೊರತು ದ್ವೇಷಿಸಬಾರದು. ಯಾವುದೇ ಜಾತಿ, ಧರ್ಮಕ್ಕೆ ಸೇರಿದ್ದರೂ ನಾವು ಮನುಷ್ಯರು ಎನ್ನುವುದನ್ನು ಅರ್ಥಮಾಡಿಕೊಳ್ಳಬೇಕು ಎಂದರು.

ಖಾಯಿಲೆ ಬಂದರೆ ಶರೀರಕ್ಕೆ ಯಾರ ರಕ್ತವಾದರೂ ಕೊಡಿ, ಪ್ರಾಣ ಉಳಿದರೆ ಸಾಕು ಎನ್ನುತ್ತೇವೆ. ಇಂಥವರದ್ದೇ ರಕ್ತ ಕೊಡಿ ಎಂದು ಕೇಳುವುದಿಲ್ಲ. ಗುಣಮುಖರಾದ ನಂತರ ಯಾವ ಜಾತಿ ಎಂದು ಕೇಳುವುದು ನ್ಯಾಯವೇ? ಬಸವಣ್ಣನವರು ದಯೆ ಇಲ್ಲದ ಧರ್ಮ ಯಾವುದಯ್ಯ? ದಯೆಯೇ ಧರ್ಮದ ಮೂಲ ಎಂದು ಹೇಳಿದ್ದಾರೆ. ಇದನ್ನು ತಿಳಿದುಕೊಳ್ಳಬೇಕು ಎಂದರು.

ಇತ್ತೀಚೆಗೆ ಸನಾತನ ಧರ್ಮಕ್ಕೆ ಸೇರಿದ ವ್ಯಕ್ತಿಯೊಬ್ಬರು ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆದಿದ್ದಾರೆ. ಯಾವ ಧರ್ಮವೂ ದ್ವೇಷಿಸಬೇಕು ಎಂದು ಹೇಳುವುದಿಲ್ಲ. ಕಾನೂನು ಓದಿರುವ ವಕೀಲನೊಬ್ಬ ಈ ರೀತಿ ಮಾಡುವುದನ್ನು ನಾವು ಖಂಡಿಸಬೇಕು. ಸಹಿಸಿಕೊಳ್ಳಬಾರದು. ಇಂಥವೆಲ್ಲಾ ನಡೆದರೆ ಸಮಾಜದಲ್ಲಿ ಶಾಂತಿ ಹೇಗೆ ನೆಲೆಸಲು ಸಾಧ್ಯ? ಎಂದು ಪ್ರಶ್ನಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ