ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ತೋಟಗಾರಿಕೆ ಪಿತಾಮಹ ಡಾ.ಎಂ.ಮರೀಗೌಡ ಪುತ್ಥಳಿ ಅನಾವರಣ

ಕರ್ನಾಟಕದ ತೋಟಗಾರಿಕೆ ಕ್ಷೇತ್ರದ ಅಭಿವೃದ್ಧಿಯ ರೂವಾರಿ - ಮುಖ್ಯಮಂತ್ರಿ ಸಿದ್ದರಾಮಯ್ಯ

ತೋಟಗಾರಿಕೆ ಪಿತಾಮಹ ಡಾ.ಎಂ.ಹೆಚ್.ಮರೀಗೌಡ ಅವರ ಕಾಲದಲ್ಲಿ ಕರ್ನಾಟಕದಲ್ಲಿ ತೋಟಗಾರಿಕಾ ಕ್ಷೇತ್ರ ಅಭಿವೃದ್ಧಿಯ ರೂವಾರಿಯಾಗಿದ್ದರು. ಸರ್ಕಾರಿ ಅಧಿಕಾರಿಯಾಗಿ ನಿಷ್ಠೆ ಹಾಗೂ ಬದ್ಧತೆಯಿಂದ ತೋಟಗಾರಿಕೆ ಕ್ಷೇತ್ರದ ಬೆಳವಣಿಗೆಗೆ ಶ್ರಮಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ತೋಟಗಾರಿಕೆ ಪಿತಾಮಹ ಡಾ.ಎಂ.ಹೆಚ್.ಮರೀಗೌಡ ಪ್ರತಿಮೆ ಅನಾವರಣಗೊಳಿಸಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಮೈಸೂರಿನ ಕೇಂದ್ರಸ್ಥಳದಲ್ಲಿರುವ ಕರ್ಜನ್ ಪಾರ್ಕ್ ನಲ್ಲಿ ಡಾ.ಎಂ.ಹೆಚ್.ಮರೀಗೌಡರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ. ಡಾ.ಎಂ.ಹೆಚ್.ಮರೀಗೌಡರ ಸಾಧನೆಗಳು ಎಲ್ಲರಿಗೂ ಸ್ಪೂರ್ತಿ ತರಲಿದೆ ಎಂದು ತಿಳಿಸಿದರು

ಮಾಹಿತಿ ಪಡೆದು ಪರಿಶೀಲನೆ :
ಹುಲಿ ಉಗುರು ಧರಿಸಿದ ಬಗ್ಗೆ ನಟರಾದ ದರ್ಶನ್ ಹಾಗೂ ಜಗ್ಗೇಶ್ ಅವರ ಪ್ರಕರಣ ದಾಖಲಾಗಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ. ಪೊಲೀಸ್ ಇಲಾಖೆಯಿಂದ ಮಾಹಿತಿ ಪಡೆದು ಪರಿಶೀಲಿಸಲಾಗುವುದು ಎಂದು ತಿಳಿಸಿದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ