ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಅನ್ನದ ಮೌಲ್ಯ ಗೊತ್ತಿದ್ದರಿಂದ ಅನ್ನಭಾಗ್ಯ ಯೋಜನೆ ಜಾರಿಗೆ ತರಲಾಯಿತು: ಸಿಎಂ ಸಿದ್ದರಾಮಯ್ಯ

ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ “ವಿಶ್ವ ಆಹಾರ ದಿನ” ಕಾರ್ಯಕ್ರಮ

ಬೆಂಗಳೂರು: ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತಿದೆ. ಹಾಗಾಗಿಯೇ ಹಸಿದವರ ಹೊಟ್ಟೆತುಂಬಿಸುವ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿರುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಹಾರ ಮತ್ತು ನಾಗರಿಕ‌ ಸರಬರಾಜು ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ “ವಿಶ್ವ ಆಹಾರ ದಿನ” ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು. ಕವಿ ಬೇಂದ್ರೆಯವರು ರೈತರನ್ನು ಅನ್ನಬ್ರಹ್ಮ ಎಂದು ಕರೆದಿದ್ದಾರೆ. ಆದ್ದರಿಂದ ಅನ್ನ ವ್ಯರ್ಥ ಮಾಡುವುದು, ಬಿಸಾಡುವುದು ಅನ್ನಬ್ರಹ್ಮನಿಗೆ ಮಾಡುವ ಅವಮಾನ. ನಾವು ಒಂದು ಕಾಲದಲ್ಲಿ ಅನ್ನಕ್ಕಾಗಿ ಅಮೇರಿಕಾದ ಮೇಲೆ ಅವಲಂಭಿತರಾಗಿದ್ದೆವು. ಈಗ ವಿದೇಶಗಳಿಗೆ ರಫ್ತು ಮಾಡುವ ಮಟ್ಟಕ್ಕೆ ಪ್ರಗತಿ ಸಾಧಿಸಿದ್ದೇವೆ. ಇದರ ಜೊತೆಗೆ ಊಟ ವ್ಯರ್ಥ ಮಾಡುವ ಪ್ರಮಾಣವೂ ಹೆಚ್ಚಾಗುತ್ತಿರುವುದು ಬೇಸರದ ಸಂಗತಿ ಎಂದರು.

ಅನ್ನ ವ್ಯರ್ಥ ಮಾಡುವುದು ಪಾಪದ ಕೆಲಸ ಎಂದು ಮಹಾತ್ಮ ಗಾಂಧಿ ಹೇಳಿದ್ದಾರೆ‌. ಬೆಂಗಳೂರು ಒಂದರಲ್ಲೇ ಪ್ರತೀ ವರ್ಷ 943 ಟನ್ ಆಹಾರ ವೇಸ್ಟ್ ಆಗುತ್ತಿದೆ. ಹೆಚ್ಚೂಕಡಿಮೆ 360 ಕೋಟಿ ಮೌಲ್ಯದ ಆಹಾರ ವೇಸ್ಟ್ ಮಾಡುತ್ತಿದ್ದೇವೆ ಎಂದು ಜಿಕೆವಿಕೆ ಅಧ್ಯಯನ ವರದಿ ಹೇಳುತ್ತಿದೆ. ಗೊತ್ತಿದ್ದೂ, ಗೊತ್ತಿದ್ದೂ ಆಹಾರ ವ್ಯರ್ಥ ಮಾಡುವುದು ಅನ್ನಕ್ಕೆ ತೋರಿಸುವ ಅಹಂಕಾರ ಎಂದರು.

ಯಾರೂ ಹಸಿವಿನಿಂದ ಮಲಗಬಾರದು ಎನ್ನುವುದು ನಮ್ಮ ಬದ್ಧತೆ. ಹೀಗಾಗಿ ಬಡವರ ಪರವಾದ ಕಾರ್ಯಕ್ರಮಗಳನ್ನು ಜಾರಿಗೆ ತಂದವರು ನಾವು. ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಪ್ರಧಾನಿ ಮನಮೋಹನ್ ಸಿಂಗ್ ಅವರು. ಆಹಾರ ಭದ್ರತೆ ಕಾಯ್ದೆಯನ್ನು ಬಿಜೆಪಿ ತೀವ್ರವಾಗಿ ವಿರೋಧಿಸಿತ್ತು. ಬಡವರ ವಿರೋಧಿ ನೀತಿ ಬಿಜೆಪಿಯ ಸಿದ್ಧಾಂತ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಆ ಕಡೆ ಬಿಜೆಪಿಗೂ ಚಪ್ಪಾಳೆ ತಟ್ಟೋದು, ಈ ಕಡೆ ಬಡವರ ಪರ ಕಾರ್ಯಕ್ರಮ ಕೊಟ್ಟ ನಮಗೂ ಚಪ್ಪಾಳೆ ತಟ್ಟೋದು ಮಾಡಬೇಡಿ. ಅನ್ನದ ಪರವಾಗಿ ಇರುವ ನಮ್ಮ ಬದ್ಧತೆಯನ್ನು ನೀವೆಲ್ಲರೂ ಅರ್ಥ ಮಾಡಿಕೊಳ್ಳಬೇಕು ಎಂದರು.

ಅನ್ನಭಾಗ್ಯದ ಅಕ್ಕಿಯನ್ನು ಸಂಗ್ರಹಿಸಿ ಕಾಳ ಸಂತೆಯಲ್ಲಿ ಮಾರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಾಳ ಸಂತೆ ಮಾರಾಟ ತಪ್ಪಿಸಲು 5 ಕೆಜಿ ಅಕ್ಕಿ ಕೊಟ್ಟು ಉಳಿದ ಐದು ಕೆಜಿ ಕಾಳು, ಬೇಳೆ ವಿತರಿಸಲು ತೀರ್ಮಾನಿಸಿದ್ದೇವೆ. ಆಹಾರದ ಬಗ್ಗೆ ಜಾಗ್ರತೆ, ಸಣ್ಣ ರೈತರ ರಕ್ಷಣೆ ಮಾಡುವುದು ನಮ್ಮ, ನಿಮ್ಮ ಮತ್ತು ನಾಗರಿಕ ಸಮಾಜದ ಜವಾಬ್ದಾರಿ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ