ಕರಗದ ಬೆಳಕಿನಲ್ಲಿ, ಕನ್ನಡ ಸಂಸ್ಕೃತಿಯ ಬೆಳಕು!

ಪ್ರತಿಭಾವಂತ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುತ್ತಿರುವುದು ಪ್ರಶಂಸಾರ್ಹ: ಮುಖ್ಯಮಂತ್ರಿ ಸಿದ್ದರಾಮಯ್ಯ

ಎಂಬಿಬಿಎಸ್ ಶಿಕ್ಷಣಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೇರಣಾ ಸಮಾರಂಭ

ಬೆಂಗಳೂರು: ಕಾಳಿದಾಸ ಹೆಲ್ತ್ ಎಜುಕೇಶನ್ ಮತ್ತು ಅಹಿಲ್ಯಾ ಟ್ರಸ್ಟ್ ಸಂಸ್ಥೆಯು ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆದ ಪ್ರತಿಭಾವಂತ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುತ್ತಿರುವುದು ಪ್ರಶಂಸಾರ್ಹ ಕಾರ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ಲಾಘಿಸಿದರು.

2025ರ ಶೈಕ್ಷಣಿಕ ಸಾಲಿನ ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಸರ್ಕಾರಿ ಖೋಟದಡಿ ಮೊದಲನೇ ವರ್ಷದ ಎಂಬಿಬಿಎಸ್ ಶಿಕ್ಷಣಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೇರಣಾ ಸಮಾರಂಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಂಬಿಬಿಎಸ್ ಶಿಕ್ಷಣಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡಿ ಪ್ರೋತ್ಸಾಹ ನೀಡಲಾಗುತ್ತಿದೆ. ಸಂಸ್ಥೆಯ ರೂವಾರಿಗಳು ಉತ್ತಮ ಸಾಮಾಜಿಕ ಕೆಲಸದಲ್ಲಿ ತೊಡಗಿಕೊಂಡಿರುವುದು ಅನುಕರಣೀಯವಾದುದು ಎಂದರು.

ವಿದ್ಯಾರ್ಥಿವೇತನ ಪಡೆಯುವ ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು. ಇಂದಿನ ವಿದ್ಯಾರ್ಥಿಗಳು ಭವಿಷ್ಯದಲ್ಲಿ ಉತ್ತಮ ಸ್ಥಾನಕ್ಕೇರಿದಾಗ, ಸಾಮಾಜಿಕ ಚಿಂತನೆಯಿಂದ ದುಡಿಯಬೇಕು. ತಾವು ಗಳಿಸುವ ಸಂಪತ್ತಿನ ಸಣ್ಣ ಪಾಲನ್ನು ಸಮಾಜದ ಒಳಿತಿಗಾಗಿ ಸದ್ಬಳಕೆ ಮಾಡಬೇಕು. ಆಗ ಪಡೆದ ಶಿಕ್ಷಣ ಸಾರ್ಥಕವಾಗುತ್ತದೆ ಎಂದರು.

Share the Post:

Related Posts

ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯಿಂದ ಬಿಝ್ಇಂಟೆಲ್ ಹಬ್ ಸ್ಥಾಪನೆ

ಬೆಂಗಳೂರು: ಡಾಬಸ್‌ಪೇಟೆ – ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರವು ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ಕ್ವಿನ್ ಸಿಟಿಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ಸ್ ಕಂಪನಿಯು 1,200 ಕೋಟಿ ರೂಪಾಯಿ ಹೂಡಿಕೆಯೊಂದಿಗೆ ಜಾಗತಿಕ

Read More

ಇಂದಿನಿಂದ ರಾಜ್ಯದಾದ್ಯಂತ ಅತ್ಯಾಧುನಿಕ ಆ್ಯಂಬುಲೆನ್ಸ್ ಸೇವೆ ಲಭ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ ಆಶಯ ಎಂದು ಮುಖ್ಯಮಂತ್ರಿ

Read More

ನಿಮ್ಮ ಅಹವಾಲು

ಮುಖ್ಯಮಂತ್ರಿಗಳಿಗೆ ನಿಮ್ಮ ದೂರನ್ನು ತಲುಪಿಸಲು ಈ ಕೆಳಗಿನ ಅರ್ಜಿಯನ್ನು ತುಂಬಿ