ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಅನುಷ್ಠಾನದ ಸಭೆಯ ಮುಖ್ಯಾಂಶಗಳು
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಅನುಷ್ಠಾನದ ಸಭೆಯ ಮುಖ್ಯಾಂಶಗಳು ಕೆಳಗಿನಂತಿವೆ.
ಒಳ ಮೀಸಲಾತಿ ಕುರಿತಾಗಿ ಸಚಿವ ಸಂಪುಟ ಸಭೆಯ ತೀರ್ಮಾನಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುವುದು.
ರೋಸ್ಟರ್ ಜಾರಿ ಕುರಿತಾಗಿ ಎಲ್ಲರ ಅಹವಾಲುಗಳನ್ನು ಆಲಿಸಿ, ಯಾವುದೇ ಜಾತಿಗೆ ರೋಸ್ಟರ್ನಲ್ಲಿ ಅನ್ಯಾಯವಾಗದಂತೆ ಖಾತ್ರಿಪಡಿಸಲಾಗುವುದು.
ಜಾತಿ ಪ್ರಮಾಣ ಪತ್ರ ಯಾವ ರೀತಿಯಲ್ಲಿ ನೀಡಬೇಕು ಎಂಬ ಕುರಿತು ವಿವರವಾದ ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಲಾಗಿದೆ.
ನೇಮಕಾತಿಗೆ ಇದ್ದ ನಿರ್ಬಂಧವನ್ನು ತೆರವುಗೊಳಿಸಿದ ಬಳಿಕ ಅಭ್ಯರ್ಥಿಗಳ ವಯೋಮಿತಿಯನ್ನು ಒಂದು ಅವಧಿಗೆ ಹೆಚ್ಚಳ ಮಾಡಲಾಗಿದೆ. ಕೆಇಎಯಲ್ಲಿ ಈಗಾಗಲೇ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.
ಒಳ ಮೀಸಲಾತಿ ಜಾರಿ ಕುರಿತಾಗಿ ಸುಪ್ರೀಂಕೋರ್ಟ್ ನಿರ್ದೇಶನಗಳ ಪ್ರಕಾರ ಕಾಯ್ದೆ ಜಾರಿಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

